AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಹಿಂದಿ ಆವೃತ್ತಿಗೆ ಸಿಬಿಎಫ್‌ಸಿ ಕತ್ತರಿ: ಕೆಲವು ಸಂಭಾಷಣೆ, ಡ್ರಗ್ಸ್ ದೃಶ್ಯಕ್ಕೆ ಆಕ್ಷೇಪ

‘ಟಾಕ್ಸಿಕ್’ ಸಿನಿಮಾದ ಹಿಂದಿ ಆವೃತ್ತಿಗೆ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳ್ಳುವುದು ವಿಳಂಬ ಆಗಿತ್ತು. ಬಿಡುಗಡೆಗೂ ಒಂದು ದಿನ ಮುಂಚೆ ಹಿಂದಿ ವರ್ಷನ್ಸ್​ಗೆ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿದೆ. ಸೆನ್ಸಾರ್ ಮಂಡಳಿಯು ಕೆಲವು ಕಟ್ಸ್ ಹಾಗೂ ತಿದ್ದುಪಡಿಗಳನ್ನು ಸೂಚಿಸಿದ ಬಳಿಕ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

‘ಟಾಕ್ಸಿಕ್’ ಹಿಂದಿ ಆವೃತ್ತಿಗೆ ಸಿಬಿಎಫ್‌ಸಿ ಕತ್ತರಿ: ಕೆಲವು ಸಂಭಾಷಣೆ, ಡ್ರಗ್ಸ್ ದೃಶ್ಯಕ್ಕೆ ಆಕ್ಷೇಪ
Yash
ಮದನ್​ ಕುಮಾರ್​
|

Updated on: Aug 25, 2026 | 8:05 PM

Share

ರಾಕಿ ಭಾಯ್ ಯಶ್ (Yash) ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಆಗಸ್ಟ್ 26ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಚಿತ್ರದ ಮುಂಗಡ ಟಿಕೆಟ್ ಬುಕಿಂಗ್‌ಗೆ ಭರ್ಜರಿ ಪ್ರಕ್ರಿಯೆ ವ್ಯಕ್ತವಾಗುತ್ತಿದೆ. ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಇಂಗ್ಲಿಷ್, ಮಲಯಾಳಂ, ತೆಲುಗು ಭಾಷೆಗಳಲ್ಲಿ ಈ ಚಿತ್ರ ತೆರೆಕಾಣುತ್ತಿದೆ. ಈ ಸಿನಿಮಾದ ಹಿಂದಿ ವರ್ಷನ್​ಗೆ ಕೊನೇ ಹಂತದಲ್ಲಿ ಸೆನ್ಸಾರ್ ಪ್ರಕ್ರಿಯೆ ನಡೆದಿದೆ.

ಆಗಸ್ಟ್ 13ರಂದೇ ಕನ್ನಡದ ಮೂಲ ಆವೃತ್ತಿಯು ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದುಕೊಂಡಿತ್ತು. ಆದರೆ ಹಿಂದಿ ಡಬ್ ಮಾಡಲಾದ ಆವೃತ್ತಿಯ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳ್ಳಲು ಕೊಂಚ ಸಮಯ ತೆಗೆದುಕೊಂಡಿದ್ದು, ಬಿಡುಗಡೆಗೆ ಕೇವಲ ಒಂದು ದಿನ ಬಾಕಿ ಇರುವಾಗ (ಆಗಸ್ಟ್ 25) ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಪ್ರಮಾಣಪತ್ರ ನೀಡಿದೆ.

ಸೆನ್ಸಾರ್ ಮಂಡಳಿಯ ನಿರ್ದೇಶನದಂತೆ ಸಿನಿಮಾದಲ್ಲಿದ್ದ ಕೆಲ ನಿಂದನೀಯ ಪದಗಳನ್ನು ಬದಲಾಯಿಸಲು ಸೂಚಿಸಲಾಗಿದೆ. ಚಿತ್ರದ ಮೊದಲಾರ್ಧದಲ್ಲಿ ಬರುವ ಒಂದು ಆಕ್ಷೇಪಾರ್ಹ ಸಂಭಾಷಣೆ ಹಾಗೂ ದ್ವಿತೀಯಾರ್ಧದಲ್ಲಿ ಮಗುವಿಗೆ ಹೇಳುವ ನಿಂದನೀಯ ಮಾತನ್ನು ಮ್ಯೂಟ್ ಮಾಡಲಾಗಿದೆ. ಅಷ್ಟೇ ಅಲ್ಲದೆ, ಡ್ರಗ್ಸ್ ಬಳಕೆಗೆ ಸಂಬಂಧಿಸಿದ ದೃಶ್ಯದ ಅವಧಿಯನ್ನು ಕಡಿತಗೊಳಿಸಲಾಗಿದೆ.

ದ್ವಿತೀಯಾರ್ಧದಲ್ಲಿ ಬರುವ ಅಶ್ಲೀಲ ಸಂಭಾಷಣೆಯೊಂದನ್ನು ಸಂಪೂರ್ಣವಾಗಿ ಬೇರೆ ಪದದಿಂದ ಬದಲಾಯಿಸಲು ಸೂಚಿಸಲಾಗಿದೆ. ಇನ್ನು ತಮಿಳು ಭಾಷೆಯಲ್ಲಿದ್ದ ಶಾಸನಬದ್ಧ ಎಚ್ಚರಿಕೆಯ ಬರಹವನ್ನು ಹಿಂದಿ ಭಾಷೆಗೆ ಬದಲಾಯಿಸಲಾಗಿದೆ. ಈ ಎಲ್ಲಾ ಬದಲಾವಣೆಗಳ ನಂತರ ಸೆನ್ಸಾರ್ ಮಂಡಳಿಯು ‘ಟಾಕ್ಸಿಕ್’ ಹಿಂದಿ ಆವೃತ್ತಿಗೆ ‘ಎ’ ಪ್ರಮಾಣಪತ್ರ ನೀಡಿದೆ. ಸೆನ್ಸಾರ್ ಪ್ರಮಾಣಪತ್ರದ ಪ್ರಕಾರ ಈ ಚಿತ್ರದ ಒಟ್ಟು ಅವಧಿ 194.12 ನಿಮಿಷಗಳು, ಅಂದರೆ 3 ಗಂಟೆ 14 ನಿಮಿಷ 12 ಸೆಕೆಂಡ್‌ಗಳು.

ಇದನ್ನೂ ಓದಿ: ‘ಟಾಕ್ಸಿಕ್’ ಕಥೆ ಕೇಳಿ ಮೊದಲು ‘ನೋ’ ಎಂದಿದ್ದ ನಯನತಾರಾ; ಬಳಿಕ ಒಪ್ಪಿದ್ದು ಯಾಕೆ?

ಇನ್ನು ತಮಿಳು ಆವೃತ್ತಿಯು ಆಗಸ್ಟ್ 20ರಂದೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿಕೊಂಡಿದ್ದು, ಅದರಲ್ಲಿ ಕೇವಲ ಒಂದೇ ಒಂದು ಆಕ್ಷೇಪಾರ್ಹ ಪದದ ಸಂಭಾಷಣೆಯನ್ನು ಬದಲಾಯಿಸಲು ಸೂಚಿಸಲಾಗಿತ್ತು. ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಅವರೊಂದಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ