AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2 Trailer: ಮಾ.27ಕ್ಕೆ ರಿಲೀಸ್​ ಆಗಲಿದೆ ‘ಕೆಜಿಎಫ್​: ಚಾಪ್ಟರ್​ 2’ ಟ್ರೇಲರ್​

ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಟ್ರೇಲರ್​ ಬಿಡುಗಡೆಗೆ ಚಿತ್ರತಂಡ ದಿನಾಂಕ ನಿಗದಿ ಮಾಡಿದೆ. ಮಾರ್ಚ್​ 27ರಂದು ಟ್ರೇಲರ್​ ರಿಲೀಸ್​ ಮಾಡುವುದಾಗಿ ಅಧಿಕೃತವಾಗಿ ತಿಳಿಸಲಾಗಿದೆ.

KGF Chapter 2 Trailer: ಮಾ.27ಕ್ಕೆ ರಿಲೀಸ್​ ಆಗಲಿದೆ ‘ಕೆಜಿಎಫ್​: ಚಾಪ್ಟರ್​ 2’ ಟ್ರೇಲರ್​
ಕೆಜಿಎಫ್: ಚಾಪ್ಟರ್ 2
TV9 Web
| Updated By: ಮದನ್​ ಕುಮಾರ್​|

Updated on:Mar 03, 2022 | 2:02 PM

Share

ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈ ನಡುವೆ ಟ್ರೇಲರ್​ ರಿಲೀಸ್​ ಮಾಡಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ. ಟ್ರೇಲರ್​ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮಾರ್ಚ್​ 27ರಂದು ‘ಕೆಜಿಎಫ್​ 2’ ಟ್ರೇಲರ್​ (KGF Chapter 2 Trailer) ಲಾಂಚ್​ ಆಗಲಿದೆ. ಈ ಕುರಿತು ‘ಹೊಂಬಾಳೆ ಫಿಲ್ಸ್ಮ್​’ (Hombale Films) ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಟ್ರೇಲರ್​ ಬಿಡುಗಡೆ ಆದ ಬಳಿಕ ನಿರೀಕ್ಷೆ ದುಪ್ಪಟ್ಟಾಗಲಿದೆ. ‘ಕೆಜಿಎಫ್​ 2’ ಸಿನಿಮಾದಿಂದ ಈವರೆಗೆ ಬಿಡುಗಡೆ ಆಗಿರುವುದು ಕೆಲವು ಪೋಸ್ಟರ್​ ಮತ್ತು ಒಂದೇ ಒಂದು ಟೀಸರ್​. ಮುಂದಿನ ಅಪ್​ಡೇಟ್​ ಏನು ಎಂದು ತಿಳಿಯಲು ಅಭಿಮಾನಿಗಳಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಮಾ.27ರಂದು ಸಂಜೆ 6.40ಕ್ಕೆ ಟ್ರೇಲರ್ ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.

ಕನ್ನಡ ಮಾತ್ರವಲ್ಲದೇ ಬಹುಭಾಷೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ರಿಲೀಸ್​ ಆಗಲಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಭರ್ಜರಿ ಪ್ರಚಾರಕಾರ್ಯಕ್ಕೆ ಚಿತ್ರತಂಡ ಪ್ಲ್ಯಾನ್​ ಮಾಡಿಕೊಳ್ಳುತ್ತಿದೆ. ಈ ಚಿತ್ರ ನೋಡಲು ಯಶ್​ ಮತ್ತು ಪ್ರಶಾಂತ್​ ನೀಲ್​ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದ್ದು, ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿಯಾಗಿದೆ. ಆ ನಿರೀಕ್ಷೆಗೆ ತಕ್ಕಂತೆಯೇ ಪ್ರಚಾರ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈಗಾಗಲೇ ಭರದ ಸಿದ್ಧತೆ ನಡೆದಿದೆ.

ವಿಶ್ವಾದ್ಯಂತ ಇರುವ ಚಿತ್ರಮಂದಿರಗಳಲ್ಲಿ ಸ್ಟ್ಯಾಂಡಿ ಮತ್ತು ಪೋಸ್ಟರ್​ಗಳನ್ನು ಪ್ರದರ್ಶಿಸಲು ತಯಾರಿ ನಡೆದಿದೆ. ಈ ಸ್ಟ್ಯಾಂಡಿಗಳು ವಿಶೇಷವಾಗಿ ವಿನ್ಯಾಸಗೊಂಡಿವೆ. ಅವುಗಳ ಝಲಕ್​ ಹೇಗಿದೆ ಎಂದು ತಿಳಿಸಲು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದರಿಂದ ಸಹಜವಾಗಿಯೇ ಅದರ ಎರಡನೇ ಪಾರ್ಟ್​ ಮೇಲೆ ನಿರೀಕ್ಷೆ ಹೆಚ್ಚಿದೆ.

‘ಕೆಜಿಎಫ್​ 2’ ತಮಿಳಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ಕಾಲಿವುಡ್​ನ ಸ್ಟಾರ್​ ನಟ ‘ದಳಪತಿ’ ವಿಜಯ್​ ಅಭಿನಯದ ‘ಬೀಸ್ಟ್​’ ಸಿನಿಮಾ ಕೂಡ ತೆರೆಕಾಣಲಿದೆ. ಈ ಮೊದಲು ಶಾರುಖ್​ ಖಾನ್​ ನಟನೆಯ ‘ಜೀರೋ’ ಚಿತ್ರ ‘ಕೆಜಿಎಫ್​’ ಎದುರು ಬಿಡುಗಡೆ ಆಗಿತ್ತು. ಯಶ್​ ಸಿನಿಮಾ ಅಬ್ಬರದ ಎದುರು ಶಾರುಖ್​ ಚಿತ್ರ ಮಕಾಡೆ ಮಲಗಿತ್ತು. ಈಗ ‘ಕೆಜಿಎಫ್​ 2’ ಜತೆ ಸ್ಪರ್ಧಿಸೋ ಸಿನಿಮಾಗಳಿಗೂ ಹೀಗೆಯೇ ಆಗಲಿದೆ ಎನ್ನುವ ಮಾತು ಅಭಿಮಾನಿಗಳ ವಲಯದಲ್ಲಿ ಕೇಳಿ ಬಂದಿದೆ. ‘ಕೆಜಿಎಫ್​ 2’ ಸಿನಿಮಾದ ಟಿವಿ ಪ್ರಸಾರ ಹಕ್ಕುಗಳನ್ನು ಜೀ ಕನ್ನಡ ವಾಹಿನಿ ಪಡೆದುಕೊಂಡಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ‘ಕೆಜಿಎಫ್​ 2’ ಚಿತ್ರವನ್ನು ಆಯಾ ಭಾಷೆಯ ಜೀ ವಾಹಿನಿ ಪ್ರಸಾರ ಮಾಡಲಿದೆ. ಅದಕ್ಕೂ ಮುನ್ನ ಚಿತ್ರಮಂದಿರದಲ್ಲಿ ಈ ಸಿನಿಮಾ ರಾರಾಜಿಸಲಿದೆ.

ಇದನ್ನೂ ಓದಿ:

‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​

‘ಕೆಜಿಎಫ್​ 2’ ಸಿನಿಮಾ ಡಬ್ಬಿಂಗ್​ ಪೂರ್ಣಗೊಳಿಸಿದ ಶ್ರೀನಿಧಿ ಶೆಟ್ಟಿ

Published On - 11:53 am, Thu, 3 March 22

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!