‘RRR​’ ಚಿತ್ರದ ಹಿಂದಿ ಕಲೆಕ್ಷನ್​ ಹಿಂದಿಕ್ಕಲು ‘ಕೆಜಿಎಫ್​ 2’ ಸಿನಿಮಾಗೆ ಇನ್ನೆಷ್ಟು ಕೋಟಿ ರೂ. ಬಾಕಿ? ​ಇಲ್ಲಿದೆ ಲೆಕ್ಕ

KGF Chapter 2 Box Office Collection: ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಹಿಂದಿ ಮಾರ್ಕೆಟ್​ನಲ್ಲಿ 6 ದಿನಕ್ಕೆ 238.70 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. 7ನೇ ದಿನವೂ ಭರ್ಜರಿ ಆಟ ಮುಂದುವರಿಸಿದೆ.

‘RRR​’ ಚಿತ್ರದ ಹಿಂದಿ ಕಲೆಕ್ಷನ್​ ಹಿಂದಿಕ್ಕಲು ‘ಕೆಜಿಎಫ್​ 2’ ಸಿನಿಮಾಗೆ ಇನ್ನೆಷ್ಟು ಕೋಟಿ ರೂ. ಬಾಕಿ? ​ಇಲ್ಲಿದೆ ಲೆಕ್ಕ
ಆರ್​ಆರ್​ಆರ್​, ಕೆಜಿಎಫ್ 2
Follow us
TV9 Web
| Updated By: ಮದನ್​ ಕುಮಾರ್​

Updated on: Apr 20, 2022 | 12:32 PM

ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಒಂದು ಬಿರುಗಾಳಿಯ ರೂಪದಲ್ಲಿ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಬಂದಿದೆ. ಮೂಲ ಹಿಂದಿ ಸಿನಿಮಾಗಳೇ ಉತ್ತಮ ಕಲೆಕ್ಷನ್​ ಮಾಡಲು ಕಷ್ಟಪಡುತ್ತಿರುವ ಈ ಸಮಯದಲ್ಲಿ ‘ಕೆಜಿಎಫ್​ 2’ ಚಿತ್ರ ಮಾಡುತ್ತಿರುವ ಸಾಧನೆ ಸಣ್ಣದೇನಲ್ಲ. ಭಾರತೀಯ ಚಿತ್ರರಂಗದಲ್ಲಿ ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಕನ್ನಡದ ನಟ ಯಶ್​ (Yash) ಅವರು ಹಿಂದಿಯ ಯಾವ ಸ್ಟಾರ್​ ಹೀರೋಗಳಿಗೂ ಕಮ್ಮಿ ಇಲ್ಲ ಎಂಬ ಮಟ್ಟಕ್ಕೆ ಇಂದು ಬೆಳೆದು ನಿಂತಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ. ಬಾಲಿವುಡ್​ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಬಂಗಾರದ ಬೆಳೆ ತೆಗೆಯುತ್ತಿದೆ. ಬಿಡುಗಡೆಯಾಗಿ 6 ದಿನ ಕಳೆದರೂ ಈ ಚಿತ್ರದ ಅಬ್ಬರ ಕಮ್ಮಿ ಆಗಿಲ್ಲ. ಪ್ರತಿ ದಿನ ಬಹುಕೋಟಿ ರೂಪಾಯಿ ಕಮಾಯಿ ಮಾಡುತ್ತಲೇ ಮುನ್ನುಗ್ಗುತ್ತಿದೆ. ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಈವರೆಗೆ 238.70 ಕೋಟಿ ರೂಪಾಯಿ ಗಳಿಕೆ ಆಗಿದೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರದ (RRR movie) ಹಿಂದಿ ಕಲೆಕ್ಷನ್​ ಅನ್ನು ಬೀಟ್​ ಮಾಡಲು ಇನ್ನು ಕೆಲವೇ ಕೋಟಿಗಳು ಬಾಕಿ ಇದೆ.

ಹೌದು, ‘ಆರ್​ಆರ್​ಆರ್​’ ಸಿನಿಮಾ ಹಿಂದಿಗೆ ಡಬ್​ ಆಗಿ ಉತ್ತಮ ಕಲೆಕ್ಷನ್​ ಮಾಡಿದೆ. ಆ ಚಿತ್ರ ಬಾಲಿವುಡ್​ ಮಾರ್ಕೆಟ್​ನಲ್ಲಿ ಲೈಫ್​ ಟೈಮ್​ ಗಳಿಕೆ ಮಾಡಿರುವುದು 255 ಕೋಟಿ ರೂಪಾಯಿ. ಆ ದಾಖಲೆ ಮುರಿಯಲು ‘ಕೆಜಿಎಫ್​ 2’ ಚಿತ್ರಕ್ಕೆ ಇನ್ನು 17 ಕೋಟಿ ರೂಪಾಯಿ ಮಾತ್ರ ಬಾಕಿ ಇದೆ. 6 ದಿನಗಳಲ್ಲಿ 238.70 ಕೋಟಿ ರೂಪಾಯಿ ಗಳಿಸಿರುವ ‘ಕೆಜಿಎಫ್​ 2’ ಚಿತ್ರ 7ನೇ ದಿನವೂ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ‘ಆರ್​ಆರ್​ಆರ್​’ ಚಿತ್ರವನ್ನು ಹಿಂದಿಕ್ಕುವುದು ಗ್ಯಾರಂಟಿ.

ಟ್ರೇಡ್​ ಅನಲಿಸ್ಟ್​ ತರಣ್ ಆದರ್ಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹಿಂದಿ ಕಲೆಕ್ಷನ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲ ದಿನ 53.95 ಕೋಟಿ ರೂಪಾಯಿ, ಎರಡನೇ ದಿನ 46.79 ಕೋಟಿ, ಮೂರನೇ ದಿನ 42.90 ಕೋಟಿ, ನಾಲ್ಕನೇ ದಿನ 50.35 ಕೋಟಿ, ಐದನೇ ದಿನ 25.57 ಕೋಟಿ ಹಾಗೂ ಆರನೇ ದಿನ 19.14 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಅವರು ನಟಿಸಿದ್ದಾರೆ. ಉತ್ತರ ಭಾರತದ ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಅಲ್ಲದೇ, ರವೀನಾ ಟಂಡನ್​ ಅವರು ತೆರೆ ಮೇಲೆ ಕಾಣಿಸಿಕೊಂಡಾಗ ಅಭಿಮಾನಿಗಳು ನಾಣ್ಯಗಳನ್ನು ತೂರುತ್ತಿದ್ದಾರೆ. ಜನರು ಈ ಪರಿ ಪ್ರೀತಿ ತೋರಿಸುತ್ತಿರುವುದಕ್ಕೆ ರವೀನಾ ಟಂಡನ್​ ಫುಲ್​ ಖುಷಿ ಆಗಿದ್ದಾರೆ.

ವಿಶ್ವಾದ್ಯಂತ ‘ಕೆಜಿಎಫ್​ 2’ ಸಿನಿಮಾ ಧೂಳೆಬ್ಬಿಸಿದೆ. ಎಲ್ಲ ಭಾಷೆಗಳಿಂದ ಈಗಾಗಲೇ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ. ಚಿತ್ರಕ್ಕೆ ಬಂಡವಾಳ ಹೂಡಿದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಭರ್ಜರಿ ಲಾಭದಲ್ಲಿದೆ. ಯಶ್​ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ಬಹು ದೊಡ್ಡ ಗೆಲುವು ಸಿಕ್ಕಿದೆ. ‘ಕೆಜಿಎಫ್​ 2’ ಸಿನಿಮಾದ ಲೈಫ್​ ಟೈಮ್​ ಕಲೆಕ್ಷನ್​ ಎಷ್ಟಾಗಬಹುದು ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ.

ಇದನ್ನೂ ಓದಿ:

‘ಕೆಜಿಎಫ್​ 2’ನಲ್ಲಿ ರವೀನಾ ಟಂಡನ್​ ಕಂಡು ಥಿಯೇಟರ್​ ಪರದೆಗೆ ದುಡ್ಡು ಎಸೆದ ಫ್ಯಾನ್ಸ್​; ವಿಡಿಯೋ ಹಂಚಿಕೊಂಡ ನಟಿ

ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ