AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯಲ್ಲಿ 2 ದಿನಕ್ಕೆ 100 ಕೋಟಿ ರೂ. ಕಲೆಕ್ಷನ್​ ಮಾಡಿದ ‘ಕೆಜಿಎಫ್​ 2’ ಚಿತ್ರ; ಇಲ್ಲಿದೆ ಪಕ್ಕಾ ಲೆಕ್ಕ

KGF 2 Box Office Collection: ಹಿಂದಿ ಪ್ರೇಕ್ಷಕರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಫಿದಾ ಆಗಿದ್ದಾರೆ. ಹಿಂದಿ ವರ್ಷನ್​ನಿಂದ ಈ ಚಿತ್ರ ಕೇವಲ 2 ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದೆ.

ಹಿಂದಿಯಲ್ಲಿ 2 ದಿನಕ್ಕೆ 100 ಕೋಟಿ ರೂ. ಕಲೆಕ್ಷನ್​ ಮಾಡಿದ ‘ಕೆಜಿಎಫ್​ 2’ ಚಿತ್ರ; ಇಲ್ಲಿದೆ ಪಕ್ಕಾ ಲೆಕ್ಕ
ಯಶ್
TV9 Web
| Edited By: |

Updated on:Apr 16, 2022 | 1:41 PM

Share

ನಿರೀಕ್ಷೆಗೂ ಮೀರಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕಲೆಕ್ಷನ್​ (KGF chapter 2 Box Office Collection) ಮಾಡುತ್ತಿದೆ. ಮೊದಲ ದಿನ ಹಿಂದಿ ಮಾರುಕಟ್ಟೆಯಲ್ಲಿ ಬರೋಬ್ಬರಿ 53.95 ಕೋಟಿ ರೂಪಾಯಿ ಗಳಿಸಿದ್ದ ಈ ಚಿತ್ರ ಎರಡನೇ ದಿನಕ್ಕೆ 46.79 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಅಂದರೆ ಹಿಂದಿ ವರ್ಷನ್​ನಿಂದ ಕೇವಲ ಎರಡು ದಿನಕ್ಕೆ ‘ಕೆಜಿಎಫ್​: ಚಾಪ್ಟರ್​ 2’ (KGF chapter 2) ಸಿನಿಮಾ 100.74 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ಜಯಭೇರಿ ಬಾರಿಸಿದೆ. ಉತ್ತರ ಭಾರತದ ಬಹುತೇಕ ಎಲ್ಲ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಅದ್ದೂರಿ ಮೇಕಿಂಗ್​, ಮಾಸ್​ ಡೈಲಾಗ್​, ಯಶ್​ (Yash) ನಟನೆ, ಮಸ್ತ್​ ಆ್ಯಕ್ಷನ್​ ಸನ್ನಿವೇಶ, ಮದರ್​ ಸೆಂಟಿಮೆಂಟ್​, ರೋಚಕ ಟ್ವಿಸ್ಟ್​ ಸೇರಿದಂತೆ ಅನೇಕ ಅಂಶಗಳನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಹಾಗಾಗಿ ‘ಕೆಜಿಎಫ್​ 2’ ಸಿನಿಮಾಗೆ ಬಾಯಿ ಮಾತಿನ ಪ್ರಚಾರ ಸೂಪರ್​ ಆಗಿ ಸಿಗುತ್ತಿದೆ. ಆ ಕಾರಣದಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ.

ಬಾಕ್ಸ್ ಆಫೀಸ್​ ತಜ್ಞ ತರಣ್​ ಆದರ್ಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಕಲೆಕ್ಷನ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲೆರಡು ದಿನದ ಗಳಿಕೆ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ಅಲ್ಲದೇ, ಈ ಕಮಾಯಿಯನ್ನು ಅವರು ಸುನಾಮಿ ಎಂದು ಬಣ್ಣಿಸಿದ್ದಾರೆ. ಶನಿವಾರ (ಏ.16) ಮತ್ತು ಭಾನುವಾರದ (ಏ.17) ಕಲೆಕ್ಷನ್​ ಇನ್ನೂ ಉತ್ತಮವಾಗಿರಲಿದೆ ಎಂದು ಅವರು ಅಂದಾಜಿಸಿದ್ದಾರೆ.

ಬ್ಯಾಕ್​ ಟು ಬ್ಯಾಕ್​ ರಜಾ ದಿನಗಳು ಸಿಕ್ಕಿರುವುದು ‘ಕೆಜಿಎಫ್​: ಚಾಪ್ಟರ್ 2’ ಸಿನಿಮಾಗೆ ಪ್ಲಸ್​ ಪಾಯಿಂಟ್​ ಆಗಿದೆ. ಮೊದಲ ದಿನ ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಬರೋಬ್ಬರಿ 134.5 ಕೋಟಿ ರೂಪಾಯಿ ಗಳಿಸಿತ್ತು. 2ನೇ ದಿನ ಭಾರತದಲ್ಲಿ ಮತ್ತು ವಿಶ್ವಾದ್ಯಂತ ಎಷ್ಟು ಕಲೆಕ್ಷನ್​ ಮಾಡಿದೆ ಎಂಬುದನ್ನು ‘ಹೊಂಬಾಳೆ ಫಿಲ್ಮ್ಸ್​’ ಶೀಘ್ರವೇ ತಿಳಿಸಲಿದೆ. ಈ ಚಿತ್ರದಿಂದ ಯಶ್​ ವೃತ್ತಿ ಜೀವನಕ್ಕೆ ಬಹುದೊಡ್ಡ ಮೈಲೇಜ್​ ಸಿಕ್ಕಿದೆ.

ಇನ್ನೂ ಹಲವು ದಿನಗಳ ಕಾಲ ಗಲ್ಲಾಪೆಟ್ಟಿಗೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಅಬ್ಬರಿಸಲಿದೆ. ಈ ಚಿತ್ರದ ಎದುರಿನಲ್ಲಿ ತಮಿಳಿನ ‘ಬೀಸ್ಟ್​’ ಸಿನಿಮಾ ಮಂಕಾಗಿದೆ. ಪರರಾಜ್ಯಗಳಲ್ಲಿ ಎಲ್ಲರೂ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಗುಣಗಾನ ಮಾಡುತ್ತಿದ್ದಾರೆ. ಪ್ರಶಾಂತ್​ ನೀಲ್​ ಅವರ ಕೆಲಸವನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ಸಿನಿಮಾದಿಂದ ಕನ್ನಡ ಚಿತ್ರರಂಗದ ಗೌರವ ಹೆಚ್ಚಿದೆ.

‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ಯಶ್​ಗೆ ಶ್ರೀನಿಧಿ ಶೆಟ್ಟಿ ಜೋಡಿ ಆಗಿದ್ದಾರೆ. ರಾವ್​ ರಮೇಶ್​, ಪ್ರಕಾಶ್​ ರಾಜ್​, ಮಾಳವಿಕಾ ಅವಿನಾಶ್​, ಸಂಜಯ್​ ದತ್​, ರವೀನಾ ಟಂಡನ್​ ಮುಂತಾದ ಕಲಾವಿದರ ನಟನೆಗೆ ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?

‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

Published On - 1:04 pm, Sat, 16 April 22

Follow Us
TV9 Web
TV9 Web

TV9 Kannada

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ