AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ರಾಮಾಯಣ’ ಸಿನಿಮಾ ಹಂಚಿಕೆ ಮಾಡಲು ರೆಡಿ ಆದ ಯಶ್

ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಅಬ್ಬರಿಸಲಿರುವ 'ರಾಮಾಯಣ' ಸಿನಿಮಾ ನವೆಂಬರ್ 5ರಂದು ರಿಲೀಸ್ ಆಗಲಿದೆ. ಈ ಬಹುಭಾಷಾ ಸಿನಿಮಾದ ನಿರ್ಮಾಣದಲ್ಲಿ ಪಾಲುದಾರರಾಗಿರುವ ಯಶ್, ತಮ್ಮ 'ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್' ಸಂಸ್ಥೆಯ ಮೂಲಕ ಕರ್ನಾಟಕದ ವಿತರಣಾ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸದ್ಯ ಚಿತ್ರರಂಗದಲ್ಲಿ ರಾಮಾಯಣ ಸಿನಿಮಾದ ಹವಾ ಜೋರಾಗಿದೆ.

ಕರ್ನಾಟಕದಲ್ಲಿ ‘ರಾಮಾಯಣ’ ಸಿನಿಮಾ ಹಂಚಿಕೆ ಮಾಡಲು ರೆಡಿ ಆದ ಯಶ್
ಯಶ್Image Credit source: Ramayana
ರಾಜೇಶ್ ದುಗ್ಗುಮನೆ
|

Updated on: Oct 26, 2026 | 2:27 PM

Share

ಮುಖ್ಯಾಂಶಗಳು

  • ರಾವಣನಾಗಿ ಬೆಳ್ಳಿಪರದೆ ಮೇಲೆ ಅಬ್ಬರಿಸಲು ಯಶ್ ರೆಡಿ
  • ನಟನೆಯ ಜೊತೆಗೆ ನಿರ್ಮಾಣ ಮತ್ತು ಕರ್ನಾಟಕದ ಹಂಚಿಕೆ ಹೊಣೆ
  • ನವೆಂಬರ್ 5ಕ್ಕೆ ತೆರೆಗೆ ಬರಲಿದೆ 3ಡಿ ಸಿನಿಮಾ

ಸದ್ಯ ಚಿತ್ರರಂಗದಲ್ಲಿ ‘ರಾಮಾಯಣ’ ಸಿನಿಮಾದ ಹವಾ ಜೋರಾಗಿದೆ. ದಿನದಿಂದ ದಿನಕ್ಕೆ ಈ ಚಿತ್ರದ ಮೇಲಿನ ನಿರೀಕ್ಷೆಗಳು ಹೆಚ್ಚುತ್ತಿವೆ. ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಅದ್ಧೂರಿ ಹಾಗೂ ಬೃಹತ್ ಬಜೆಟ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಇದು ಒಂದಾಗಿದೆ. ಈ ಮಧ್ಯೆ ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಈಗ ಖುಷಿ ಸುದ್ದಿ ಸಿಕ್ಕಿದೆ. ಯಶ್ ಅವರು ಈ ಚಿತ್ರವನ್ನು ಕರ್ನಾಟಕದಲ್ಲಿ ಹಂಚಿಕೆ ಮಾಡಲಿದ್ದಾರೆ ಎಂದು ವರದಿ ಆಗಿದೆ.

‘ರಾಮಾಯಣ’ ಸಿನಿಮಾದಲ್ಲಿ ಯಶ್ ಅವರು ರಾವಣನಾಗಿ ಅಬ್ಬರಿಸಲಿದ್ದಾರೆ. ರಾವಣನ ಶಕ್ತಿಶಾಲಿ ಹಾಗೂ ಗಂಭೀರ ಪಾತ್ರದಲ್ಲಿ ಯಶ್ ಅವರ ನಟನೆ ಮತ್ತು ವಿಭಿನ್ನ ಲುಕ್ ನೋಡಲು ಇಡೀ ಭಾರತೀಯ ಚಿತ್ರರಂಗ ಕಾತರದಿಂದ ಕಾಯುತ್ತಿದೆ. ಅವರ ಈ ಮಾಸ್ ಅವತಾರ ಬೆಳ್ಳಿಪರದೆಯ ಮೇಲೆ ಹೊಸ ಸಂಚಲನ ಸೃಷ್ಟಿಸುವುದು ಖಚಿತ ಎಂದು ಟ್ರೇಲರ್ ನೋಡಿದವರು ಹೇಳುತ್ತಿದ್ದಾರೆ.

ವಿಶೇಷವೆಂದರೆ, ಈ ಬಿಗ್ ಬಜೆಟ್ ಸಿನಿಮಾದಲ್ಲಿ ಯಶ್ ಕೇವಲ ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿಯೂ ಭಾಗಿಯಾಗಿದ್ದಾರೆ. ತಮ್ಮ ‘ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ಅವರು ಈ ಚಿತ್ರದ ನಿರ್ಮಾಣದಲ್ಲಿ ಪ್ರಮುಖ ಪಾಲುದಾರಿಕೆ ವಹಿಸಿಕೊಂಡಿದ್ದು, ನಿರ್ಮಾಣ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ.

ಇದೀಗ ಯಶ್ ಅವರ ‘ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್’ ಸಂಸ್ಥೆಯು ಈ ಸಿನಿಮಾದ ಕರ್ನಾಟಕದ ವಿತರಣೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಜ್ಜಾಗಿದೆ. ವಿತರಣಾ ವಿಭಾಗಕ್ಕೆ ಕಾಲಿಟ್ಟಿರುವ ಯಶ್ ಸಂಸ್ಥೆಯು, ರಾಜ್ಯಾದ್ಯಂತ ಈ ಬಿಗ್ ಬಜೆಟ್ ಚಿತ್ರವನ್ನು ಅತ್ಯಂತ ಅದ್ದೂರಿಯಾಗಿ ಚಿತ್ರಮಂದಿರಗಳಿಗೆ ತರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ‘ರಾಮಾಯಣ’ ಟೀಸರ್, ಟ್ರೈಲರ್​​ನಲ್ಲಿ ಹನುಮಂತನ ಪಾತ್ರ ತೋರಿಸಿಲ್ಲ ಏಕೆ?

ಈ ಬಹುಭಾಷೆಯ ಸಿನಿಮಾವು ಅದ್ಭುತ 3D ತಂತ್ರಜ್ಞಾನದಲ್ಲಿ ನಿರ್ಮಾಣವಾಗಿದ್ದು, ವೀಕ್ಷಕರಿಗೆ ದೃಶ್ಯ ವೈಭವದ ಹೊಸ ಅನುಭವ ನೀಡಲಿದೆ. ನವೆಂಬರ್ 5ರಂದು ಈ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದ್ದು, ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಎರಡನೇ ಭಾಗ 2027 ಅಥವಾ 28ರ ದೀಪಾವಳಿಗೆ ರಿಲೀಸ್ ಆಗಲಿದೆ.

 ಪಾತ್ರವರ್ಗ

ರಾಮಾಯಣ ಸಿನಿಮಾಗೆ ನಿತೇಶ್ ತಿವಾರಿ ಆ್ಯಕ್ಷನ್ ಕಟ್ ಹೇಳಿದರೆ, ನಮಿತ್ ಮಲ್ಹೋತ್ರ ಅವರು ಯಶ್ ಜೊತೆ ಸೇರಿ ನಿರ್ಮಾಣ ಮಾಡಿದ್ದಾರೆ. ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ
ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು
ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?