AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸುತ್ತಾರಾ ಸಾಯಿ ಪಲ್ಲವಿ, ಶೃತಿ ಹಾಸನ್​?

‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲಿದೆ. ಘಟಾನುಘಟಿ ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಅವರು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ಭಾರಿ ನಿರೀಕ್ಷೆ ಮನೆ ಮಾಡಿದೆ.

‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸುತ್ತಾರಾ ಸಾಯಿ ಪಲ್ಲವಿ, ಶೃತಿ ಹಾಸನ್​?
ಸಾಯಿ ಪಲ್ಲವಿ, ಯಶ್​, ಶ್ರುತಿ ಹಾಸನ್​
ಮದನ್​ ಕುಮಾರ್​
|

Updated on: Dec 15, 2023 | 6:57 PM

Share

‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರು ‘ಟಾಕ್ಸಿಕ್​’ ಸಿನಿಮಾ ಅನೌನ್ಸ್​ ಮಾಡಿದ ಬಳಿಕ ಹಲವು ಅಂತೆ-ಕಂತೆಗಳು ಹುಟ್ಟಿಕೊಂಡಿವೆ. ಈ ಸಿನಿಮಾದ ಬಗ್ಗೆ ಅನೇಕ ಗಾಸಿಪ್​ಗಳು ಹರಿದಾಡುತ್ತಿವೆ. ಇದು ಯಶ್​ ಪಾಲಿಗೆ ಚಾಲೆಂಜಿಂಗ್ ಪ್ರಾಜೆಕ್ಟ್​. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಾಗಾಗಿ ಪ್ರತಿ ಅಪ್​ಡೇಟ್​ ಬಗ್ಗೆಯೂ ಕುತೂಹಲದಿಂದ ಕಾಯುತ್ತಿದ್ದಾರೆ. ‘ಟಾಕ್ಸಿಕ್​’ (Toxic) ಸಿನಿಮಾದಲ್ಲಿ ಯಶ್​ ಜೊತೆ ಯಾರು ನಟಿಸಬಹುದು ಎಂಬ ಕೌತುಕ ಮೂಡಿದೆ. ಸಾಯಿ ಪಲ್ಲವಿ (Sai Pallavi) ಮತ್ತು ಶ್ರುತಿ ಹಾಸನ್​ ಅವರ ಹೆಸರುಗಳು ಹರಿದಾಡುತ್ತಿವೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಟೈಟಲ್​ ಅನಾವರಣ ಮಾಡುವ ಸಲುವಾಗಿ ಬಿಡುಗಡೆ ಮಾಡಿದ ಟೀಸರ್​ ಗಮನ ಸೆಳೆದಿದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಸಾಯಿ ಪಲ್ಲವಿ ಮತ್ತು ಶ್ರುತಿ ಹಾಸನ್​ ಅವರನ್ನು ಚಿತ್ರತಂಡ ಸಂಪರ್ಕಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Toxic: ಆಸ್ಕರ್​ ಪ್ರಶಸ್ತಿ ಮೇಲೆ ಯಶ್​ ಕಣ್ಣು? ‘ಟಾಕ್ಸಿಕ್​’ ಸಿನಿಮಾ ಹಿಂದಿನ ಲೆಕ್ಕಾಚಾರ ಹೀಗಿದೆ..

ಸಾಯಿ ಪಲ್ಲವಿ ಅವರು ಉತ್ತಮ ನಟಿ ಎಂಬುದರಲ್ಲಿ ಎರಡು ಮಾತಿಲ್ಲ. ಇನ್ನು, ಶ್ರುತಿ ಹಾಸನ್​ ಅವರನ್ನು ಲಕ್ಕಿ ಎಂದು ಚಿತ್ರರಂಗದ ಮಂದಿ ಪರಿಗಣಿಸುತ್ತಾರೆ. ಹಾಗಾಗಿ ಈ ನಟಿಯರಿಬ್ಬರು ‘ಟಾಕ್ಸಿಕ್​’ ಸಿನಿಮಾದ ಭಾಗವಾಗಲಿದ್ದಾರೆ ಎಂಬ ಗಾಸಿಪ್​ ಹರಡಿದೆ. ಅಧಿಕೃವಾಗಿ ಚಿತ್ರತಂಡದವರಿಂದ ಹೇಳಿಕೆ ಹೊರಬೀಳದ ಹೊರತು ಈ ಅಂತೆ-ಕಂತೆಗಳನ್ನು ನಂಬುವುದು ಕಷ್ಟ ಎನ್ನುತ್ತಿದ್ದಾರೆ ನೆಟ್ಟಿಗರು.

ಇದನ್ನೂ ಓದಿ: ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದ ನಿರ್ದೇಶಕಿ ಬಗ್ಗೆ ನಿಮಗೆಷ್ಟು ಗೊತ್ತು?

‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲಿದೆ. ಘಟಾನುಘಟಿ ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಅವರು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ಭಾರಿ ನಿರೀಕ್ಷೆ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?