‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಯಶ್ ಸಾಥ್​; ಫ್ಯಾನ್ಸ್ ಬಳಿ ರಾಕಿಂಗ್ ಸ್ಟಾರ್ ಹೊಸ ಕೋರಿಕೆ

‘ಕೆಜಿಎಫ್ 2’ ಮೂಲಕ ಯಶ್ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡರು. ‘ಕೆಜಿಎಫ್​ 2’ ನಂತರ ಅವರು ಯಾವ ಚಿತ್ರ ಒಪ್ಪಿಕೊಳ್ಳಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಹೀಗಿರುವಾಗಲೇ ಯಶ್ ಹೊಸ ಪೋಸ್ಟ್ ಹಾಕಿದ್ದಾರೆ.

‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಯಶ್ ಸಾಥ್​; ಫ್ಯಾನ್ಸ್ ಬಳಿ ರಾಕಿಂಗ್ ಸ್ಟಾರ್ ಹೊಸ ಕೋರಿಕೆ
ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 03, 2022 | 4:51 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕೈ ಜೋಡಿಸಿ ಎಂದು ದೇಶದ ಜನತೆ ಬಳಿ ಕೋರಿದ್ದರು. ಆಗಸ್ಟ್ 13-15ರವರೆಗೆ ಪ್ರತಿ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಅಥವಾ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ‘ಹರ್ ಘರ್ ತಿರಂಗಾ’ (Har Ghar Tiranga) ಅಭಿಯಾನಕ್ಕೆ ಸಾಥ್ ನೀಡುವಂತೆ ಮೋದಿ ಕರೆ ನೀಡಿದ್ದರು. ಭಾರತಕ್ಕೆ ಸ್ವತಂತ್ರ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೋದಿ ಈ ಆಂದೋಲನ ಆರಂಭಿಸಿದ್ದರು. ಇದಕ್ಕೆ ರಾಕಿಂಗ್ ಸ್ಟಾರ್ ಯಶ್ ಕೂಡ ಸಾಥ್ ನೀಡಿದ್ದಾರೆ.

‘ಕೆಜಿಎಫ್ 2’ ಮೂಲಕ ಯಶ್ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡರು. ‘ಕೆಜಿಎಫ್​ 2’ ನಂತರ ಅವರು ಯಾವ ಚಿತ್ರ ಒಪ್ಪಿಕೊಳ್ಳಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಹೀಗಿರುವಾಗಲೇ ಯಶ್ ಹೊಸ ಪೋಸ್ಟ್ ಹಾಕಿದ್ದಾರೆ. ಅವರು ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಫ್ಯಾನ್ಸ್ ಬಳಿ ಕೋರಿದ್ದಾರೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

‘ನಮ್ಮ ವೈವಿಧ್ಯತೆಯಲ್ಲಿ ಭರವಸೆ, ಆಕಾಂಕ್ಷೆಗಳು ಮತ್ತು ಏಕತೆಯ ಸಂಕೇತವಾದ ತಿರಂಗ ನಮ್ಮೆಲ್ಲ ಭಾರತೀಯರ ಹೆಮ್ಮೆ. ಸ್ವಾತಂತ್ರ್ಯೋತ್ಸವದ 75 ವರ್ಷಗಳ ಸಂದರ್ಭದಲ್ಲಿ ನಮ್ಮ ರಾಷ್ಟ್ರದ ಗುರುತಾದ ರಾಷ್ಟ್ರ ಧ್ವಜವನ್ನು ನಮ್ಮ ಮನೆಗಳಿಗೆ ತರೋಣ. ಆಗಸ್ಟ್ 13-15ರವರೆಗೆ ಅದನ್ನು ಹಾರಿಸೋಣ’ ಎಂದು ಯಶ್ ಬರೆದುಕೊಂಡಿದ್ದಾರೆ. ಯಶ್ ಅವರ ಟ್ವೀಟ್​ಗೆ ಅನೇಕರು ಬೆಂಬಲ ನೀಡಿದ್ದಾರೆ. ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಬೆಂಬಲ ನೀಡುವುದಾಗಿ ಯಶ್ ಫ್ಯಾನ್ಸ್ ಹೇಳಿದ್ದಾರೆ.

ಇದನ್ನೂ ಓದಿ: ‘ಕೆಜಿಎಫ್​ ಎರಡು ಪಾರ್ಟ್​ನಲ್ಲಿ ತರುವ ಬಗ್ಗೆ ಮೊದಲೇ ನಿರ್ಧಾರ ಆಗಿತ್ತು, ನಮ್ಮ ಬಳಿ ಸದ್ಯಕ್ಕೆ ಆ ಆಲೋಚನೆ ಇಲ್ಲ’: ಸುದೀಪ್

ಯಶ್ ಅವರು ಸದ್ಯ ಯುರೋಪ್ ಪ್ರವಾಸದಲ್ಲಿದ್ದಾರೆ. ಯಶ್ 19ನೇ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಈ ಸಂದರ್ಭದಲ್ಲಿ ಅವರು ಯುರೋಪ್ ಪ್ರವಾಸ ಆರಂಭಿಸಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅವರ ಮುಂದಿನ ಚಿತ್ರದ ಬಗ್ಗೆ ಬೇಗ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್ ಆಶಿಸುತ್ತಿದ್ದಾರೆ.

Published On - 4:51 pm, Wed, 3 August 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ