ಗೋವಾದಲ್ಲಿ ‘ಟಾಕ್ಸಿಕ್’ ಸಿನಿಮಾ ಶೂಟ್​ನಲ್ಲಿ ಯಶ್ ಬ್ಯುಸಿ; ಸೆಟ್​ ಫೋಟೋ, ವಿಡಿಯೋ ಲೀಕ್

‘ಕೆಜಿಎಫ್ 2’ ಸಿನಿಮಾ ರಿಲೀಸ್ ಆದ ಬಳಿಕ ಯಶ್ ದೊಡ್ಡ ಬ್ರೇಕ್ ಪಡೆದರು. ಈ ಬ್ರೇಕ್​ನಲ್ಲೂ ತಾವು ಸಿನಿಮಾ ಕೆಲಸದಲ್ಲಿ ಬ್ಯುಸಿ ಇರೋದಾಗಿ ಹೇಳಿದ್ದರು. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಜೊತೆ ಸೇರಿ ಅವರು ‘ಟಾಕ್ಸಿಕ್’ ಸಿನಿಮಾ ಘೋಷಣೆ ಮಾಡಿದರು. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾ ಶೂಟ್ ಮಾಡಲಾಗುತ್ತಿದೆ.

ಗೋವಾದಲ್ಲಿ ‘ಟಾಕ್ಸಿಕ್’ ಸಿನಿಮಾ ಶೂಟ್​ನಲ್ಲಿ ಯಶ್ ಬ್ಯುಸಿ; ಸೆಟ್​ ಫೋಟೋ, ವಿಡಿಯೋ ಲೀಕ್
ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Mar 15, 2024 | 7:34 AM

ರಾಕಿಂಗ್ ಸ್ಟಾರ್ ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾ (Toxic Movie) ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. 2025ರ ಏಪ್ರಿಲ್​ಗೆ ಸಿನಿಮಾನ ರಿಲೀಸ್ ಮಾಡೋ ಟಾರ್ಗೆಟ್​ನ ಇಟ್ಟುಕೊಂಡು ಸಿನಿಮಾ ಶೂಟ್ ಮಾಡಲಾಗುತ್ತಿದೆ. ಈ ಚಿತ್ರದ ಶೂಟ್ ಗೋವಾದಲ್ಲಿ ನಡೆಯುತ್ತಿದೆ ಎನ್ನಲಾಗಿದೆ. ಸೆಟ್​ನ ಫೋಟೋ ಹಾಗೂ ವಿಡಿಯೋಗಳನ್ನು ಕೆಲವರು ಲೀಕ್ ಮಾಡಿದ್ದಾರೆ. ಅಂದಹಾಗೆ ಇದು ಶೂಟಿಂಗ್​ ಹೌದೋ ಅಥವಾ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ. ಫ್ಯಾನ್ಸ್ ಇದು ಸೆಟ್​ನ ವಿಡಿಯೋ ಎಂದೇ ಹೇಳುತ್ತಿದ್ದಾರೆ. ವೈರಲ್ ಆದ ಫೋಟೋದಲ್ಲಿ ಯಶ್ ಕೂಡ ಕಾಣಿಸಿಕೊಂಡಿದ್ದಾರೆ.

‘ಕೆಜಿಎಫ್ 2’ ಬಳಿಕ ಯಶ್ ಅವರು ದೊಡ್ಡ ಬ್ರೇಕ್ ಪಡೆದರು. ಈ ಬ್ರೇಕ್​ನಲ್ಲೂ ತಾವು ಸಿನಿಮಾ ಕೆಲಸದಲ್ಲಿ ಬ್ಯುಸಿ ಇರೋದಾಗಿ ಹೇಳಿದ್ದರು. ನಂತರ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಜೊತೆ ಸೇರಿ ಅವರು ‘ಟಾಕ್ಸಿಕ್’ ಸಿನಿಮಾ ಘೋಷಣೆ ಮಾಡಿದರು. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾ ಶೂಟ್ ಮಾಡಲಾಗುತ್ತಿದೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಡ್ರಗ್ಸ್ ಬಗ್ಗೆ ಇರಲಿದೆಯಂತೆ. ಗೋವಾದಲ್ಲಿ ಸಿನಿಮಾ ಶೂಟ್ ನಡೆಯಲಿದೆ ಎಂದು ವರದಿ ಆಗಿತ್ತು. ಅಂತೆಯೇ ಯಶ್ ಅವರು ಗೋವಾದಲ್ಲಿ ಈ ಚಿತ್ರದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಆರಂಭದಲ್ಲೇ ಸೆಟ್​ನ ಫೋಟೋಗಳು ಲೀಕ್ ಆಗಿರೋದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಮುಂದೆ ಈ ರೀತಿ ಆಗದಂತೆ ತಂಡ ಎಚ್ಚರಿಕೆವಹಿಸಬೇಕಿದೆ.

ಇದನ್ನೂ ಓದಿ: ‘ಯಾರಲ್ಲಿ ಸೌಂಡು ಮಾಡೋದು’ ಹಾಡನ್ನು ಭಟ್ಟರು ಬರೆದಿದ್ದು ಯಶ್​ಗಾಗಿ ಅಲ್ಲ ಅಪ್ಪುಗಾಗಿ

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದು ಇನ್ನು ಗುಟ್ಟಾಗಿಯೇ ಇದೆ. ಈ ಚಿತ್ರಕ್ಕೆ ಮಲಯಾಳಂನ ಅವಾರ್ಡ್ ವಿನ್ನಿಂಗ್ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ ಈ ಚಿತ್ರವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಿದೆ. ಈ ಮೊದಲು ರಿಲೀಸ್ ಆದ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್