AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ‘ರಾಮಾಯಣ’ದಲ್ಲಿ ರಾವಣನಾಗೋದು ಯಾವಾಗ? ಇಲ್ಲಿದೆ ಉತ್ತರ

ಬಹುನಿರೀಕ್ಷಿತ ‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ ಚಾಲ್ತಿಯಲ್ಲಿದೆ. ನಟ ಯಶ್​ ಅವರು ಈ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅವರು ಶೀಘ್ರವೇ ‘ರಾಮಾಯಣ’ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ.

ಯಶ್ ‘ರಾಮಾಯಣ’ದಲ್ಲಿ ರಾವಣನಾಗೋದು ಯಾವಾಗ? ಇಲ್ಲಿದೆ ಉತ್ತರ
ಯಶ್-ರಣಬೀರ್
ರಾಜೇಶ್ ದುಗ್ಗುಮನೆ
|

Updated on: Sep 11, 2024 | 7:28 AM

Share

ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ರಾಮಾಯಣ ಆಧರಿಸಿ ಹಲವು ಸಿನಿಮಾ ಹಾಗೂ ಧಾರಾವಾಹಿಗಳು ಮೂಡಿ ಬಂದಿವೆ. ಆದಾಗ್ಯೂ ಪ್ರತಿ ವರ್ಷ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಈಗ ಯಶ್ ಅವರು ಯಾವಾಗ ಸಿನಿಮಾ ಸೆಟ್ ಸೇರಿಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯಶ್ ಅವರು ಡಿಸೆಂಬರ್ ವೇಳೆಗೆ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಎಂದು ವರದಿ ಆಗಿದೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ನಡೆಯುತ್ತಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಇನ್ನೂ ಹಲವು ಹಂತದಲ್ಲಿ ಶೂಟಿಂಗ್ ನಡೆಯಬೇಕಿದೆ. ಈ ಸಿನಿಮಾಗಳ ಮಧ್ಯೆ ಅವರು ‘ರಾಮಾಯಣ’ ಕೆಲಸಗಳಲ್ಲಿಯೂ ತೊಡಗಿಕೊಳ್ಳಲಿದ್ದಾರೆ.

ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿದ್ದು, ಸಾಯಿ ಪಲ್ಲವಿ ಸೀತೆ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಭಾಗದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ಡಿಸೆಂಬರ್ ವೇಳೆಗೆ ಯಶ್ ಅವರು ಈ ಚಿತ್ರದ ಸೆಟ್ ಸೇರಿಕೊಳ್ಳಲಿದ್ದಾರೆ. ಯಶ್ ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕಾಗಿ ಅವರು ಯಾವ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ.

ರಾಮಾಯಣ ಚಿತ್ರಕ್ಕಾಗಿ ಯಶ್ ಅವರು ಸಾಕಷ್ಟು ಬಾರಿ ಲುಕ್ ಟೆಸ್ಟ್ ಮಾಡಿಸಿದ್ದರು. ಇದರಲ್ಲಿ ಯಶ್ ಪಾಸ್ ಆಗಿದ್ದಾರೆ. ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರ ಮಾಡುತ್ತಿದ್ದಾರೆ. ಅವರು ಸದ್ಯ ‘ಬಾರ್ಡರ್ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಈ ಚಿತ್ರದ ಶೂಟ್​ನಲ್ಲಿ ತೊಡಗಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಶೂಟಿಂಗ್​ ಸೆಟ್​ನಲ್ಲಿ ಶಿವಣ್ಣ-ಯಶ್​ ಭೇಟಿ; ಇಬ್ಬರ ಗೆಟಪ್​​ ನೋಡಿ ಫ್ಯಾನ್ಸ್​ ಫಿದಾ

ಕೆಲವು ಮೂಲಗಳ ಪ್ರಕಾರ ‘ರಾಮಾಯಣ’ ಸೀರಿಸ್ 2026ರಲ್ಲಿ ರಿಲೀಸ್ ಆಗಲಿದೆಯಂತೆ. ಹಲವು ಹಂತಗಳಲ್ಲಿ ಸಿನಿಮಾ ಮೂಡಿ ಬರುತ್ತಿದೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಈ ಮೊದಲು ‘ಆದಿಪುರುಷ್’ ಸಿನಿಮಾ ಮಾಡಿ ಎಲ್ಲರಿಂದ ನಗೆಪಾಟಲಿಗೆ ಈಡಾಗುವ ಸ್ಥಿತಿ ಬಂದಿತ್ತು. ಈ ಬಾರಿ ಹಾಗೆ ಆಗದಂತೆ ನೋಡಿಕೊಳ್ಳಲು ತಂಡ ಮುಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.