AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಫ್ಯಾನ್ಸ್ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ನಟ ಸಾಂತ್ವನ ಹೇಳಬೇಕು ಎಂದು ಪಟ್ಟು ಹಿಡಿದ ಅಭಿಮಾನಿಗಳು

ಯಶ್ ಬರ್ತ್​ಡೇ ಆಚರಿಸಲು ಹಲವರು ಸಿದ್ಧತೆ ಮಾಡಿಕೊಂಡಿದ್ದರು. ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿದೆ. ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಶ್ ಫ್ಯಾನ್ಸ್ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ನಟ ಸಾಂತ್ವನ ಹೇಳಬೇಕು ಎಂದು ಪಟ್ಟು ಹಿಡಿದ ಅಭಿಮಾನಿಗಳು
ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 08, 2024 | 10:53 AM

Share

ಯಶ್ (Yash) ಅಭಿಮಾನಿಗಳಿಗೆ ಇಂದು (ಜನವರಿ 8) ಖುಷಿಯ ದಿನ. ಇಂದು ರಾಕಿಂಗ್ ಸ್ಟಾರ್ ಬರ್ತ್​ಡೇ. ಅನೇಕ ಕಡೆಗಳಲ್ಲಿ ಯಶ್ ಬರ್ತ್​ಡೇ ಆಚರಿಸಲಾಗುತ್ತಿದೆ. ಈ ದಿನವೇ ಒಂದು ದುರ್ಘಟನೆ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್​ಡೇ ಬ್ಯಾನರ್​ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದಾರೆ. ಈ ಬೆನ್ನಲ್ಲೇ ಯಶ್ ಅವರು ಗದಗಕ್ಕೆ ಭೇಟಿ ನೀಡಿ ಮೃತರ ಕುಟುಂಬದವರನ್ನು ಮಾತನಾಡಿಸಬೇಕು ಎನ್ನುವ ಆಗ್ರಹ ಜೋರಾಗಿದೆ.

ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಅವರು ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಯಶ್ ಬರ್ತ್​ಡೇ ಆಚರಿಸಲು ಇವರು ಸಿದ್ಧತೆ ಮಾಡಿಕೊಂಡಿದ್ದರು. ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿದೆ. ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಎಂಬ ಆಗ್ರಹ ಕೇಳಿ ಬಂದಿದೆ. ‘ಯಶ್ ನಮ್ಮೂರಿಗೆ ಬರಬೇಕು. ಬಂದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು’ ಎಂದು ಮೃತ ಯುವಕರ ಗೆಳೆಯ ಪ್ರಕಾಶ ಮ್ಯಾಗೇರಿ ಆಗ್ರಹಿಸಿದ್ದಾರೆ. ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಗಾಯಾಳುಗಳ ಜೊತೆ ಮಾತನಾಡಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: ಯಶ್​ ಬರ್ತ್​​ಡೇಗೆ ವಿಶ್ ತಿಳಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’; ಹೇಗಿದೆ ನೋಡಿ ಪೋಸ್ಟ್

ಯಶ್ ಅವರು ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಬರ್ತ್​ಡೇ ದಿನ ಅವರು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಇಂದು ಅಭಿಮಾನಿಗಳನ್ನು ಭೇಟಿ ಮಾಡುವುದಿಲ್ಲ ಎಂದು ಅವರು ಹೇಳಿದ್ದರು. ಯಶ್ ಅವರ ಕಡೆಯಿಂದ ಕೊನೆಯಪಕ್ಷ ಒಂದು ಟ್ವೀಟ್ ಆದರೂ ಬರಲಿ ಎಂದು ಅನೇಕರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ