‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು

‘ಟಾಕ್ಸಿಕ್​’ ಸಿನಿಮಾದಲ್ಲಿ ನಟ ಯಶ್​ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಬಗ್ಗೆ ಸಿನಿಪ್ರಿಯರಿಗೆ ಕುತೂಹಲ ಇದೆ. ಈ ಸಿನಿಮಾದ ಶೂಟಿಂಗ್​ಗಾಗಿ ಬೃಹತ್​ ಸೆಟ್​ಗಳ ನಿರ್ಮಾಣ ಆಗುತ್ತಿದೆ. ಕಥೆಯ ವಿಚಾರದಲ್ಲಿ ‘ಕೆಜಿಎಫ್​ 2’ ರೀತಿಯೇ ರೆಟ್ರೋ ಸೂತ್ರವನ್ನು ‘ಟಾಕ್ಸಿಕ್​’ ಟೀಮ್​ ಅನುಸರಿಸುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು
ಯಶ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Aug 08, 2024 | 11:33 AM

ನಟ ಯಶ್​ (Yash) ಅವರಿಗೆ ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಸಿಕ್ಕ ಯಶಸ್ಸು ಎಷ್ಟು ದೊಡ್ಡ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಆ ಸಿನಿಮಾದ ಗೆಲುವಿನ ಹಿಂದೆ ಅನೇಕ ಅಂಶಗಳು ಕಾರಣ ಆಗಿದ್ದವು. ‘ಕೆಜಿಎಫ್​’ ಕಹಾನಿ ತುಂಬ ಡಿಫರೆಂಟ್​ ಆಗಿತ್ತು. ರೆಟ್ರೋ ಕಾಲದ ಕಥೆಯನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಆಯ್ಕೆ ಮಾಡಿಕೊಂಡಿದ್ದರು. ಈಗ ಅದೇ ಸೂತ್ರವನ್ನು ಟಾಕ್ಸಿಕ್​’ (Toxic) ಸಿನಿಮಾದಲ್ಲೂ ಅನುಸರಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅಂದರೆ, ಈ ಸಿನಿಮಾದ ಕಥೆ ಕೂಡ ರೆಟ್ರೋ ಕಾಲದ ಹಿನ್ನೆಲೆಯಲ್ಲಿ ಸಾಗಲಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಯಶ್​ ನಟನೆಯ 19ನೇ ಸಿನಿಮಾ. ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಪ್ರಾಜೆಕ್ಟ್​ ಬಗ್ಗೆ ಯಶ್​ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಕಥೆಯು 1950 ಹಾಗೂ 1970ರ ಕಾಲಘಟ್ಟದಲ್ಲಿ ನಡೆಯುತ್ತದೆ ಎಂದು ‘ಹಿಂದೂಸ್ತಾನ್​ ಟೈಮ್ಸ್​’ ವರದಿ ಮಾಡಿದೆ.

ವರದಿಗಳ ಪ್ರಕಾರ, ಬೆಂಗಳೂರಿನ ಹೊರವಲಯದಲ್ಲಿ ‘ಟಾಕ್ಸಿಕ್​’ ಸಿನಿಮಾಗೆ ಸೆಟ್​ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ರೆಟ್ರೋ ಕಥೆ ಆದ್ದರಿಂದ 1950, 1970ರ ಸಮಯದ ದೃಶ್ಯಗಳನ್ನು ತೆರೆ ಮೇಲೆ ತರಲು ವಿಶೇಷ ರೀತಿಯಲ್ಲಿ ಸೆಟ್​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸದ್ಯಕ್ಕೆ ಟೈಟಲ್​ ಟೀಸರ್​ ಹೊರತುಪಡಿಸಿ, ಚಿತ್ರತಂಡದಿಂದ ಬೇರೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

ಇದನ್ನೂ ಓದಿ: ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

‘ಟಾಕ್ಸಿಕ್’ ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವಾರು ಗಾಸಿಪ್​ಗಳು ಹರಿದಾಡುತ್ತಿವೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ಕರೀನಾ ಕಪೂರ್​ ಖಾನ್​ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸಂಭಾವನೆ ವಿಚಾರದಲ್ಲಿ ಹೊಂದಾಣಿಕೆ ಆಗದ ಕಾರಣ ಅವರು ಈ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ ಎಂದು ವರದಿ ಆಯಿತು. ಈಗ ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಮುಂತಾದ ನಟಿಯರ ಹೆಸರು ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 pm, Mon, 1 July 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ