‘ಟಾಕ್ಸಿಕ್’ ಅಪ್​​ಡೇಟ್ ಕೊಟ್ಟ ಯಶ್, ಬಾಕಿ ಇರುವುದು 100 ದಿನ

Toxic movie: ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಯಶ್ ಸಾಕಷ್ಟು ಸಮಯ ಮತ್ತು ಶ್ರಮ ಹಾಕಿ ಸಿನಿಮಾ ನಿರ್ಮಿಸುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾಕ್ಕಾಗಿ ಭಾರಿ ದೊಡ್ಡ ತಂಡವನ್ನೇ ಜೊತೆಗೆ ಸೇರಿಸಿಕೊಂಡಿದ್ದಾರೆ ನಟ ಯಶ್. ಸಿನಿಮಾದ ಚಿತ್ರೀಕರಣದ ಬಗ್ಗೆ ಹೆಚ್ಚಿನ ಅಪ್​​ಡೇಟ್​​ಗಳನ್ನು ಬಿಟ್ಟುಕೊಟ್ಟಿರಲಿಲ್ಲ ಚಿತ್ರತಂಡ. ಇದೀಗ ಹೊಸ ಪೋಸ್ಟರ್ ಒಂದನ್ನು ಚಿತ್ರತಂಡ ಹಂಚಿಕೊಂಡಿದೆ.

‘ಟಾಕ್ಸಿಕ್’ ಅಪ್​​ಡೇಟ್ ಕೊಟ್ಟ ಯಶ್, ಬಾಕಿ ಇರುವುದು 100 ದಿನ
Toxic Movie

Updated on: Dec 09, 2025 | 12:32 PM

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಯಶ್ ಸಾಕಷ್ಟು ಸಮಯ ಮತ್ತು ಶ್ರಮ ಹಾಕಿ ಸಿನಿಮಾ ನಿರ್ಮಿಸುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾಕ್ಕಾಗಿ ಭಾರಿ ದೊಡ್ಡ ತಂಡವನ್ನೇ ಜೊತೆಗೆ ಸೇರಿಸಿಕೊಂಡಿದ್ದಾರೆ ನಟ ಯಶ್. ಸಿನಿಮಾದ ಚಿತ್ರೀಕರಣದ ಬಗ್ಗೆ ಹೆಚ್ಚಿನ ಅಪ್​​ಡೇಟ್​​ಗಳನ್ನು ಬಿಟ್ಟುಕೊಟ್ಟಿರಲಿಲ್ಲ ಚಿತ್ರತಂಡ. ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದ್ದಂತೆ ಒಂದೊಂದಾಗಿ ಅಪ್​ಡೇಟ್​​ಗಳನ್ನು ಹೊರ ಹಾಕುತ್ತಿದೆ. ಈ ಹಿಂದೆ ಸಣ್ಣ ಟೀಸರ್ ಒಂದನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೊಂದು ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

‘ಟಾಕ್ಸಿಕ್’ ಸಿನಿಮಾದ ಹೊಸ ಪೋಸ್ಟರ್ ಅನ್ನು ನಟ ಯಶ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ವ್ಯಕ್ತಿಯೊಬ್ಬ (ಬಹುಷಃ ಯಶ್) ಬಾತ್​​ಟಬ್​​​ನಲ್ಲಿ ಕೂತಿದ್ದಾನೆ, ಆ ಬಾತ್​​ ಟಬ್​​​ನ ಅಂಚುಗಳಲ್ಲಿ ರಕ್ತ ಹರಿಯುತ್ತಿದೆ. ಆ ವ್ಯಕ್ತಿ ರಕ್ತ ತುಂಬಿದ ಬಾತ್​​ಟಬ್​​​ನಲ್ಲಿ ಕೂತಿದ್ದಾನೆ ಎಂಬುದನ್ನು ಚಿತ್ರ ಹೇಳುತ್ತಿದೆ. ಪೋಸ್ಟರ್ ಮೂಲಕ ಯಶ್ ಪಾತ್ರ ‘ಟಾಕ್ಸಿಕ್’ ಸಿನಿಮಾನಲ್ಲಿ ಅತ್ಯಂತ ವಯಲೆಂಟ್ ಪಾತ್ರ ಆಗಿರಲಿದೆ ಎಂಬುದನ್ನು ಸೂಚ್ಯವಾಗಿ ಹೇಳಲಾಗುತ್ತಿದೆ. ಈಗ ಬಿಡುಗಡೆ ಆಗಿರುವ ಪೋಸ್ಟರ್​​ನಲ್ಲಿ ಯಶ್ ಮುಖ ತೋರಿಸಲಾಗಿಲ್ಲ.

ಇದನ್ನೂ ಓದಿ:‘ಟಾಕ್ಸಿಕ್’ಗಾಗಿ ಒಂದಾದ ಎರಡು ದೊಡ್ಡ ಶಕ್ತಿಗಳು; ಯಶ್ ಫ್ಯಾನ್ಸ್​ಗೆ ಹಬ್ಬದೂಟ ಫಿಕ್ಸ್

ಪೋಸ್ಟರ್ ಹಂಚಿಕೊಂಡಿರುವ ನಟ ಯಶ್, ‘ಕಾಲ್ಪನಿಕ ಕಥೆ ಬಿಡುಗಡೆ ಆಗಲು 100 ದಿನ ಬಾಕಿ ಇದೆ’ ಎಂದು ಕ್ಯಾಪ್ಷನ್ ಬರೆದಿದ್ದಾರೆ. ಪೋಸ್ಟರ್​​ನಲ್ಲಿಯೂ ಸಹ ಸಿನಿಮಾ ಬಿಡುಗಡೆಗೆ ಇನ್ನು ನೂರು ದಿನಗಳಷ್ಟೆ ಬಾಕಿ ಇದೆ ಎಂದು ಹೇಳಲಾಗಿದೆ. ಬಿಡುಗಡೆ ಆಗಿರುವ ಪೋಸ್ಟರ್ ಆಸಕ್ತಿಕರವಾಗಿದ್ದು, ಹಾಲಿವುಡ್ ಸಿನಿಮಾಗಳ ಫೀಲ್ ನೀಡುತ್ತಿದೆ. ಯಶ್ ಬೆನ್ನಮೇಲಿನ ಟ್ಯಾಟೂ ಸಹ ಗಮನ ಸೆಳೆಯುತ್ತಿದೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾವನ್ನು ಮಲಯಾಳಂ ನಟಿ, ನಿರ್ದೇಶಕಿ ಗೀತು ಮೋಹನ್​​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಸ್ವತಃ ಯಶ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಇದು ಕರ್ನಾಟಕದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಆಗಿದೆ. ಸಿನಿಮಾನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Tue, 9 December 25