AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೂ ಮೊದಲೇ ‘ಧುರಂಧರ್ 2’ ದಾಖಲೆ ಮುರಿದ ‘ಟಾಕ್ಸಿಕ್’ ಸಿನಿಮಾ

‘ಟಾಕ್ಸಿಕ್’ ಬಿಡುಗಡೆಯ ದಿನ ಬಾಕ್ಸ್ ಆಫೀಸ್​ನಲ್ಲಿ ಸುನಾಮಿ ಸೃಷ್ಟಿ ಆಗಲಿದೆ. ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಲ್ಲೇ ಅದಕ್ಕೆ ಸೂಚನೆ ಸಿಕ್ಕಿದೆ. ‘ಧುರಂಧರ್ 2’ ಸಿನಿಮಾದ ದಾಖಲೆಯನ್ನು ‘ಟಾಕ್ಸಿಕ್’ ಸಿನಿಮಾ ಮುರಿದಿದೆ. ಈ ಸಿನಿಮಾವನ್ನು ಮೊದಲ ದಿನವೇ ನೋಡಿ ಸಂಭ್ರಮಿಸಲು ‘ರಾಕಿಂಗ್ ಸ್ಟಾರ್’ ಯಶ್ ಅಭಿಮಾನಿಗಳು ಉತ್ಸಕರಾಗಿದ್ದಾರೆ.

ಬಿಡುಗಡೆಗೂ ಮೊದಲೇ ‘ಧುರಂಧರ್ 2’ ದಾಖಲೆ ಮುರಿದ ‘ಟಾಕ್ಸಿಕ್’ ಸಿನಿಮಾ
Yash, Ranveer Singh
ಮದನ್​ ಕುಮಾರ್​
|

Updated on:Aug 23, 2026 | 3:14 PM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾ ರಿಲೀಸ್‌ಗೆ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನ ಬಾಕಿ ಇರುವಂತೆಯೇ ಆರಂಭವಾದ ಮುಂಗಡ ಬುಕಿಂಗ್‌ನಲ್ಲಿ (Advance Booking) ‘ಟಾಕ್ಸಿಕ್’ ಸಿನಿಮಾ ಧೂಳೆಬ್ಬಿಸುತ್ತಿದೆ. ‘ಧುರಂಧರ್ 2’, ‘ಅನಿಮಲ್’, ‘ಜವಾನ್’ ಮುಂತಾದ ಸಿನಿಮಾಗಳ ದಾಖಲೆಯನ್ನು ಯಶ್ (Yash) ಚಿತ್ರ ಮುರಿದುಹಾಕಿದೆ.

ಆಗಸ್ಟ್ 21ರ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ‘ಟಾಕ್ಸಿಕ್’ ಚಿತ್ರದ ಅಡ್ವಾನ್ಸ್ ಬುಕಿಂಗ್ ಆರಂಭವಾಗಿತ್ತು. ಬುಕಿಂಗ್ ತೆರೆದ ಕೇವಲ 48 ಗಂಟೆಗಳಲ್ಲಿ ಈ ಸಿನಿಮಾ ಭರ್ಜರಿ 18 ಕೋಟಿ ರೂಪಾಯಿಗಳಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿದೆ. ದೇಶಾದ್ಯಂತ ಎಲ್ಲಾ ಭಾಷೆಗಳಿಂದ ಸೇರಿ 4.7 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಇದರಲ್ಲಿ ಕನ್ನಡ ಮೂಲ ಆವೃತ್ತಿಯಿಂದಲೇ 10 ಕೋಟಿ ರೂಪಾಯಿ ಬಿಸ್ನೆಸ್ ಆಗಿರುವುದು ವಿಶೇಷ.

ಬುಕ್‌ಮೈಶೋನಲ್ಲಿ ಭಾನುವಾರ (ಆಗಸ್ಟ್ 22) ಬೆಳಗಿನ ವೇಳೆಗೆ ಪ್ರತಿ ಗಂಟೆಗೆ 10 ಸಾವಿರ ಟಿಕೆಟ್‌ಗಳು ಮಾರಾಟವಾಗುತ್ತಿದ್ದು, ಚಿತ್ರಕ್ಕೆ ಇರುವ ಕ್ರೇಜ್ ಏನೆಂಬುದನ್ನು ನಿರೂಪಿಸಿದೆ. ಹಿಂದಿ ಡಬ್ಬಿಂಗ್ ಆವೃತ್ತಿ ಕೂಡ ಬಾಕ್ಸ್ ಆಫೀಸ್ ವಿಶ್ಲೇಷಕರ ಲೆಕ್ಕಾಚಾರವನ್ನು ಬುಡಮೇಲು ಮಾಡಿದೆ. ಮೊದಲ ದಿನದ ಪ್ರದರ್ಶನಕ್ಕೆ ಉತ್ತರ ಭಾರತದಲ್ಲೇ 8 ಕೋಟಿ ರೂಪಾಯಿ ಮೌಲ್ಯದ ಟಿಕೆಟ್‌ಗಳು ಬುಕ್ ಆಗಿವೆ.

‘ಜವಾನ್’, ‘ಅನಿಮಲ್’ ದಾಖಲೆ ಉಡೀಸ್:

ಮೊದಲ 24 ಗಂಟೆಗಳಲ್ಲಿ ‘ಟಾಕ್ಸಿಕ್’ ಭಾರತದಾದ್ಯಂತ ಸುಮಾರು 2.5 ಲಕ್ಷ ಟಿಕೆಟ್‌ಗಳನ್ನು ಮಾರಾಟ ಮಾಡಿದೆ. ಈ ಮೂಲಕ ಭಾರತೀಯ ಚಿತ್ರರಂಗದ ಪ್ರಮುಖ ಬ್ಲಾಕ್‌ಬಸ್ಟರ್ ಸಿನಿಮಾಗಳಾದ ಶಾರುಖ್ ಖಾನ್ ಅವರ ‘ಜವಾನ್’ (1.5 ಲಕ್ಷ), ರಣವೀರ್ ಸಿಂಗ್ ಅವರ ‘ಧುರಂಧರ್ 2’ (1.3 ಲಕ್ಷ) ಹಾಗೂ ರಣಬೀರ್ ಕಪೂರ್ ಅವರ ‘ಅನಿಮಲ್’ (55 ಸಾವಿರ) ಚಿತ್ರಗಳ ಮೊದಲ ದಿನದ ಅಡ್ವಾನ್ಸ್ ಬುಕಿಂಗ್ ದಾಖಲೆಯನ್ನು ‘ಟಾಕ್ಸಿಕ್’ ಹಿಂದಿಕ್ಕಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್ ವೇಳೆ ಸೌಂಡ್ ಬಾಕ್ಸ್ ಬಿದ್ದು ಅಭಿಮಾನಿಗಳಿಗೆ ಗಾಯ

ಆಗಸ್ಟ್ 26ಕ್ಕೆ ‘ಟಾಕ್ಸಿಕ್’ ರಿಲೀಸ್:

‘ಕೆಜಿಎಫ್‌: ಚಾಪ್ಟರ್ 2’ ನಂತರ ಯಶ್ ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬೃಹತ್ ಪ್ರಮಾಣದಲ್ಲಿ ನಿರ್ಮಾಣವಾಗಿದೆ. ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ತೀವ್ರವಾದ ಆ್ಯಕ್ಷನ್ ಮತ್ತು ಬೋಲ್ಡ್ ದೃಶ್ಯಗಳನ್ನು ಹೊಂದಿರುವ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ‘ಎ’ ಪ್ರಮಾಣಪತ್ರ ನೀಡಿದ್ದು, ಸಿನಿಮಾ ಆಗಸ್ಟ್ 26ರಂದು ಜಾಗತಿಕವಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:43 am, Sun, 23 August 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ