AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ 1ನೇ ಸ್ಥಾನ

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ದಾಖಲೆ ನಿರ್ಮಿಸುತ್ತಿದೆ. ನೆಗೆಟಿವ್ ಸುದ್ದಿಗಳು ಹರಿದಾಡುತ್ತಿದ್ದರೂ ಚಿತ್ರದ ಕ್ರೇಜ್ ಕಡಿಮೆಯಾಗಿಲ್ಲ. ಐಎಂಡಿಬಿ ಬಿಡುಗಡೆ ಮಾಡಿರುವ ಭಾರತದ ಅತ್ಯಂತ ನಿರೀಕ್ಷಿತ ಹೊಸ ಚಿತ್ರಗಳ ಪಟ್ಟಿಯಲ್ಲಿ 'ಟಾಕ್ಸಿಕ್' ಶೇಕಡಾ 47 ರಷ್ಟು ಮತಗಳೊಂದಿಗೆ ಅಗ್ರಸ್ಥಾನದಲ್ಲಿದೆ, ಇದು ಯಶ್ ಅವರ ಜಾಗತಿಕ ಜನಪ್ರಿಯತೆಯನ್ನು ತೋರಿಸುತ್ತದೆ.

ಭಾರತದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 'ಟಾಕ್ಸಿಕ್' ಚಿತ್ರಕ್ಕೆ 1ನೇ ಸ್ಥಾನ
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Jul 14, 2026 | 9:02 AM

Share

ಮುಖ್ಯಾಂಶಗಳು

  • ಐಎಂಡಿಬಿ ಪಟ್ಟಿಯಲ್ಲಿ ಯಶ್ ಸಾಮ್ರಾಜ್ಯ
  • ಭಾರತೀಯ ಚಿತ್ರರಂಗದ ಅತಿ ನಿರೀಕ್ಷಿತ ಸಿನಿಮಾ ಆದ 'ಟಾಕ್ಸಿಕ್'
  • ಶೇಕಡಾ 47 ರಷ್ಟು ಮತಗಳೊಂದಿಗೆ ಅಗ್ರಸ್ಥಾನ

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic) ಸದ್ಯ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಈ ಚಿತ್ರದ ವಿರುದ್ಧ ಎಷ್ಟೇ ನೆಗೆಟಿವ್ ಸುದ್ದಿಗಳು ಹರಿದಾಡುತ್ತಿದ್ದರೂ, ಯಾವುದೂ ಚಿತ್ರದ ಕ್ರೇಜ್‌ಗೆ ಧಕ್ಕೆ ತರಲು ಸಾಧ್ಯವಾಗಿಲ್ಲ. ಸಿನಿಮಾ ರಿಲೀಸ್ ವಿಳಂಬ ಆದರೂ ಚಿತ್ರದ ಮೇಲಿರುವ ನಿರೀಕ್ಷೆ ಒಂದುಚೂರು ಕಮ್ಮಿ ಆಗಿಲ್ಲ ಎಂಬುದಕ್ಕೆ ಐಎಂಡಿಬಿ ಬಿಡುಗಡೆ ಮಾಡಿರುವ ಹೊಸ ಪಟ್ಟಿಯೇ ಸಾಕ್ಷಿ.

ಭಾರತದ ಅತ್ಯಂತ ನಿರೀಕ್ಷಿತ ಹೊಸ ಚಿತ್ರಗಳ ರಿಯಲ್-ಟೈಮ್ ಜನಪ್ರಿಯತೆಯ ಪಟ್ಟಿಯಲ್ಲಿ ‘ಟಾಕ್ಸಿಕ್’ ಮೊದಲ ಸ್ಥಾನವನ್ನು ಅಲಂಕರಿಸಿದೆ. ಭಾರತದ ಬೇರೆ ಯಾವ ದೊಡ್ಡ ಸಿನಿಮಾಗೂ ಇದರ ಹತ್ತಿರ ಸುಳಿಯಲು ಸಾಧ್ಯವಾಗಿಲ್ಲ ಎಂಬುದು ಚಿತ್ರದ ಹೆಚ್ಚುಗಾರಿಕೆ. ಇದು ಯಶ್ ಕ್ರೇಜ್​​ಗೆ ಹಿಡಿದ ಕೈಗನ್ನಡಿಯಾಗಿದೆ.

ಬಹುನಿರೀಕ್ಷಿತ ಸಿನಿಮಾ ಪಟ್ಟಿಯಲ್ಲಿ ‘ಟಾಕ್ಸಿಕ್’ ಸಿನಿಮಾ ಶೇಕಡಾ 47 ರಷ್ಟು ವೋಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ತಮಿಳು ನಟ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕೇವಲ ಶೇಕಡಾ 12.7 ರಷ್ಟು ವೋಟ್‌ಗಳನ್ನು ಪಡೆದುಕೊಂಡಿದೆ. ಇದನ್ನು ಗಮನಿಸಿದರೆ ಯಶ್ ಅವರ ಸಿನಿಮಾದ ಮೇಲಿರುವ ಕ್ರೇಜ್ ಭಾರತೀಯ ಚಿತ್ರರಂಗದಲ್ಲಿ ಎಷ್ಟು ಅಗಾಧವಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಮತ್ತೊಂದೆಡೆ ಬಹುನಿರೀಕ್ಷಿತ ಸೀಕ್ವೆಲ್ ಚಿತ್ರಗಳಾದ ‘ಆವಾರಾಪನ್ 2’ ಶೇಕಡಾ 9.4 ಹಾಗೂ ‘ಇಂದ್ರಜಾಲ್’ ಶೇಕಡಾ 9.1 ರಷ್ಟು ವೋಟ್‌ಗಳೊಂದಿಗೆ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಲೋಕೇಶ್ ಕನಕರಾಜ್ ನಟನೆಯ ‘ಡಿಸಿ’ ಸಿನಿಮಾ ಶೇಕಡಾ 7.4 ರಷ್ಟು ಪಡೆದಿದ್ದರೆ, ಶ್ರದ್ಧಾ ಕಪೂರ್ ನಟನೆಯ ‘ಈಥಾ’, ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಹಾಗೂ ಸೂಪರ್ ಹಿಟ್ ವೆಬ್ ಸರಣಿಯ ‘ಮಿರ್ಜಾಪುರ್: ದಿ ಮೂವಿ’ ಕೂಡ ತಲಾ ಮೂರು ಶೇಕಡಾಗಿಂತಲೂ ಕಡಿಮೆ ಕ್ರೇಜ್‌ನೊಂದಿಗೆ ಈ ಪಟ್ಟಿಯಲ್ಲಿ ಕೊನೆಯ ಸಾಲಿನಲ್ಲಿವೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಅಡ್ವಾಣಿಗೆ ಬಂಪರ್ ಸಂಭಾವನೆ; 15 ಕೋಟಿ ರೂಪಾಯಿ ಪಡೆದ ನಟಿ

ಚಿತ್ರದ ರಿಲೀಸ್ ಸಂದರ್ಭದಲ್ಲಿ ‘ಟಾಕ್ಸಿಕ್’ ಇಷ್ಟೊಂದು ದೊಡ್ಡ ಮಟ್ಟದ ಸದ್ದು ಮಾಡುತ್ತಿರುವುದು ಯಶ್ ಅವರ ಜಾಗತಿಕ ಮಾರುಕಟ್ಟೆಯ ತಾಕತ್ತನ್ನು ತೋರಿಸುತ್ತದೆ. ವಿರೋಧಿಗಳು ಹಬ್ಬಿಸುತ್ತಿರುವ ಯಾವುದೇ ನೆಗೆಟಿವ್ ಕಮೆಂಟ್‌ಗಳು ಅಥವಾ ಸುಳ್ಳು ಸುದ್ದಿಗಳು ಚಿತ್ರದ ಪ್ರಚಾರಕ್ಕೆ ಯಾವುದೇ ಪ್ರಭಾವ ಬೀರುತ್ತಿಲ್ಲ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರದ ಮೂಲಕ ರಾಕಿ ಭಾಯ್ ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಮತ್ತೊಂದು ಬಿರುಗಾಳಿ ಎಬ್ಬಿಸಲು ಸಂಪೂರ್ಣವಾಗಿ ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ