AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆವಿಎನ್ ಜೊತೆ ಸೇರಿ ಕರ್ನಾಟಕದಲ್ಲಿ ‘ಟಾಕ್ಸಿಕ್​’ ಡಿಸ್ಟ್ರಿಬ್ಯೂಟ್ ಮಾಡಲಿದ್ದಾರೆ ಯಶ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಕರ್ನಾಟಕದಲ್ಲಿ ಸಾರ್ವಕಾಲಿಕ ದಾಖಲೆಯ ರಿಲೀಸ್ ಕಾಣಲು ಸಜ್ಜಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರವು ರಾಜ್ಯಾದ್ಯಂತ ಅತೀ ಹೆಚ್ಚು ಥಿಯೇಟರ್ ಹಾಗೂ ಪ್ರದರ್ಶನಗಳನ್ನು ಪಡೆಯುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ.

ಕೆವಿಎನ್ ಜೊತೆ ಸೇರಿ ಕರ್ನಾಟಕದಲ್ಲಿ ‘ಟಾಕ್ಸಿಕ್​’ ಡಿಸ್ಟ್ರಿಬ್ಯೂಟ್ ಮಾಡಲಿದ್ದಾರೆ ಯಶ್
ಟಾಕ್ಸಿಕ್ ಸಿನಿಮಾ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Aug 07, 2026 | 3:17 PM

Share

ಮುಖ್ಯಾಂಶಗಳು

  • ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಲಿದೆ ರಾಕಿ ಭಾಯ್ 'ಟಾಕ್ಸಿಕ್'
  • ಬೆಂಗಳೂರಿನಲ್ಲಿ ಫಸ್ಟ್ ಡೇ ಧಮಾಕಾ
  •  ಬೆಳಗಿನ ಜಾವದ ಶೋಗಳ ಮೂಲಕ ಅಭಿಮಾನಿಗಳಿಗೆ ಹಬ್ಬ

ರಾಕಿಂಗ್ ಸ್ಟಾರ್ ಯಶ್ ಪ್ರತಿ ಬಾರಿ ಹೊಸ ಹೊಸ ಜವಾಬ್ದಾರಿ ಹೊತ್ತು ಸಾಗುತ್ತಿದ್ದಾರೆ. ಅವರ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಕರ್ನಾಟಕದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ರಾಜ್ಯದ ಬಾಕ್ಸ್ ಆಫೀಸ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ಬಿಡುಗಡೆ ಕಾಣಲು ಈ ಸಿನಿಮಾ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಭಿಮಾನಿಗಳಲ್ಲಿ ಈಗಾಗಲೇ ಭಾರಿ ಕುತೂಹಲ ಮೂಡಿಸಿರುವ ಈ ಚಿತ್ರವು ಹೊಸ ದಾಖಲೆಯನ್ನು ಬರೆಯಲಿದೆ. ಈ ಚಿತ್ರದ ಮೂಲಕ ಯಶ್ ಅವರು ಡಿಸ್ಟ್ರಿಬ್ಯೂಟರ್ ಕೂಡ ಆಗುತ್ತಿದೆ.

ದೊಡ್ಡ ಸಂಖ್ಯೆಯಲ್ಲಿ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ. ಮೊದಲ ದಿನವೇ ಅತ್ಯಂತ ಹೆಚ್ಚಿನ ಶೋ ಪ್ರದರ್ಶನಗಳನ್ನು ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ರಾಜಧಾನಿ ಬೆಂಗಳೂರು ಒಂದರಲ್ಲೇ ಮೊದಲ ದಿನ ದಾಖಲೆ ಮಟ್ಟದ ಶೋಗಳು ಪ್ರದರ್ಶನ ಕಾಣಲಿವೆ. ಮುಂಜಾನೆ ವಿಶೇಷ ಫ್ಯಾನ್​ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ.

ಈ ಬಿಗ್ ಬಜೆಟ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿವೆ. ಈ ಎರಡೂ ಸಂಸ್ಥೆಗಳೇ ಸ್ವತಃ ಕರ್ನಾಟಕದಾದ್ಯಂತ ಸಿನಿಮಾವನ್ನು ವಿತರಣೆ ಮಾಡುತ್ತಿರುವುದು ವಿಶೇಷ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಇದು ಅತ್ಯಂತ ಮಹತ್ವಾಕಾಂಕ್ಷೆಯ ಸಿನಿಮಾ ಆಗಿದೆ.

View this post on Instagram

A post shared by TOXIC (@toxic_themovie)

ಗೀತು ಮೋಹನ್‌ದಾಸ್ ಅವರು ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಏಕಕಾಲದಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾಗಿದೆ. ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ತೆರೆಕಾಣಲಿದೆ.

ಇದನ್ನೂ ಓದಿ: ಗೂಗ್ಲಿಯಲ್ಲಿ ಯಶ್​​ಗೆ ಬರೆದ ಡೈಲಾಗ್ ನಿಜವಾಯ್ತು; ಜಾಗತಿಕ ಮಟ್ಟದಲ್ಲಿ ಟಾಕ್ಸಿಕ್ ಹವಾ

ವೆಂಕಟ್ ಕೆ ನಾರಾಯಣ್ ಹಾಗೂ ನಟ ಯಶ್ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ಯಶ್ ನಾಯಕನಾಗಿ ನಟಿಸಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ 2026ರ ಆಗಸ್ಟ್ 26ರಂದು ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಜನರಿಗೆ ಎರಡು ಶಾಕ್ ನೀಡಲಿದೆ ಸರ್ಕಾರ
ಜನರಿಗೆ ಎರಡು ಶಾಕ್ ನೀಡಲಿದೆ ಸರ್ಕಾರ
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು