ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಯಾವಾಗ ಆರಂಭಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಆಗಸ್ಟ್ 8ರಿಂದ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಆರಂಭಿಸಲಿದ್ದಾರೆ ಎಂದು ವರದಿ ಆಗಿದೆ.

ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್
ಯಶ್
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Aug 08, 2024 | 11:30 AM

ನಟ ಯಶ್ ಅವರು ಸದ್ಯ ಟೆಂಪಲ್ ರನ್​ನಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಪತ್ನಿ ರಾಧಿಕಾ ಪಂಡಿತ್ ಹಾಗೂ ‘ಟಾಕ್ಸಿಕ್’ ಚಿತ್ರದ ನಿರ್ಮಾಪಕ ವೆಂಕಟ್ ನಾರಾಯಣ್ ಅವರು ಜೊತೆಯಾಗಿದ್ದಾರೆ. ಈಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟ್ ಆರಂಭಿಸಲಿದ್ದಾರೆ. ಅದೂ ಅವರ ಲಕ್ಕಿ ಡೇಟ್ ನಂಬರ್​ನಿಂದ ಅನ್ನೋದು ವಿಶೇಷ. ಈ ಬಗ್ಗೆ ಬಾಲಿವುಡ್ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಆಗಸ್ಟ್ 8ರಂದು ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ. ಯಶ್ ಅವರು ಇದೇ ದಿನಾಂಕದಂದು ಸಿನಿಮಾ ಶೂಟಿಂಗ್ ಆರಂಭಿಸುವುದಕ್ಕೂ ಒಂದು ಕಾರಣ ಇದೆ. ಯಶ್ ಅವರ ಜನ್ಮದಿನ ಜನವರಿ 8. ಹೀಗಾಗಿ, ಎಂಟನೇ ನಂಬರ್​ನ ಅವರು ಲಕ್ಕಿ ಎಂದು ಪರಿಗಣಿಸಿದ್ದಾರೆ. ಈ ಕಾರಣದಿಂದಲೇ ಯಶ್ ಅವರು ‘ಟಾಕ್ಸಿಕ್’ ಚಿತ್ರವನ್ನು ಡಿಸೆಂಬರ್ 8ರಂದೇ ಘೋಷಣೆ ಮಾಡಿದ್ದರು.

ಇದನ್ನೂ ಓದಿ: ಬಾಡಿಗಾರ್ಡ್​ ಮೇಲೆ ಏಕಾಏಕಿ ಗರಂ ಆದ ಯಶ್​; ಧರ್ಮಸ್ಥಳದಲ್ಲಿ ಅಂಥದ್ದೇನಾಯ್ತು?

ಗುರುವಾರದ ದಿನಾಂಕ 8-8-2024. 2+0+2+4 ಕೂಡಿದಾಗ ಬರೋದು ಕೂಡ 8. ಹೀಗಾಗಿ, ಆಗಸ್ಟ್ 8ರಿಂದ ಯಶ್ ಅವರು ಶೂಟಿಂಗ್ ಆರಂಭ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಆದಷ್ಟು ಬೇಗ ಸಿನಿಮಾ ತೆರೆಮೇಲೆ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಯಶ್ ಅವರು ಹಲವು ದೇವಾಲಯಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಸಿನಿಮಾ ಶೂಟಿಂಗ್​ಗೂ ಮೊದಲು ಅವರು ದೇವರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಹೊರವಲಯ ನೆಲಮಂಗಲದಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್​ ಹಾಕಲಾಗಿದೆ. ಇಲ್ಲಿಯೇ ಸಿನಿಮಾ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಪಾತ್ರವರ್ಗ ಇನ್ನೂ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Wed, 7 August 24

ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ