ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್ 2’ (KGF Chapter 2) ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈ ನಡುವೆ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ. ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮಾರ್ಚ್ 27ರಂದು ‘ಕೆಜಿಎಫ್ 2’ ಟ್ರೇಲರ್ (KGF Chapter 2 Trailer) ಲಾಂಚ್ ಆಗಲಿದೆ. ಈ ಕುರಿತು ‘ಹೊಂಬಾಳೆ ಫಿಲ್ಸ್ಮ್’ (Hombale Films) ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಟ್ರೇಲರ್ ಬಿಡುಗಡೆ ಆದ ಬಳಿಕ ನಿರೀಕ್ಷೆ ದುಪ್ಪಟ್ಟಾಗಲಿದೆ. ‘ಕೆಜಿಎಫ್ 2’ ಸಿನಿಮಾದಿಂದ ಈವರೆಗೆ ಬಿಡುಗಡೆ ಆಗಿರುವುದು ಕೆಲವು ಪೋಸ್ಟರ್ ಮತ್ತು ಒಂದೇ ಒಂದು ಟೀಸರ್. ಮುಂದಿನ ಅಪ್ಡೇಟ್ ಏನು ಎಂದು ತಿಳಿಯಲು ಅಭಿಮಾನಿಗಳಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಮಾ.27ರಂದು ಸಂಜೆ 6.40ಕ್ಕೆ ಟ್ರೇಲರ್ ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.
There is always a thunder before the storm ⚡#KGFChapter2 Trailer on March 27th at 6:40 pm.
Stay Tuned: https://t.co/QxtFZcv8dy@Thenameisyash @prashanth_neel@VKiragandur @hombalefilms @HombaleGroup @duttsanjay @TandonRaveena @SrinidhiShetty7
#KGF2TrailerOnMar27 pic.twitter.com/4TBuGaaUKh— Hombale Films (@hombalefilms) March 3, 2022
ಕನ್ನಡ ಮಾತ್ರವಲ್ಲದೇ ಬಹುಭಾಷೆಯಲ್ಲಿ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ರಿಲೀಸ್ ಆಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭರ್ಜರಿ ಪ್ರಚಾರಕಾರ್ಯಕ್ಕೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಈ ಚಿತ್ರ ನೋಡಲು ಯಶ್ ಮತ್ತು ಪ್ರಶಾಂತ್ ನೀಲ್ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದ್ದು, ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿಯಾಗಿದೆ. ಆ ನಿರೀಕ್ಷೆಗೆ ತಕ್ಕಂತೆಯೇ ಪ್ರಚಾರ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈಗಾಗಲೇ ಭರದ ಸಿದ್ಧತೆ ನಡೆದಿದೆ.
ವಿಶ್ವಾದ್ಯಂತ ಇರುವ ಚಿತ್ರಮಂದಿರಗಳಲ್ಲಿ ಸ್ಟ್ಯಾಂಡಿ ಮತ್ತು ಪೋಸ್ಟರ್ಗಳನ್ನು ಪ್ರದರ್ಶಿಸಲು ತಯಾರಿ ನಡೆದಿದೆ. ಈ ಸ್ಟ್ಯಾಂಡಿಗಳು ವಿಶೇಷವಾಗಿ ವಿನ್ಯಾಸಗೊಂಡಿವೆ. ಅವುಗಳ ಝಲಕ್ ಹೇಗಿದೆ ಎಂದು ತಿಳಿಸಲು ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದರಿಂದ ಸಹಜವಾಗಿಯೇ ಅದರ ಎರಡನೇ ಪಾರ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.
‘ಕೆಜಿಎಫ್ 2’ ತಮಿಳಿಗೂ ಡಬ್ ಆಗಿ ತೆರೆಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ಕಾಲಿವುಡ್ನ ಸ್ಟಾರ್ ನಟ ‘ದಳಪತಿ’ ವಿಜಯ್ ಅಭಿನಯದ ‘ಬೀಸ್ಟ್’ ಸಿನಿಮಾ ಕೂಡ ತೆರೆಕಾಣಲಿದೆ. ಈ ಮೊದಲು ಶಾರುಖ್ ಖಾನ್ ನಟನೆಯ ‘ಜೀರೋ’ ಚಿತ್ರ ‘ಕೆಜಿಎಫ್’ ಎದುರು ಬಿಡುಗಡೆ ಆಗಿತ್ತು. ಯಶ್ ಸಿನಿಮಾ ಅಬ್ಬರದ ಎದುರು ಶಾರುಖ್ ಚಿತ್ರ ಮಕಾಡೆ ಮಲಗಿತ್ತು. ಈಗ ‘ಕೆಜಿಎಫ್ 2’ ಜತೆ ಸ್ಪರ್ಧಿಸೋ ಸಿನಿಮಾಗಳಿಗೂ ಹೀಗೆಯೇ ಆಗಲಿದೆ ಎನ್ನುವ ಮಾತು ಅಭಿಮಾನಿಗಳ ವಲಯದಲ್ಲಿ ಕೇಳಿ ಬಂದಿದೆ. ‘ಕೆಜಿಎಫ್ 2’ ಸಿನಿಮಾದ ಟಿವಿ ಪ್ರಸಾರ ಹಕ್ಕುಗಳನ್ನು ಜೀ ಕನ್ನಡ ವಾಹಿನಿ ಪಡೆದುಕೊಂಡಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ‘ಕೆಜಿಎಫ್ 2’ ಚಿತ್ರವನ್ನು ಆಯಾ ಭಾಷೆಯ ಜೀ ವಾಹಿನಿ ಪ್ರಸಾರ ಮಾಡಲಿದೆ. ಅದಕ್ಕೂ ಮುನ್ನ ಚಿತ್ರಮಂದಿರದಲ್ಲಿ ಈ ಸಿನಿಮಾ ರಾರಾಜಿಸಲಿದೆ.
ಇದನ್ನೂ ಓದಿ:
‘ಕೆಜಿಎಫ್ 2’ ನಟಿ ರವೀನಾ ಟಂಡನ್ಗೆ ಮೋದಿ ಪತ್ರ; ಎಮೋಷನಲ್ ಲೆಟರ್ ಹಂಚಿಕೊಂಡ ರಮಿಕಾ ಸೇನ್
Published On - 11:53 am, Thu, 3 March 22