AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Releasing in Japan: ಜಪಾನ್​ನಲ್ಲಿ ‘ಕೆಜಿಎಫ್’, ‘ಕೆಜಿಎಫ್ 2’ ರಿಲೀಸ್; ಜಪಾನಿ ಭಾಷೆಯಲ್ಲಿ ಮಾತನಾಡಿದ ಯಶ್

ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈಗ ‘ಕೆಜಿಎಫ್ 1’ ಹಾಗೂ ‘ಕೆಜಿಎಫ್ 2’ ಚಿತ್ರ ಜಪಾನಿ ಭಾಷೆಗೆ ಡಬ್ ಆಗಿ ಅಲ್ಲಿನ ಥಿಯೇಟರ್​ನಲ್ಲಿ ಬಿಡುಗಡೆ ಆಗುತ್ತಿದೆ.

KGF Releasing in Japan: ಜಪಾನ್​ನಲ್ಲಿ ‘ಕೆಜಿಎಫ್’, ‘ಕೆಜಿಎಫ್ 2’ ರಿಲೀಸ್; ಜಪಾನಿ ಭಾಷೆಯಲ್ಲಿ ಮಾತನಾಡಿದ ಯಶ್
ಯಶ್​
ರಾಜೇಶ್ ದುಗ್ಗುಮನೆ
|

Updated on:Jul 07, 2023 | 12:10 PM

Share

ರಾಕಿಂಗ್ ಸ್ಟಾರ್​ ಯಶ್​ಗೆ (Yash) ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣಕ್ಕೆ ‘ಕೆಜಿಎಫ್ 2’ ಸಿನಿಮಾ ಹಲವು ರಾಷ್ಟ್ರಗಳಲ್ಲಿ ರಿಲೀಸ್ ಆಗಿತ್ತು. ಈಗ ಅವರ ನಟನೆಯ ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಸಿನಿಮಾ (KGF Chapter 2) ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ. ಈ ಕುರಿತಂತೆ ಅವರು ವಿಡಿಯೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲಿರುವ ಅಭಿಮಾನಿಗಳ ಬಳಿ ಅವರು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಜಪಾನಿ ಭಾಷೆಯಲ್ಲಿ ಅವರು ಮಾತನಾಡಿದ್ದಾರೆ ಅನ್ನೋದು ವಿಶೇಷ. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ.

ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರ ವೃತ್ತಿಬದುಕನ್ನೇ ಬದಲಿಸಿದ್ದು ‘ಕೆಜಿಎಫ್ 2’ ಸಿನಿಮಾ. ಈ ಚಿತ್ರ ರಿಲೀಸ್ ಆಗಿ ವರ್ಷ ಕಳೆದಿದೆ. ಆದಾಗ್ಯೂ ಅವರ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಹೀಗಿರುವಾಗಲೇ ‘ಕೆಜಿಎಫ್ 1’ ಹಾಗೂ ‘ಕೆಜಿಎಫ್ 2’ ಚಿತ್ರ ಜಪಾನಿ ಭಾಷೆಗೆ ಡಬ್ ಆಗಿ ಅಲ್ಲಿನ ಥಿಯೇಟರ್​ನಲ್ಲಿ ಬಿಡುಗಡೆ ಆಗುತ್ತಿದೆ. ಈ ಮೂಲಕ ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಲಿದೆ.

ಈ ಬಗ್ಗೆ ವಿಡಿಯೋ ಮಾಡಿರುವ ಯಶ್​ ಆರಂಭದಲ್ಲಿ ಜಪಾನಿ ಭಾಷೆಯಲ್ಲಿ ಮಾತನಾಡಿದ್ದಾರೆ. ‘ನಮಸ್ತೆ ಜಪಾನ್. ನನ್ನ ‘ಕೆಜಿಎಫ್ 1’ ಹಾಗೂ ‘ಕೆಜಿಎಫ್ 2’ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ. ‘ಕೆಜಿಎಫ್’ ಸಿನಿಮಾದಲ್ಲಿ ಸಾಕಷ್ಟು ಮನರಂಜನೆ ಹಾಗೂ ಆ್ಯಕ್ಷನ್ ಇದೆ. ಮ್ಯಾಡ್​ನೆಸ್ ಕೂಡ ಇದೆ. ತಪ್ಪದೇ ಸಿನಿಮಾ ನೋಡಿ’ ಎಂದು ಕೋರಿದ್ದಾರೆ.

ಜಪಾನ್​​ನಲ್ಲಿ ಭಾರತೀಯ ಸಿನಿಮಾಗಳಿಗೆ ಬೇಡಿಕೆ ಹೆಚ್ಚಿದೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ಜಪಾನ್ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಜುಲೈ 14ಕ್ಕೆ ‘ಪಠಾಣ್’ ಸಿನಿಮಾ ಜಪಾನ್​ನಲ್ಲಿ ತೆರೆಗೆ ಬರುತ್ತಿದೆ. ಈ ವಿಚಾರ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: Mahesh Babu: ಅಂದು ಯಶ್​, ಈಗ ಮಹೇಶ್​ ಬಾಬು; ರೇಂಜ್​ ರೋವರ್​ ಕಾರು ಖರೀದಿಸಿದ ಸೂಪರ್​ ಸ್ಟಾರ್ಸ್​

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಕೂಡ ಜಪಾನ್​ನಲ್ಲಿ ಬಿಡುಗಡೆ ಆಗಲು ರೆಡಿ ಆಗಿದೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಈಗ ‘ಕೆಜಿಎಫ್’ ಸಿನಿಮಾ ಕೂಡ ಇದೇ ಸಾಲಿಗೆ ಸೇರುತ್ತಿದೆ. ಜಪಾನ್ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿರುವ ಮೊದಲ ಕನ್ನಡ ಸಿನಿಮಾ ಇದು ಎಂಬುದು ವಿಶೇಷ.

‘ಕೆಜಿಎಫ್’ ಸರಣಿಯಲ್ಲಿ ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್ ಮೊದಲಾದ ಕಲಾವಿದರು ನಟಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:25 am, Fri, 7 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More