AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ಅಡ್ವಾನ್ಸ್ ಬುಕಿಂಗ್ ಬಗ್ಗೆ ಸಿಕ್ಕಿತು ದೊಡ್ಡ ಅಪ್​​ಡೇಟ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಆನ್‌ಲೈನ್ ಟಿಕೆಟ್ ಬುಕಿಂಗ್ ದಿನಾಂಕದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಆಗಸ್ಟ್ 21ರಿಂದ ಎಲ್ಲಾ ಭಾಷೆಗಳಲ್ಲೂ ಮುಂಗಡ ಬುಕಿಂಗ್ ಆರಂಭವಾಗುವ ಸಾಧ್ಯತೆಯಿದ್ದು, ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ಕಾತರ ಮತ್ತು ನಿರೀಕ್ಷೆ ಗಣನೀಯವಾಗಿ ಹೆಚ್ಚಾಗಿದೆ.

‘ಟಾಕ್ಸಿಕ್’ ಸಿನಿಮಾ ಅಡ್ವಾನ್ಸ್ ಬುಕಿಂಗ್ ಬಗ್ಗೆ ಸಿಕ್ಕಿತು ದೊಡ್ಡ ಅಪ್​​ಡೇಟ್
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Aug 18, 2026 | 3:15 PM

Share

ಮುಖ್ಯಾಂಶಗಳು

  • ಆಗಸ್ಟ್ 21ರಿಂದ ಆರಂಭವಾಗಲಿದೆಯಾ ಯಶ್ 'ಟಾಕ್ಸಿಕ್' ಟಿಕೆಟ್ ಬುಕಿಂಗ್?
  • ಕಿಯಾರಾ, ನಯನತಾರಾ, ರಿಕ್ಮಿಣಿ: 'ಟಾಕ್ಸಿಕ್'ನಲ್ಲಿದೆ ದೊಡ್ಡ ತಾರಾಗಣ
  • ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ: ರವಿ ಬಸ್ರೂರ್ ಸಂಗೀತದ ಕಮಾಲ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ (Toxic Movie) ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಸಿನಿಮಾ ಮೇಲೆ ಜಾಗತಿಕ ಮಟ್ಟದಲ್ಲಿ ಅಪಾರ ನಿರೀಕ್ಷೆಗಳಿವೆ. ಚಿತ್ರತಂಡವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸದ್ಯದಲ್ಲೇ ಟಿಕೆಟ್ ಬುಕಿಂಗ್ ಆರಂಭವಾಗಲಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾಗೆ ಸಂಬಂಧಿಸಿದಂತೆ ಈಗೊಂದು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಚಿತ್ರದ ಆನ್‌ಲೈನ್ ಟಿಕೆಟ್ ಬುಕಿಂಗ್ ಆಗಸ್ಟ್ 21ರಿಂದ ಆರಂಭವಾಗುವ ಸಾಧ್ಯತೆಯಿದೆ. ಎಲ್ಲಾ ಭಾಷೆಗಳಲ್ಲೂ ಬುಕಿಂಗ್ ಶುಕ್ರವಾರವೇ ಬುಕಿಂಗ್ ಓಪನ್ ಆಗಲಿದೆ ಎಂದು ಗಾಂಧಿನಗರದ ಮೂಲಗಳು ತಿಳಿಸಿವೆ. ನಿರ್ಮಾಪಕರಿಂದ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಬೃಹತ್ ತಾರಾಗಣವೇ ಒದೆ. ಯಶ್‌ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಜೊತೆಗೆ ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಕ್ಷಯ್ ಒಬೆರಾಯ್ ಹಾಗೂ ಸುದೇವ್ ನಾಯರ್ ಸಾಥ್ ನೀಡಿದ್ದಾರೆ.

ಈ ಅದ್ದೂರಿ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಿಸುತ್ತಿದೆ. ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆ ಕೂಡ ಜೊತೆಯಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್ ಚಿತ್ರ ನಿರ್ದೇಶಿಸಿದ್ದಾರೆ. ಜನಪ್ರಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ನ ಆ ದೃಶ್ಯಗಳ ನೋಡಿ ಪತ್ನಿ ರಾಧಿಕಾ ಹೇಳಿದ್ದೇನು? ಸತ್ಯ ಹೇಳಿದ ಯಶ್

ಸಿನಿಮಾ ಬಿಡುಗಡೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಹೆಚ್ಚಾಗಿದೆ. ಪ್ರಚಾರ ಕಾರ್ಯಗಳು ಕೂಡ ತೀವ್ರಗತಿಯಲ್ಲಿ ನಡೆಯುತ್ತಿವೆ. ಟಿಕೆಟ್ ಬುಕಿಂಗ್ ದಿನಾಂಕ ಪ್ರಕಟವಾದರೆ ಮುಂಗಡ ಬುಕಿಂಗ್‌ನಲ್ಲಿ ಹೊಸ ದಾಖಲೆ ಸೃಷ್ಟಿಯಾಗುವ ನಿರೀಕ್ಷೆಯಿದೆ. ಯಶ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಧಾವಿಸಲು ಸಿದ್ಧರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!