Yash: ‘ಹೋಗಲೇ, ಇವನೊಬ್ಬ ಬಾಕಿ ಇದ್ದ’: ಬ್ಯಾಡ್​ ಬಾಯ್​ ಎಂದು ಆರೋಪಿಸಿದ ಮಗನಿಗೆ ಯಶ್​ ಪ್ರೀತಿಯ ಆವಾಜ್​

Yatharv Yash Viral Video: ಯಶ್​ ಮತ್ತು ಯಥರ್ವ್​ ಮಾತನಾಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 10 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Yash: ‘ಹೋಗಲೇ, ಇವನೊಬ್ಬ ಬಾಕಿ ಇದ್ದ’: ಬ್ಯಾಡ್​ ಬಾಯ್​ ಎಂದು ಆರೋಪಿಸಿದ ಮಗನಿಗೆ ಯಶ್​ ಪ್ರೀತಿಯ ಆವಾಜ್​
ಯಥರ್ವ್, ಯಶ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 17, 2022 | 12:07 PM

‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಸಂಪೂರ್ಣವಾಗಿ ಕುಟುಂಬಕ್ಕೆ ಸಮಯ ಮೀಸಲಿಡುತ್ತಾರೆ. ಪತ್ನಿ ರಾಧಿಕಾ ಪಂಡಿತ್​ (Radhika Pandit), ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಜೊತೆ ಅವರು ಕಾಲ ಕಳೆಯುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ರಾಧಿಕಾ ಪಂಡಿತ್​ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ. ಅವುಗಳಿಗೆ ಅಭಿಮಾನಿಗಳ ಕಡೆಯಿಂದ ಭರಪೂರ ಲೈಕ್ಸ್​ ಸಿಗುತ್ತದೆ. ಅಂಥ ಅನೇಕ ವಿಡಿಯೋಗಳು ವೈರಲ್​ ಆಗಿವೆ. ಈಗ ರಾಧಿಕಾ ಪಂಡಿತ್​ ಅವರು ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ‘ಅಪ್ಪ ಬ್ಯಾಡ್​ ಬಾಯ್​’ ಎಂದು ಯಶ್​ ಬಗ್ಗೆ ಯಥರ್ವ್​ (Yatharv Yash) ಆರೋಪ ಮಾಡಿದ್ದಾನೆ. ಅಪ್ಪ-ಮಗನ ಈ ವಿಡಿಯೋ ಕಂಡು ಫ್ಯಾನ್ಸ್​ ‘ಸಖತ್​ ಕ್ಯೂಟ್​ ಆಗಿದೆ’ ಎನ್ನುತ್ತಿದ್ದಾರೆ.

ರಾಧಿಕಾ ಪಂಡಿತ್​ ಮಡಿಲಲ್ಲಿ ಯಥರ್ವ್​ ಕುಳಿತಿದ್ದಾನೆ. ಸಪ್ಪೆ ಮುಖ ಮಾಡಿಕೊಂಡು ಅಪ್ಪನ ಬಗ್ಗೆ ಆತ ಆರೋಪ ಮಾಡುತ್ತಿದ್ದಾನೆ. ‘ಅಮ್ಮ ಗುಡ್​ ಗರ್ಲ್​, ಅಪ್ಪ ಬ್ಯಾಡ್​ ಬಾಯ್​’ ಎಂಬುದು ಯಥರ್ವ್​ ಆರೋಪ. ಮಗನಿಂದ ‘ಗುಡ್​ ಬಾಯ್​’ ಎಂದು ಕರೆಸಿಕೊಳ್ಳಬೇಕು ಎಂದು ಯಶ್​ ಸಖತ್​ ಪ್ರಯತ್ನ ಮಾಡಿದ್ದಾರೆ. ಆದರೂ ಯಥರ್ವ್​ ತನ್ನ ಅಭಿಪ್ರಾಯ ಬದಲಾಯಿಸಿಲ್ಲ. ಎಷ್ಟೇ ಮನವಿ ಮಾಡಿಕೊಂಡರೂ ಕೂಡ ‘ಅಪ್ಪ ಬ್ಯಾಡ್ ಬಾಯ್​’ ಎಂಬ ವಾದವನ್ನೇ ಆತ ಪದೇ ಪದೇ ಮುಂದಿಟ್ಟಿದ್ದಾನೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಮಗನಿಂದ ‘ಗುಡ್​ ಬಾಯ್​’ ಎಂದು ಹೇಳಿಸಿಕೊಳ್ಳಲು ಸಾಧ್ಯವಾಗದೇ ಯಶ್​ ಸೋತಿದ್ದಾರೆ. ಇದರಿಂದ ಅವರಿಗೆ ಹುಸಿ ಕೋಪ ಬಂದಿದೆ. ‘ಹೋಗಲೇ.. ಬಂದ್ಬಿಟ್ಟ.. ಇವನೊಬ್ಬ ಬಾಕಿ ಇದ್ದ’ ಎಂದು ಮಗನಿಗೆ ಯಶ್​ ಪ್ರೀತಿಯಿಂದ ಆವಾಜ್​ ಹಾಕಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡಿರುವ ರಾಧಿಕಾ ಪಂಡಿತ್​ ಅವರು, ‘ತೀರ್ಪು ಹೊರಬಿದ್ದಿದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ 10 ಲಕ್ಷಕ್ಕೂ ಅಧಿಕ ಬಾರಿ ಈ ವಿಡಿಯೋ ವೀಕ್ಷಣೆ ಕಂಡಿದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸಿನ ಬಳಿಕ ಯಶ್​ ಅವರು ಕುಟುಂಬದ ಜತೆ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಅವರು ಹೊಸ ಸಿನಿಮಾ ಬೇಗ ಅನೌನ್ಸ್​ ಮಾಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ಕೂಡ ಕಮ್​ಬ್ಯಾಕ್​ ಮಾಡಬೇಕು ಎಂಬುದು ಅಭಿಮಾನಿಗಳ ಹಂಬಲ.

Published On - 12:07 pm, Sun, 17 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ