ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದ ಸಿನಿಮಾ ‘ಕೆಜಿಎಫ್: ಚಾಪ್ಟರ್ 2’ (KGF Chapter 2) ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ಭಾರತೀಯ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಸ್ಯಾಂಡಲ್ವುಡ್ ಕಡೆಗೆ ತಿರುಗಿ ನೋಡುವಂತೆ ಮಾಡಿದ ಖ್ಯಾತ ಈ ಚಿತ್ರಕ್ಕೆ ಸಲ್ಲುತ್ತದೆ. ಯಶ್ (Yash) ವೃತ್ತಿಜೀವನದ ಅತಿ ದೊಡ್ಡ ಸಿನಿಮಾ ಇದು. ಈ ಚಿತ್ರ ಬಿಡುಗಡೆಯಾಗಿ 100 ದಿನಗಳನ್ನು ಪೂರೈಸಿದೆ. ಈ ಖುಷಿಯನ್ನು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ (Hombale Films) ಸಂಭ್ರಮಿಸಿದೆ. ಇಷ್ಟು ದೊಡ್ಡ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಲಾಗಿದೆ. ‘ಕೆಜಿಎಫ್ 2’ ಚಿತ್ರದ ಪ್ರಮುಖ ತುಣುಕುಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ 100 ದಿನಗಳ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲಾಗಿದೆ. ಇಂಥ ಅಭೂತಪೂರ್ವ ಗೆಲುವಿಗೆ ಕಾರಣರಾದ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.
ಏಪ್ರಿಲ್ 14ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಿಡುಗಡೆ ಆಯಿತು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಕಂಡ ಈ ಚಿತ್ರಕ್ಕೆ ಎಲ್ಲ ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಈ ವರ್ಷ ಬಹುದೊಡ್ಡ ಓಪನಿಂಗ್ ಪಡೆದುಕೊಂಡ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ್ದು. ಈ ಚಿತ್ರದ ಗೆಲುವಿನ ಬಳಿಕ ಯಶ್ ಅಭಿಮಾನಿಗಳ ಸಂಖ್ಯೆ ಹೇರಳವಾಗಿ ಹೆಚ್ಚಿದೆ.
ಬಾಕ್ಸ್ ಆಫೀಸ್ನಲ್ಲಿ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವ ಮಾರುಕಟ್ಟೆಯಲ್ಲಿ ಈ ಚಿತ್ರಕ್ಕೆ 1250 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಕೇವಲ ಹಿಂದಿ ವರ್ಷನ್ನಿಂದಲೇ 434 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಇದು ಬಾಲಿವುಡ್ ಮಂದಿಯನ್ನೂ ನಿಬ್ಬೆರಗಾಗಿಸಿದ ಸಾಧನೆ. ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಈ ಸಿನಿಮಾದಿಂದ ಅತಿ ದೊಡ್ಡ ಗೆಲುವು ಸಿಕ್ಕಿದೆ.
Thank You for scripting and stitching this amazing journey for us. We can still feel the jubilation & reverberation all around us. We promise to keep you enthralled with our next #Monster hit and of our home run!#KGF2 #100MonsterDaysOfKGF2#HombaleFilms pic.twitter.com/WDfHTG7fR6
— Hombale Films (@hombalefilms) July 22, 2022
– Hombale Films (@HombaleFilms) 22 July 2022
‘ಕೆಜಿಎಫ್ 2’ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ. ನಟ ಯಶ್ ಅವರು ನ್ಯಾಷನಲ್ ಸ್ಟಾರ್ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಯಾವುದು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸಿಕ್ಕಾಪಟ್ಟೆ ಆಫರ್ ಬರುತ್ತಿದೆ. ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮುಂದೆ ಬಂದಿವೆ. ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಅವರು ಸಖತ್ ಬ್ಯುಸಿ ಆಗಿದ್ದಾರೆ.
Published On - 12:27 pm, Fri, 22 July 22