ಯಶ್ ಜನ್ಮದಿನಕ್ಕೆ ಸೂಪರ್ ಸರ್ಪ್ರೈಸ್; ಪೋಸ್ಟರ್ ಮೂಲಕ ಅಪ್ಡೇಟ್ ಕೊಟ್ಟ ‘ಟಾಕ್ಸಿಕ್’ ಟೀಂ
‘ರಾಕಿಂಗ್ ಸ್ಟಾರ್’ ಯಶ್ ಅವರ ಜನ್ಮದಿನದಂದು (ಜನವರಿ 8) ‘ಟಾಕ್ಸಿಕ್’ ಚಿತ್ರತಂಡವು ಚಿತ್ರದ ಗ್ಲಿಂಪ್ಸ್ ಬಿಡುಗಡೆ ಮಾಡಲಿದೆ ಎಂದು ಘೋಷಿಸಿದೆ. ಈ ಸುದ್ದಿಯಿಂದ ಅಭಿಮಾನಿಗಳ ಉತ್ಸಾಹ ಹೆಚ್ಚಿದೆ. ಬಿಡುಗಡೆಯಾದ ಪೋಸ್ಟರ್‌ನಲ್ಲಿ ಯಶ್ ವಿಂಟೇಜ್ ಕಾರಿನ ಮೇಲೆ ನಿಂತು, ಸಿಗರೇಟ್ ಸೇದುತ್ತಿರುವ ಭಂಗಿಯಲ್ಲಿ ಕಾಣಿಸಿಕೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಜನ್ಮದಿನ ಸಮೀಪಿಸಿದೆ. ಜನವರಿ 8ರಂದು ಅವರು ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ದಿನದಂದು ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಏನಾದರೂ ಅಪ್ಡೇಟ್ ಸಿಗಬಹುದು ಎಂದು ಫ್ಯಾನ್ಸ್ ನಿರೀಕ್ಷಿಸಿದ್ದರು. ಅದು ನಿಜವಾಗಿದೆ. ಸಿನಿಮಾದ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಈ ಬಗ್ಗೆ ಅಪ್ಡೇಟ್ ಕೊಟ್ಟಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ಗಮನ ಸೆಳೆಯುತ್ತಿದೆ.
ರಾಕಿಂಗ್ ಸ್ಟಾರ್ ಬರ್ತ್ಡೇ ಪ್ರಯುಕ್ತ ಜನವರಿ 8ರ ಬೆಳಿಗ್ಗೆ 10.25ಕ್ಕೆ ಸಿನಿಮಾದ ತುಣುಕನ್ನು ರಿಲೀಸ್ ಮಾಡುವ ಆಲೋಚನೆಯಲ್ಲಿ ‘ಟಾಕ್ಸಿಕ್’ ತಂಡ ಇದೆ. ಅಂದು ದೊಡ್ಡ ಅಪ್ಡೇಟ್ ಸಿಗೋದು ಪಕ್ಕಾ ಎಂದು ಟಾಕ್ಸಿಕ್ ಟೀಂ ತಿಳಿಸಿದೆ. ಈ ವಿಚಾರ ಯಶ್ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ಯಶ್ ಜನ್ಮದಿನದ ಸಂಭ್ರಮ ಈಗ ದ್ವಿಗುಣವಾಗಿದೆ.
Surprises don’t knock .. they are unleashed.#TOXIC #TOXICTheMovie @TheNameIsYash #GeetuMohandas @KVNProductions #MonsterMindCreations @Toxic_themovie pic.twitter.com/Yj3zeg1GXE
— KVN Productions (@KvnProductions) January 6, 2025
View this post on Instagram
ಇದನ್ನೂ ಓದಿ: ಒಂದೇ ಸಿನಿಮಾಕ್ಕೆ ಇಬ್ಬರು ಹಿಟ್ ನಿರ್ದೇಶಕರು: ‘ಟಾಕ್ಸಿಕ್’ ನಿರ್ಮಾಪಕರ ಹೊಸ ಪ್ಲ್ಯಾನ್
ಸದ್ಯ ರಿಲೀಸ್ ಆಗಿರೋ ಪೋಸ್ಟರ್‌ನಲ್ಲಿ ಯಶ್ ಅವರು ಹಳೆಯ ಕಾಲದ ಕಾರಿನ ಮೇಲೆ ನಿಂತಿದ್ದಾರೆ. ಅವರ ಬಾಯಲ್ಲಿ ಸಿಗರೇಟ್ ಇದೆ. ತಲೆಗೆ ಹ್ಯಾಟ್ ಧರಿಸಿದ್ದಾರೆ. ಇದು ಅವರ ಗೆಟಪ್ ಎಂದು ಹೇಳಲಾಗುತ್ತಿದೆ. ಈ ಮೊದಲು ಟೈಟಲ್ ಟೀಸರ್ ಅನೌನ್ಸ್ ಮಾಡುವಾಗಲೂ ಯಶ್ ಅವರು ತಲೆಗೆ ಹ್ಯಾಟ್ ಧರಿಸಿಯೇ ಕಾಣಿಸಿಕೊಂಡಿದ್ದರು. ಇದೇ ಲುಕ್ ಸಿನಿಮಾದಲ್ಲೂ ಮುಂದುವರಿಯಲಿದೆ ಎನ್ನಲಾಗುತ್ತಿದೆ.
‘ಟಾಕ್ಸಿಕ್’ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರು ಕೂಡ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವನ್ನು ಪ್ಯಾನ್ ವರ್ಲ್ಡ್ ರಿಲೀಸ್ ಮಾಡಲು ತಂಡ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಹಾಲಿವುಡ್ ಸ್ಟುಡಿಯೋಗಳ ಜೊತೆಯೂ ಮಾತುಕತೆ ನಡೆಯುತ್ತಿದೆ. ಮಲಯಾಳಂನ ಗೀತು ಮೋಹನ್ದಾಸ್ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:34 am, Mon, 6 January 25