AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ರಾಜ್ಯಗಳಲ್ಲಿ ‘ಟಾಕ್ಸಿಕ್’ ಬುಕಿಂಗ್ ಓಪನ್ ಆಗಿಲ್ಲ ಏಕೆ? ಇಲ್ಲಿದೆ ಕಾರಣ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ. ಕರ್ನಾಟಕದಲ್ಲಿ ಬುಕಿಂಗ್ ಹೌಸ್‌ಫುಲ್ ಆಗಿದ್ದರೂ, ತೆಲುಗು ರಾಜ್ಯಗಳಲ್ಲಿ ಇನ್ನು ಟಿಕೆಟ್ ಬುಕಿಂಗ್ ಓಪನ್ ಆಗಿಲ್ಲ. ಟಿಕೆಟ್ ದರ ಏರಿಕೆ ಮತ್ತು ಮುಂಜಾನೆ ಶೋ ಅನುಮತಿ ಕುರಿತು ಸರ್ಕಾರಿ ಮಟ್ಟದಲ್ಲಿ ಮಾತುಕತೆ ನಡೆಯುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ತೆಲುಗು ರಾಜ್ಯಗಳಲ್ಲಿ ‘ಟಾಕ್ಸಿಕ್’ ಬುಕಿಂಗ್ ಓಪನ್ ಆಗಿಲ್ಲ ಏಕೆ? ಇಲ್ಲಿದೆ ಕಾರಣ
ಯಶ್
ರಾಜೇಶ್ ದುಗ್ಗುಮನೆ
|

Updated on:Aug 24, 2026 | 9:02 AM

Share

ಮುಖ್ಯಾಂಶಗಳು

  • ತೆಲುಗು ನಾಡಿನಲ್ಲಿ ‘ಟಾಕ್ಸಿಕ್’ ಬುಕಿಂಗ್ ವಿಳಂಬ
  • ಸರ್ಕಾರಿ ಅನುಮತಿಗೆ ಕಾಯುತ್ತಿರುವ ತಂಡ
  • ಇಂದೇ ಸಿಗುತ್ತಾ ಅಭಿಮಾನಿಗಳಿಗೆ ಗುಡ್ ನ್ಯೂಸ್?

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​ಗೆ ಇನ್ನು ಬಾಕಿ ಇರೋದು ಕೇವಲ ಎರಡು ದಿನ ಮಾತ್ರ. ಹಲವು ವರ್ಷಗಳ ಶ್ರಮ ಆಗಸ್ಟ್ 26ರಂದು ಎಲ್ಲರ ಎದುರು ಬರಲಿದೆ. ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ಬುಕಿಂಗ್ ಓಪನ್ ಆಗಿದೆ. ಕರ್ನಾಟಕದಲ್ಲಿ ಬಹುತೇಕ ಶೋಗಳು ಹೌಸ್ ಫುಲ್ ಆಗಿವೆ. ಹೀಗಿರುವಾಗಲೇ ತೆಲುಗು ರಾಜ್ಯಗಳಲ್ಲಿ ಇನ್ನೂ ಬುಕಿಂಗ್ ಓಪನ್ ಆಗಿಲ್ಲ. ಇದಕ್ಕೆ ಕಾರಣ ಏನು ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ.

ಇತ್ತೀಚೆಗೆ ‘ಟಾಕ್ಸಿಕ್’ ತಂಡ ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್ ಈವೆಂಟ್ ಆಯೋಜನೆ ಮಾಡಿತ್ತು. ಇದಕ್ಕೆ ಜನಸಾಗರವೇ ಹರಿದು ಬಂದಿತ್ತು. ಇದು ತೆಲುಗು ರಾಜ್ಯಗಳಲ್ಲಿ ‘ಟಾಕ್ಸಿಕ್’ ಹಾಗೂ ಯಶ್ ಕ್ರೇಜ್ ಅನ್ನು ತೋರಿಸುತ್ತದೆ. ಈಗಾಗಲೇ ಬುಕಿಂಗ್ ಆರಂಭ ಆಗಿದ್ದರೆ ತೆಲುಗು ರಾಜ್ಯಗಳಲ್ಲಿ ಶೋಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿದ್ದವು. ಆದರೆ, ರಿಲೀಸ್​ಗೆ ಎರಡು ದಿನ ಬಾಕಿ ಇರುವಾಗಲೂ ಬುಕಿಂಗ್ ಬಿಟ್ಟಿಲ್ಲ.

ಮೂಲಗಳ ಪ್ರಕಾರ, ಟಿಕೆಟ್ ಬೆಲೆ ಏರಿಕೆ ಬಗ್ಗೆ ಚರ್ಚೆ ಇನ್ನೂ ನಡೆಯುತ್ತಿದೆ ಎಂದು ವರದಿ ಆಗಿದೆ. ಹೌದು, ತೆಲುಗು ರಾಜ್ಯಗಳಲ್ಲಿ ಏಕಾಏಕಿ ಟಿಕೆಟ್ ಬೆಲೆ ಏರಿಕೆ ಮಾಡಲು ಅವಕಾಶವಿಲ್ಲ. ಇನ್ನು ಮುಂಜಾನೆ ಶೋನ ತಾವಾಗಿಯೇ ಮಾಡುವಂತೆ ಇಲ್ಲ. ಇದಕ್ಕೆ ಸರ್ಕಾರದ ಒಪ್ಪಿಗೆ ಬೇಕು. ಈ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಮಾತುಕತೆ ಫಲಪ್ರದವಾದ ಬಳಿಕ ಟಿಕೆಟ್ ಬುಕಿಂಗ್ ಓಪನ್ ಆಗಲಿದೆ.

‘ಟಾಕ್ಸಿಕ್’ ಚಿತ್ರವನ್ನು ತೆಲುಗು ಭಾಗದಲ್ಲಿ ಹಂಚಿಕೆ ಮಾಡುತ್ತಿರುವುದು ದಿಲ್ ರಾಜು. ಅವರಿಗೆ ಸರ್ಕಾರದ ಜೊತೆ ಒಳ್ಳೆಯ ಬಾಂಧವ್ಯ ಇದೆ. ಹೀಗಾಗಿ, ಅವರು ಡೀಲ್​​ ಅನ್ನು ಫೈನಲ್ ಮಾಡುವ ನಿರೀಕ್ಷೆ ಇದೆ. ಈ ವಿಷಯ ಇಂದು ಅಥವಾ ನಾಳೆಯಲ್ಲಿ ಅಂತಿಮ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ದಿಲ್ ರಾಜು ಜೊತೆ ಸಿನಿಮಾ ಮಾಡಲಿದ್ದಾರೆ ಯಶ್, ಆದರೆ ಯಾವಾಗ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿದೆ. ಆಗಸ್ಟ್ 26ರಂದು ಜಾಗತಿಕವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಯಶ್ ಜೊತೆಗೆ ನಯನತಾರಾ, ರುಕ್ಮಿಣಿ, ಕಿಯಾರಾ ಅಡ್ವಾಣಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ್ ಮತ್ತು ಯಶ್ ಈ ಬಿಗ್ ಬಜೆಟ್ ಆಕ್ಷನ್ ಥ್ರಿಲ್ಲರ್ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:01 am, Mon, 24 August 26

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ