AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲೂ ಯಶ್ ಹವಾ; ಸಿನಿಮಾಗೆ ಟಿಕೆಟ್ ದರ ಏರಿಕೆ ಫಿಕ್ಸ್

Toxic Ticket Price: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26 ರಂದು ಬಿಡುಗಡೆಯಾಗಲಿದೆ. ಆಂಧ್ರಪ್ರದೇಶದಲ್ಲಿ ಟಿಕೆಟ್ ದರ ಹೆಚ್ಚಿಸಲು ಚಿತ್ರತಂಡ ಸಜ್ಜಾಗಿದೆ. ಬೆಳಗಿನ ವಿಶೇಷ ಪ್ರದರ್ಶನ ಹಾಗೂ ಸಾಮಾನ್ಯ ಶೋಗಳ ದರ ಏರಿಕೆಯಾಗುವ ಸಾಧ್ಯತೆಯಿದ್ದು, ತೆಲುಗು ಪ್ರೇಕ್ಷಕರ ಪ್ರತಿಕ್ರಿಯೆ ಕುತೂಹಲ ಮೂಡಿಸಿದೆ.

ಆಂಧ್ರಪ್ರದೇಶದಲ್ಲೂ ಯಶ್ ಹವಾ; ಸಿನಿಮಾಗೆ ಟಿಕೆಟ್ ದರ ಏರಿಕೆ ಫಿಕ್ಸ್
ಟಾಕ್ಸಿಕ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Aug 19, 2026 | 1:08 PM

Share

ಮುಖ್ಯಾಂಶಗಳು

  • ಆಂಧ್ರದಲ್ಲೂ ಟಾಕ್ಸಿಕ್ ಹವಾ
  • ವಿಶೇಷ ಶೋಗೆ ಭಾರಿ ದರ
  • ಕರ್ನಾಟಕದಲ್ಲೂ ರೇಟ್ ಹೈಕ್ ಫಿಕ್ಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಗ್ಯಾಂಗ್‌ಸ್ಟರ್ ಆಕ್ಷನ್ ಡ್ರಾಮಾ ಚಿತ್ರದ ಮೇಲೆ ದೇಶಾದ್ಯಂತ ಭಾರಿ ನಿರೀಕ್ಷೆ ವ್ಯಕ್ತವಾಗಿದೆ. ಆಗಸ್ಟ್ 26ರಂದು ಈ ಸಿನಿಮಾ ಪ್ರಪಂಚದಾದ್ಯಂತ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಈ ನಡುವೆ ಆಂಧ್ರಪ್ರದೇಶದಲ್ಲಿ ಚಿತ್ರದ ಟಿಕೆಟ್ ದರವನ್ನು ಹೆಚ್ಚಿಸಲು ಚಿತ್ರತಂಡ ಯೋಜನೆ ರೂಪಿಸಿದೆ. ‘ಕಾಂತಾರ ಚಾಪ್ಟರ್ 1’ ಹಾದಿಯಲ್ಲೇ ಟಾಕ್ಸಿಕ್ ತಂಡ ಕೂಡ ಸರ್ಕಾರದ ಅನುಮತಿಗೆ ಕಾಯುತ್ತಿದೆ. ಬೆಳಗಿನ ಜಾವ 6 ಗಂಟೆಯ ವಿಶೇಷ ಪ್ರದರ್ಶನದ ಟಿಕೆಟ್‌ಗೆ 500 ರೂಪಾಯಿ ನಿಗದಿಪಡಿಸಲು ಚಿಂತಿಸಲಾಗಿದೆ.

ಸಾಮಾನ್ಯ ಪ್ರದರ್ಶನಗಳ ಟಿಕೆಟ್ ದರದಲ್ಲೂ 50 ರಿಂದ 100 ರೂಪಾಯಿಗಳವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಸಾಮಾನ್ಯ ಟಿಕೆಟ್ ದರಗಳಿಂದಾಗಿ ಚಿತ್ರಮಂದಿರಗಳಿಗೆ ಪ್ರೇಕ್ಷಕರ ಹರಿವು ಹೆಚ್ಚಾಗಿತ್ತು. ಹೀಗಾಗಿ ಈ ದರ ಏರಿಕೆಗೆ ತೆಲುಗು ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಒಂದೊಮ್ಮೆ ಇದು ಸಂಭವಿಸಿದರೆ ಸಿನಿಮಾದ ಮೊದಲ ದಿನದ ಗಳಿಕೆ ತೀವ್ರವಾಗಿ ಹೆಚ್ಚವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಅಡ್ವಾನ್ಸ್ ಬುಕಿಂಗ್ ಬಗ್ಗೆ ಸಿಕ್ಕಿತು ದೊಡ್ಡ ಅಪ್​​ಡೇಟ್

ಇತ್ತ ಕರ್ನಾಟಕದಲ್ಲಿ ಯಾವುದೇ ಅಡಚಣೆಗಳಿಲ್ಲ. ಹೀಗಾಗೊ’ಟಾಕ್ಸಿಕ್’ ಸಿನಿಮಾದ ಟಿಕೆಟ್ ದರವನ್ನು ಸುಲಭವಾಗಿ ಮನಸ್ಸಿಗೆ ಬಂದಂತೆ ಏರಿಸಬಹುದು. ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಅವರಂತಹ ದೊಡ್ಡ ತಾರಾಗಣವಿದೆ. ಯಶ್ ಅವರನ್ನು ಹೊಸ ಅವತಾರದಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಬಿಡುಗಡೆಯ ಮೊದಲ ದಿನವೇ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.

‘ಟಾಕ್ಸಿಕ್’ ಸಿನಿಮಾಗೆ ಗೀತು ಮೋಹನ್​ದಾಸ್ ನಿರ್ದೇಶನ ಮಾಡಿದ್ದಾರೆ. ಯಶ್ ಚಿತ್ರಕ್ಕೆ ಹೀರೋ. ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ.

ಪ್ರಶ್ನೆ: ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಅವರ ಪಾತ್ರದ ಹೆಸರೇನು? ಉತ್ತರ: ರಾಯ ಹಾಗೂ ಟಿಕೆಟ್

ಪ್ರಶ್ನೆ: ಟಾಕ್ಸಿಕ್ ರಿಲೀಸ್ ದಿನಾಂಕ ಏನು? ಉತ್ತರ: ಆಗಸ್ಟ್ 26

ಪ್ರಶ್ನೆ: ಟಾಕ್ಸಿಕ್ ಚಿತ್ರದ ನಿರ್ದೇಶಕರು ಯಾರು? ಉತ್ತರ: ಗೀತು ಮೋಹನ್​ ದಾಸ್

Published On - 8:59 am, Wed, 19 August 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ