18ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; 400 ಕೋಟಿ ಕ್ಲಬ್ ಸೇರಲು ಇನ್ನೆಷ್ಟು ಬೇಕು?

ಪ್ರಶಾಂತ್ ನೀಲ್ ಅವರು ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಡುವ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ. ಬಾಲಿವುಡ್ ಮಂದಿ ಕೂಡ ಸಿನಿಮಾವನ್ನು ಸಖತ್ ಇಷ್ಟಪಟ್ಟಿದ್ದಾರೆ.

18ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; 400 ಕೋಟಿ ಕ್ಲಬ್ ಸೇರಲು ಇನ್ನೆಷ್ಟು ಬೇಕು?
‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 02, 2022 | 1:57 PM

‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ (KGF: Chapter 2) ಅಬ್ಬರ ಸದ್ಯಕ್ಕಂತೂ ಕಡಿಮೆ ಆಗುವ ಸೂಚನೆ ಸಿಗುತ್ತಿಲ್ಲ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುತ್ತಿರುವುದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಬಾಲಿವುಡ್​​ನ (Bollywood) ಸ್ಟಾರ್​ ನಟರ ಸಿನಿಮಾ ಎದುರು ಸ್ಯಾಂಡಲ್​ವುಡ್​ ಚಿತ್ರ ಮೇಲುಗೈ ಸಾಧಿಸಿದೆ. ಭಾನುವಾರದ (ಮೇ 1) ಕಲೆಕ್ಷನ್​ ರಿಪೋರ್ಟ್​ ಹೊರಬಿದ್ದಿದ್ದು, ಅಜಯ್​ ದೇವಗನ್ (Ajay Devgn) ಹಾಗೂ ಟೈಗರ್ ಶ್ರಾಫ್ ಸಿನಿಮಾಗಳನ್ನು ಹಿಂದಿಕ್ಕುವಲ್ಲಿ ‘ಕೆಜಿಎಫ್ 2’ ಸಿನಿಮಾ ಯಶಸ್ವಿ ಆಗಿದೆ. ಈ ಮೂಲಕ ಯಶ್ ಸಿನಿಮಾದ ಕಲೆಕ್ಷನ್ 400 ಕೋಟಿ ರೂಪಾಯಿ ಸಮೀಪಿಸಿದೆ.

‘ಕೆಜಿಎಫ್’ ಸಿನಿಮಾ ಬಾಲಿವುಡ್​ನಲ್ಲಿ ಸಖತ್ ಹಿಟ್ ಆಗಿತ್ತು. ಈ ಚಿತ್ರದ ಸೀಕ್ವೆಲ್ ಆಗಿ ತೆರೆಗೆ ಬಂದಿದ್ದು ‘ಕೆಜಿಎಫ್ 2’ ಚಿತ್ರ. ಗರುಡನನ್ನು ಹತ್ಯೆ ಮಾಡಿದ ರಾಕಿ ಹೇಗೆ ತನ್ನ ಅಧಿಪತ್ಯ ಸಾಧಿಸುತ್ತಾನೆ ಅನ್ನೋದನ್ನು ‘ಕೆಜಿಎಫ್ 2’ ಸಿನಿಮಾದಲ್ಲಿ ತೋರಿಸಲಾಗಿದೆ. ಪ್ರಶಾಂತ್ ನೀಲ್ ಅವರು ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಡುವ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ. ಬಾಲಿವುಡ್ ಮಂದಿ ಕೂಡ ಸಿನಿಮಾವನ್ನು ಸಖತ್ ಇಷ್ಟಪಟ್ಟಿದ್ದಾರೆ.

ಭಾನುವಾರ ‘ಕೆಜಿಎಫ್ 2’ ಬಾಲಿವುಡ್​ನಿಂದ 9.27 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 369.58 ಕೋಟಿ ರೂಪಾಯಿ ಆಗಿದೆ. ಈಗ ಈದ್ ಹಬ್ಬದ ಸಮಯ. ಈ ಸಂದರ್ಭದಲ್ಲಿ ಸಿನಿಮಾ ಮತ್ತೂ ಹೆಚ್ಚಿನ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ದಂಗಲ್’ ಚಿತ್ರ ಹಿಂದಿ ಬಾಕ್ಸ್ ಆಫೀಸ್​ನಲ್ಲಿ 387 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಇದನ್ನು, ‘ಕೆಜಿಎಫ್ 2’ ಅನಾಯಾಸವಾಗಿ ಹಿಂದಿಕ್ಕಲಿದೆ. ಶೀಘ್ರವೇ ಈ ಸಿನಿಮಾ ಹಿಂದಿಯಲ್ಲಿ 400 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ.

ಅಜಯ್​ ದೇವಗನ್ ಅವರು ನಟಿಸಿ, ನಿರ್ದೇಶಿಸಿರುವ ‘ರನ್​ವೇ 34’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕೊಂಚ ಚೇತರಿಕೆ ಕಂಡಿದೆ. ಶುಕ್ರವಾರ ಈ ಸಿನಿಮಾ 3 ಕೋಟಿ ರೂಪಾಯಿ ಶನಿವಾರ 5 ಕೋಟಿ ರೂಪಾಯಿ ಹಾಗೂ ಭಾನುವಾರ 7 ಕೋಟಿ ರೂಪಾಯಿ ಗಳಿಸಿದೆ ಎನ್ನಲಾಗಿದೆ.

ಟೈಗರ್​ ಶ್ರಾಫ್ ನಟನೆಯ ‘ಹೀರೋಪಂತಿ 2’ ಚಿತ್ರ ತಕ್ಕ ಮಟ್ಟಿಗೆ ಕಲೆಕ್ಷನ್ ಮಾಡುತ್ತಿದೆ. ಮೊದಲ ದಿನ 6.25 ಕೋಟಿ ರೂಪಾಯಿ, ಎರಡನೇ ದಿನ 4.75 ಕೋಟಿ ರೂಪಾಯಿ ಹಾಗೂ ಮೂರನೇ ದಿನ 4.25 ಕೋಟಿ ಗಳಿಸಲಷ್ಟೇ ಸಿನಿಮಾ ಬಳಿಯಿಂದ ಸಾಧ್ಯವಾಗಿದೆ.

ಇದನ್ನೂ ಓದಿ: 1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ

17ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; ಯಶ್ ಎದುರು ಮಂಕಾದ ಅಜಯ್​ ದೇವಗನ್, ಟೈಗರ್ ಸಿನಿಮಾ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ