
‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ (Toxic Movie) ಸಿನಿಮಾದಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾದ ಬಿಡುಗಡೆಗೆ ಇನ್ನೂ ಹಲವು ದಿನಗಳು ಬಾಕಿ ಇವೆ. ಈಗಾಗಲೇ ಸಿನಿಮಾದ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡಲಾಗುತ್ತಿದೆ. ಯಶ್ (Yash) ಜೊತೆ ಪರಭಾಷೆ ಕಲಾವಿದರ ದಂಡೇ ಈ ಸಿನಿಮಾದಲ್ಲಿ ಇರಲಿದೆ. ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ (Huma Qureshi) ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.
ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಎಲಿಜಬೆತ್ ಎಂಬ ಪಾತ್ರ ಮಾಡುತ್ತಿದ್ದಾರೆ. ಹೆಸರಿಗೆ ತಕ್ಕಂತೆಯೇ ಈ ಪಾತ್ರ ಸಖತ್ ರಿಚ್ ಆಗಿರಲಿದೆ. ರೆಟ್ರೋ ಕಾಲದ ಐಷಾರಾಮಿ ಕಾರಿನ ಎದುರಿನಲ್ಲಿ ಗ್ಲಾಮರಸ್ ಡ್ರೆಸ್ ಧರಿಸಿ ನಿಂತಿರುವ ಹುಮಾ ಖುರೇಷಿ ಅವರ ಲುಕ್ ಗಮನ ಸೆಳೆಯುತ್ತಿದೆ. ಇದನ್ನು ನೋಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.
ಬಾಲಿವುಡ್ನಲ್ಲಿ ಸಾಕಷ್ಟು ಹೆಸರು ಮಾಡಿರುವ ಹುಮಾ ಖುರೇಷಿ ಅವರಿಗೆ ಈಗ 39 ವರ್ಷ ವಯಸ್ಸು. ಸಿನಿಮಾಗಳಲ್ಲಿ ಮಾತ್ರವಲ್ಲದೇ ವೆಬ್ ಸಿರೀಸ್ಗಳಲ್ಲಿ ಕೂಡ ನಟಿಸಿ ಅವರು ಫೇಮಸ್ ಆಗಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತೆ ಆಗಿದೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ.
ಏಕಕಾಲಕ್ಕೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ‘ಟಾಕ್ಸಿಕ್’ ಸಿನಿಮಾ ನಿರ್ಮಾಣ ಆಗುತ್ತಿದೆ. ಇನ್ನುಳಿದ ಭಾಷೆಗಳಿಗೆ ಡಬ್ ಆಗುತ್ತಿದೆ. ಬೃಹತ್ ಬಜೆಟ್ನಲ್ಲಿ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ಅಕ್ಷಯ್ ಒಬೆರಾಯ್, ತಾರಾ ಸುತಾರಿಯಾ, ಟೊವಿನೋ ಥಾಮಸ್, ರುಕ್ಮಿಣಿ ವಸಂತ್ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.
ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ
ಕೆಲವೇ ದಿನಗಳ ಹಿಂದೆ ನಟಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾದಲ್ಲಿ ಅವರು ನಾಡಿಯಾ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಗೀತು ಮೋಹನ್ದಾಸ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ಒಪ್ಪಿಕೊಂಡ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:50 am, Sun, 28 December 25