AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್

ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರತಂಡದಿಂದ ಹುಮಾ ಖುರೇಷಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇತ್ತೀಚೆಗೆ ನಟಿ ಕಿಯಾರಾ ಅಡ್ವಾಣಿ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿತ್ತು. 2026ರ ಮಾರ್ಚ್ 19ರಂದು ತೆರೆಕಾಣಲಿರುವ ಈ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡುತ್ತಿದೆ.

‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್
Huma Qureshi
ಮದನ್​ ಕುಮಾರ್​
|

Updated on:Dec 28, 2025 | 11:51 AM

Share

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ (Toxic Movie) ಸಿನಿಮಾದಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾದ ಬಿಡುಗಡೆಗೆ ಇನ್ನೂ ಹಲವು ದಿನಗಳು ಬಾಕಿ ಇವೆ. ಈಗಾಗಲೇ ಸಿನಿಮಾದ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡಲಾಗುತ್ತಿದೆ. ಯಶ್ (Yash) ಜೊತೆ ಪರಭಾಷೆ ಕಲಾವಿದರ ದಂಡೇ ಈ ಸಿನಿಮಾದಲ್ಲಿ ಇರಲಿದೆ. ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ (Huma Qureshi) ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಎಲಿಜಬೆತ್ ಎಂಬ ಪಾತ್ರ ಮಾಡುತ್ತಿದ್ದಾರೆ. ಹೆಸರಿಗೆ ತಕ್ಕಂತೆಯೇ ಈ ಪಾತ್ರ ಸಖತ್ ರಿಚ್ ಆಗಿರಲಿದೆ. ರೆಟ್ರೋ ಕಾಲದ ಐಷಾರಾಮಿ ಕಾರಿನ ಎದುರಿನಲ್ಲಿ ಗ್ಲಾಮರಸ್ ಡ್ರೆಸ್ ಧರಿಸಿ ನಿಂತಿರುವ ಹುಮಾ ಖುರೇಷಿ ಅವರ ಲುಕ್ ಗಮನ ಸೆಳೆಯುತ್ತಿದೆ. ಇದನ್ನು ನೋಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.

ಬಾಲಿವುಡ್​​ನಲ್ಲಿ ಸಾಕಷ್ಟು ಹೆಸರು ಮಾಡಿರುವ ಹುಮಾ ಖುರೇಷಿ ಅವರಿಗೆ ಈಗ 39 ವರ್ಷ ವಯಸ್ಸು. ಸಿನಿಮಾಗಳಲ್ಲಿ ಮಾತ್ರವಲ್ಲದೇ ವೆಬ್ ಸಿರೀಸ್​​ಗಳಲ್ಲಿ ಕೂಡ ನಟಿಸಿ ಅವರು ಫೇಮಸ್ ಆಗಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತೆ ಆಗಿದೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ.

View this post on Instagram

A post shared by Yash (@thenameisyash)

ಏಕಕಾಲಕ್ಕೆ ಕನ್ನಡ ಮತ್ತು ಇಂಗ್ಲಿಷ್​​ನಲ್ಲಿ ‘ಟಾಕ್ಸಿಕ್’ ಸಿನಿಮಾ ನಿರ್ಮಾಣ ಆಗುತ್ತಿದೆ. ಇನ್ನುಳಿದ ಭಾಷೆಗಳಿಗೆ ಡಬ್ ಆಗುತ್ತಿದೆ. ಬೃಹತ್ ಬಜೆಟ್​​ನಲ್ಲಿ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ಅಕ್ಷಯ್ ಒಬೆರಾಯ್, ತಾರಾ ಸುತಾರಿಯಾ, ಟೊವಿನೋ ಥಾಮಸ್, ರುಕ್ಮಿಣಿ ವಸಂತ್ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ

ಕೆಲವೇ ದಿನಗಳ ಹಿಂದೆ ನಟಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾದಲ್ಲಿ ಅವರು ನಾಡಿಯಾ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಗೀತು ಮೋಹನ್​ದಾಸ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ಒಪ್ಪಿಕೊಂಡ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:50 am, Sun, 28 December 25

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ