Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಬೆಂಗಳೂರು ಪ್ರೀ ರಿಲೀಸ್​ ಇವೆಂಟ್ ಮುಂದಕ್ಕೆ

ಹೈದರಾಬಾದ್​ನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ಪ್ಲ್ಯಾನ್​ ರೂಪಿಸಿತ್ತು. ಆದರೆ, ಕೊವಿಡ್ ಕಾರಣದಿಂದ ಈ ಕಾರ್ಯಕ್ರಮಕ್ಕೆ ಬ್ರೇಕ್​ ಬಿದ್ದಿತ್ತು. ಹೀಗಾಗಿ ಸಕ್ಸಸ್​ ಮೀಟ್​ಅನ್ನು ಹೈದರಾಬಾದ್​ನಲ್ಲಿ ನಡೆಸುವ ಆಲೋಚನೆ ತಂಡಕ್ಕೆ ಇದೆ. 

‘ಆರ್​ಆರ್​ಆರ್​’ ಬೆಂಗಳೂರು ಪ್ರೀ ರಿಲೀಸ್​ ಇವೆಂಟ್ ಮುಂದಕ್ಕೆ
ರಾಮ್​ ಚರಣ್​-ಜ್ಯೂ ಎನ್​ಟಿಆರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 01, 2022 | 12:31 PM

‘ಆರ್​ಆರ್​ಆರ್​’ ಸಿನಿಮಾ (RRR Movie) ಮುಂದಿನ ವಾರ (ಜನವರಿ 7) ತೆರೆಗೆ ಬರುತ್ತಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಸ್​​.ಎಸ್​. ರಾಜಮೌಳಿ (SS Rajamouli) ನಿರ್ದೇಶನದ ಈ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಪ್ರಚಾರಕ್ಕೆ 20 ಕೋಟಿ ರೂಪಾಯಿ ತೆಗೆದಿಟ್ಟಿರುವ ಚಿತ್ರತಂಡ ನಾನಾ ನಗರಗಳಿಗೆ ತೆರಳಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಸುತ್ತಿದೆ. ಈ ಮೊದಲು ಚೆನ್ನೈ ಹಾಗೂ ಮುಂಬೈನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಿದ್ದ ತಂಡ, ಈಗ ಬೆಂಗಳೂರಿನಲ್ಲಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ ಈಗ ಅದು ಮುಂದೂಡಲ್ಪಟ್ಟಿದೆ. 

ಜನವರಿ ಏಳರಂದು ಇಡೀ ವಿಶ್ವಾದ್ಯಂತ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈಗಾಗಲೇ ಟ್ರೇಲರ್​ ಮೂಲಕ ಸಿನಿಮಾ ಗಮನ ಸೆಳೆದಿದೆ. ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ಚಿತ್ರ ರಿಲೀಸ್​ ಆಗುತ್ತಿದೆ. ಅದಕ್ಕೂ ಮೊದಲು ಬೆಂಗಳೂರಿನಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಯಬೇಕಿತ್ತು. ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಕಿಂಗ್​ ಸ್ಟಾರ್​ ಯಶ್, ಶಿವರಾಜ್​ಕುಮಾರ್​, ಉಪೇಂದ್ರ ಹಾಗೂ ಧ್ರುವ ಸರ್ಜಾ ಆಗಮಿಸಬೇಕಿತ್ತು. ಆದರೆ, ಸದ್ಯದ ಮಟ್ಟಿಗೆ ಇದು ಮುಂದೂಡಲ್ಪಟ್ಟಿದೆ.  ನಿರ್ದೇಶಕ ಎಸ್​.ಎಸ್​. ರಾಜಮೌಳಿ, ನಟ ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ನಟಿ ಆಲಿಯಾ ಭಟ್​ ಈ ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆ ಇತ್ತು.

ಹೈದರಾಬಾದ್​ನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ಪ್ಲ್ಯಾನ್​ ರೂಪಿಸಿತ್ತು. ಆದರೆ, ಕೊವಿಡ್ ಕಾರಣದಿಂದ ಈ ಕಾರ್ಯಕ್ರಮಕ್ಕೆ ಬ್ರೇಕ್​ ಬಿದ್ದಿತ್ತು. ಹೀಗಾಗಿ ಸಕ್ಸಸ್​ ಮೀಟ್​ಅನ್ನು ಹೈದರಾಬಾದ್​ನಲ್ಲಿ ನಡೆಸುವ ಆಲೋಚನೆ ತಂಡಕ್ಕೆ ಇದೆ.

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ. ಕೇವಲ ಭಾರತದ ಸೆಟ್​ಗಳಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಇನ್ನು, ಸ್ಟಾರ್​ ನಟರ ದಂಡೇ ಚಿತ್ರದಲ್ಲಿದೆ. ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರು ಕೂಡ ದೊಡ್ಡ ಮೊತ್ತದ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಬಜೆಟ್​ 400 ಕೋಟಿ ರೂಪಾಯಿ ಮೀರಿದೆ. ಈಗ ಚಿತ್ರದ ಪ್ರಚಾರಕ್ಕೆ ನಿರ್ಮಾಪಕ ಡಿ.ವಿ.ವಿ. ದಾನಯ್ಯ ಅವರು  20 ಕೋಟಿ ಖರ್ಚು ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ

‘ಆರ್​ಆರ್​ಆರ್​’ ಚಿತ್ರದಲ್ಲಿ ಆಲಿಯಾ, ಅಜಯ್​ ದೇವಗನ್​ ಅತಿಥಿ ಪಾತ್ರ; ಸತ್ಯ ಬಾಯ್ಬಿಟ್ಟ ರಾಜಮೌಳಿ

Published On - 7:26 am, Sat, 1 January 22

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು