ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು

ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ‘ಭಜರಂಗಿ 2’ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ.

ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು
ಶಿವರಾಜ್​ಕುಮಾರ್​, ಯಶ್​, ಪುನೀತ್​
Follow us
TV9 Web
| Updated By: Digi Tech Desk

Updated on:Oct 29, 2021 | 5:26 PM

ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿದೆ. ಸಿನಿಮಾ ಹೇಗಿರಲಿದೆ ಎಂಬ ಕುತೂಹಲಕ್ಕೆ ಅಕ್ಟೋಬರ್​ 29ರಂದು ಉತ್ತರ ಸಿಗಲಿದೆ. ಇದಕ್ಕೂ ಮೊದಲು ಅದ್ದೂರಿಯಾಗಿ ಚಿತ್ರ ತಂಡ ಪ್ರೀರಿಲೀಸ್​ ಇವೆಂಟ್​ ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಯಶ್​, ಪುನೀತ್​ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳನ್ನು ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಯಶ್​, ಪುನೀತ್​ ಆಗಮಿಸಿದ್ದು ‘ಭಜರಂಗಿ 2’ಗೆ ದೊಡ್ಡ ಬಲ ಸಿಕ್ಕಂತಾಗಿದೆ.

ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ‘ಭಜರಂಗಿ 2’ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರೀ ರಿಲೀಸ್​ ಇವೆಂಟ್​ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಸ್ಟಾರ್​ಗಳ ಸಮಾಗಮನಕ್ಕೆ ಸಾಕ್ಷಿ ಆಗಿತ್ತು. ಶಿವರಾಜ್​ಕುಮಾರ್​, ಅವರ ಸಹೋದರ, ನಟ ಪುನೀತ್​ ರಾಜ್​ಕುಮಾರ್​, ರಾಕಿಂಗ್​ ಸ್ಟಾರ್​ ಯಶ್​, ನಿರ್ದೇಶಕ, ನಟ, ನಿರ್ಮಾಪಕ ರಿಷಬ್​ ಶೆಟ್ಟಿ, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ‘ಭಜರಂಗಿ 2’ ನಿರ್ದೇಶಕ ಎ. ಹರ್ಷ, ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಆಗಮಿಸಿದ್ದರು.

ಮೊದಲಿಗೆ ಮಾತನಾಡಿದ ಪುನೀತ್​ ರಾಜ್​ಕುಮಾರ್​ ಸಿನಿಮಾ ಗೆಲ್ಲುತ್ತದೆ ಎನ್ನುವ ಭರವಸೆ ವ್ಯಕ್ತಪಡಿಸಿದರು. ‘ಶಿವರಾಜ್​ಕುಮಾರ್​ ಸೇರಿ ಎಲ್ಲರೂ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಒಂದೊಳ್ಳೆಯ ಪ್ರೊಡಕ್ಷನ್ ಹೌಸ್. ಸಿನಿಮಾ ಒಳ್ಳೆಯ ಸಕ್ಸಸ್​ ಕಾಣಲಿ’ ಎಂದು ಹಾರೈಸಿದರು.

ಯಶ್​ ಕೂಡ ಸಿನಿಮಾ ಟ್ರೇಲರ್ ನೋಡಿದ್ದು ಮೆಚ್ಚುಗೆಯ ಮಾತುಗಳನ್ನು ಆಡಿದರು. ‘ಸಿನಿಮಾದ ಟ್ರೇಲರ್​ ಅದ್ಭುತವಾಗಿ ಮೂಡಿ ಬಂದಿದೆ. ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದು ಹಾರೈಸಿದರು.

ಹಲವು ಕಾರಣಗಳಿಗಾಗಿ ‘ಭಜರಂಗಿ 2’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ.

ಈ ಸಿನಿಮಾದಲ್ಲಿ ಹಿರಿಯ ನಟಿ ಶ್ರುತಿ, ಭಜರಂಗಿ ಲೋಕಿ, ಭಾವನಾ ಮೆನನ್​, ಶಿವರಾಜ್​ ಕೆ.ಆರ್​. ಪೇಟೆ, ಚೆಲುವ ರಾಜು ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: Shiva Rajkumar: ಯಶ್​ರನ್ನು ಹಾಡಿಹೊಗಳಿದ ಶಿವಣ್ಣ; ವಿಡಿಯೋ ನೋಡಿ

‘ಎಲ್ಲರೂ ಒಟ್ಟಾಗಿ, ಪ್ರೀತಿಯಿಂದ ಇರೋಣ’; ಸ್ಯಾಂಡಲ್​ವುಡ್​ ಮಂದಿಗೆ ಯಶ್​ ನೀಡಿದ್ರು ಕರೆ

Published On - 2:37 pm, Wed, 27 October 21

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್