ಕೆಜಿಎಫ್​ 2 ಸಿನಿಮಾ ಅವಧಿ ಬರೋಬ್ಬರಿ 3 ಗಂಟೆ ಇದೆಯಾ? ಕೇಳಿಬರ್ತಿದೆ ಹೊಸ ಗುಸುಗುಸು

2ನೇ ಚಾಪ್ಟರ್​ನಲ್ಲಿ ಹೇಳಬೇಕಾದ ವಿಚಾರಗಳು ಸಾಕಷ್ಟು ಇರುವುದರಿಂದ ಸಹಜವಾಗಿಯೇ ಚಿತ್ರದ ಅವಧಿ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೆಜಿಎಫ್​ 2 ಸಿನಿಮಾ ಅವಧಿ ಬರೋಬ್ಬರಿ 3 ಗಂಟೆ ಇದೆಯಾ? ಕೇಳಿಬರ್ತಿದೆ ಹೊಸ ಗುಸುಗುಸು
ಕೆಜಿಎಫ್​ ಸಿನಿಮಾದಲ್ಲಿ ನಟ ಯಶ್​
Follow us
ಮದನ್​ ಕುಮಾರ್​
|

Updated on: May 06, 2021 | 1:38 PM

ಕೆಜಿಎಫ್​ ಚಾಪ್ಟರ್​ 1 ಸಿನಿಮಾ ಭರ್ಜರಿ ಹಿಟ್​ ಆಗಿದ್ದರಿಂದ ಸಹಜವಾಗಿಯೇ ಚಾಪ್ಟರ್​ 2 ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವಂತಹ ಹೊಸ ಹೊಸ ಸುದ್ದಿಗಳು ಕೇಳಿಬರುತ್ತಿವೆ. ಈ ಚಿತ್ರದಲ್ಲಿ ಬಾಲಿವುಡ್​ನ ಜನಪ್ರಿಯ ಐಟಂ ಡ್ಯಾನ್ಸರ್​ ನೋರಾ ಫತೇಹಿ ಹೆಜ್ಜೆ ಹಾಕಿದ್ದಾರೆ ಎಂಬ ಸುದ್ದಿ ಕೆಲವೇ ದಿನಗಳ ಹಿಂದೆ ಕೇಳಿಬಂದಿತ್ತು. ಈಗ ಚಿತ್ರದ ಅವಧಿ ಬಗ್ಗೆ ಗುಸುಗುಸು ಹರಿದಾಡುತ್ತಿದೆ. ಮೂಲಗಳ ಪ್ರಕಾರ ಈ ಚಿತ್ರದ ಒಟ್ಟು ಅವಧಿ 2 ಗಂಟೆ 52 ನಿಮಿಷ ಎಂದು ಹೇಳಲಾಗುತ್ತಿದೆ.

ರಾಕಿಂಗ್​ ಸ್ಟಾರ್​ ಯಶ್​ ನಟನೆಯ ಈ ಚಿತ್ರದ ಕೆಲಸಗಳು ಇನ್ನೂ ನಡೆಯುತ್ತಿವೆ. ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಬೇಕು ಎಂಬ ಉದ್ದೇಶದಿಂದ ನಿರ್ದೇಶಕ ಪ್ರಶಾಂತ್​ ನೀಲ್​ ಶ್ರಮಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ 16ರಂದು ಕೆಜಿಎಫ್​ 2 ತೆರೆಕಾಣಬೇಕು. ಆದರೆ ಕೊರೊನಾ ವೈರಸ್​ ಹಾವಳಿ ಜೋರಾಗಿರುವುದರಿಂದ ಚಿತ್ರದ ರಿಲೀಸ್​ ದಿನಾಂಕ​ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಸಿನಿಮಾದ ಅವಧಿ ಬಗ್ಗೆ ಹರಿದಾಡುತ್ತಿರುವ ವಿಷಯ ಕೇಳಿದರೆ ಫ್ಯಾನ್ಸ್​ ಥ್ರಿಲ್​ ಆಗುವುದು ಗ್ಯಾರಂಟಿ.

‘ಕೆಜಿಎಫ್​ ಚಾಪ್ಟರ್​ 1’ ಸಿನಿಮಾದ ಅವಧಿ 2 ಗಂಟೆ 35 ನಿಮಿಷ ಆಗಿತ್ತು. ಆದರೆ ‘ಕೆಜಿಎಫ್​ ಚಾಪ್ಟರ್​ 2’ ತುಂಬಾ ದೀರ್ಘವಾಗಿ ಇರಲಿದೆಯಂತೆ. ಅಂದಾಜು ಮೂರು ಗಂಟೆಗಳು ಇರಲಿದೆ ಎಂಬ ಮಾತು ಕೇಳಿಬರುತ್ತಿದೆ. 2ನೇ ಚಾಪ್ಟರ್​ನಲ್ಲಿ ಹೇಳಬೇಕಾದ ವಿಚಾರಗಳು ಸಾಕಷ್ಟು ಇರುವುದರಿಂದ ಸಹಜವಾಗಿಯೇ ಚಿತ್ರದ ಅವಧಿ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಆದರೆ ಚಿತ್ರಕ್ಕೆ ಸೆನ್ಸಾರ್​ ಆಗದ ಹೊರತು ಅವಧಿಯ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವೇ ಇಲ್ಲ. ಈ ಬಗ್ಗೆ ಚಿತ್ರತಂಡ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಯಶ್​ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಆಗಮಿಸಿರುವುದರಿಂದ ಚಿತ್ರದ ತೂಕ ಹೆಚ್ಚಿದೆ. ಬಹುಭಾಷಾ ನಟ ಪ್ರಕಾಶ್​ ರಾಜ್​ ಕೂಡ ಈ ಬಾರಿ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಇಂಥ ಘಟಾನುಘಟಿ ಕಲಾವಿದರ ಸಂಗಮದಿಂದಾಗಿ ‘ಕೆಜಿಎಫ್​ ಚಾಪ್ಟರ್​ 2’ ಚಿತ್ರ ಹೈಪ್​ ಸೃಷ್ಟಿಸಿದೆ.

ಇದನ್ನೂ ಓದಿ:

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ