Yash: ‘ಅಪ್ಪನಿಗಿಂತ ನಾನೇ ಗಟ್ಟಿ’: ಯಶ್​ ಬಾಡಿ ಬಗ್ಗೆ ಪುತ್ರ ಯಥರ್ವ್​ ಮಾತಾಡಿದ ಕ್ಯೂಟ್​ ವಿಡಿಯೋ ವೈರಲ್​

Yash son Yatharv | Yash Children: ಅಪ್ಪ-ಮಗನ ಈ ವಿಡಿಯೋಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಜನರು ಇದನ್ನು ಲೈಕ್​ ಮಾಡಿದ್ದಾರೆ.

Yash: ‘ಅಪ್ಪನಿಗಿಂತ ನಾನೇ ಗಟ್ಟಿ’: ಯಶ್​ ಬಾಡಿ ಬಗ್ಗೆ ಪುತ್ರ ಯಥರ್ವ್​ ಮಾತಾಡಿದ ಕ್ಯೂಟ್​ ವಿಡಿಯೋ ವೈರಲ್​
ಯಥರ್ವ್, ಯಶ್
Follow us
ಮದನ್​ ಕುಮಾರ್​
|

Updated on: Feb 05, 2023 | 12:42 PM

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್ (Yash)​ ಅವರು ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ. ಆ ಕಾರಣಕ್ಕಾಗಿ ಅವರನ್ನು ಅಭಿಮಾನಿಗಳು ಸಖತ್​ ಇಷ್ಟಪಡುತ್ತಾರೆ. ‘ಕೆಜಿಎಫ್​: ಚಾಪ್ಟರ್​ 2’ ಯಶಸ್ಸಿನ ನಂತರ ‘ರಾಕಿಂಗ್​ ಸ್ಟಾರ್​’ ನಟಿಸಲಿರುವ ಹೊಸ ಸಿನಿಮಾ ಯಾವುದು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಈ ಗ್ಯಾಪ್​ನಲ್ಲಿ ಯಶ್​ ಅವರು ತಮ್ಮ ಮಕ್ಕಳ ಜೊತೆ ಸಮಯ ಕಳೆಯುತ್ತಿದ್ದಾರೆ. ಪುತ್ರ ಯಥರ್ವ್​ (Yatharv Yash) ಜೊತೆ ಯಶ್​ ನಡೆಸಿದ ಒಂದು ಮುದ್ದಾದ ಮಾತುಕತೆಯ ವಿಡಿಯೋ ಈಗ ವೈರಲ್​ ಆಗಿದೆ. ತಮ್ಮಿಬ್ಬರಲ್ಲಿ ಯಾರ ತೋಳು ಗಟ್ಟಿಯಾಗಿದೆ ಎಂಬ ಕುರಿತು ಯಶ್​ ಮತ್ತು ಯಥರ್ವ್​ ಚರ್ಚೆ ಮಾಡಿದ್ದಾರೆ. ‘ಅಪ್ಪನಿಗಿಂತ ನಾನೇ ಗಟ್ಟಿ’ ಎಂದು ಯಥರ್ವ್​ ಬೀಗಿದ್ದಾನೆ. ಈ ಮುದ್ದಾದ ವಿಡಿಯೋವನ್ನು ಸ್ವತಃ ಯಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಯಶ್​ ಅವರ ತೋಳನ್ನು ಮುಟ್ಟುವ ಯಥರ್ವ್​ ‘ತುಂಬ ಸಾಫ್ಟ್​ ಆಗಿದೆ’ ಎನ್ನುತ್ತಾನೆ. ತನ್ನ ತೋಳು ತೋರಿಸಿ ‘ತುಂಬ ಗಟ್ಟಿಯಾಗಿದೆ’ ಎನ್ನುತ್ತಾನೆ. ಮಗನ ಈ ಮಾತು ಕೇಳಿ ಯಶ್​ಗೆ ಅಚ್ಚರಿ. ‘ಸೂಪರ್​ ಮಗನೆ, ನೀನೇ ಎಲ್ಲರಿಗಿಂತ ಸ್ಟ್ರಾಂಗ್​’ ಎಂದು ಅವರು ಪುತ್ರನ ಬೆನ್ನು ತಟ್ಟುತ್ತಾರೆ. ಅಪ್ಪ-ಮಗನ ಈ ವಿಡಿಯೋಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಜನರು ಇದನ್ನು ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಇದನ್ನೂ ಓದಿ: Yash: ‘ಹೋಗಲೇ, ಇವನೊಬ್ಬ ಬಾಕಿ ಇದ್ದ’: ಬ್ಯಾಡ್​ ಬಾಯ್​ ಎಂದು ಆರೋಪಿಸಿದ ಮಗನಿಗೆ ಯಶ್​ ಪ್ರೀತಿಯ ಆವಾಜ್​

ಸೋಶಿಯಲ್​ ಮೀಡಿಯಾದಲ್ಲಿ ಯಶ್​ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ತಮ್ಮ ಫ್ಯಾಮಿಲಿಯ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ ಕುಟುಂಬದ ಸದಸ್ಯರ ಜೊತೆ ಸಂಕ್ರಾಂತಿ ಆಚರಿಸಿದ ಫೋಟೋಗಳನ್ನು ಅವರು ಶೇರ್​ ಮಾಡಿಕೊಂಡಿದ್ದರು. ಮಗ ಯಥರ್ವ್​ ಹಾಗೂ ಮಗಳು ಆಯ್ರಾ ಮಾಡುವ ತುಂಟಾಟದ ವಿಡಿಯೋಗಳನ್ನು ಅವರು ಅಭಿಮಾನಿಗಳ ಮುಂದಿಡುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಯಶ್​ ಅವರನ್ನು 1.3 ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

View this post on Instagram

A post shared by Yash (@thenameisyash)

ಯಶ್​ ಅವರು ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಯಶ್​ ಮೇಲೆ ಅಭಿಮಾನಿಗಳು ಇಟ್ಟಿರುವ ನಿರೀಕ್ಷೆ ತುಂಬ ದೊಡ್ಡದಾಗಿದೆ. ಅದಕ್ಕೆ ತಕ್ಕಂತೆಯೇ ಯಶ್​ ಅವರು ಮುಂದಿನ ಹೆಜ್ಜೆ ಇಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಇನ್ನೂ ಸ್ವಲ್ಪ ಸಮಯ ಬೇಕು ಎಂದು ಅವರು ಇತ್ತೀಚೆಗೆ ತಿಳಿಸಿದ್ದರು. ಆದಷ್ಟು ಬೇಗ ಹೊಸ ಸಿನಿಮಾ ಅನೌನ್ಸ್​ ಆಗಲಿ ಎಂಬುದು ಅಭಿಮಾನಿಗಳ ಬಯಕೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ