ಬಿಡುಗಡೆಗೆ ರೆಡಿ ಆಯ್ತು‘ಟಾಕ್ಸಿಕ್’ ಇಂಗ್ಲಿಷ್ ಟ್ರೇಲರ್; ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯಲು ಸಜ್ಜಾದ ರಾಯ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಇಂಗ್ಲಿಷ್ ಟ್ರೇಲರ್ ಇಂದು ರಾತ್ರಿ 8.30ಕ್ಕೆ ಜಾಗತಿಕ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಹೈ-ವೋಲ್ಟೇಜ್ ಆಕ್ಷನ್ ಸಿನಿಮಾ ಪ್ರತ್ಯೇಕ ಇಂಗ್ಲಿಷ್ ಟ್ರೇಲರ್ ಮೂಲಕ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಧುಮುಕುತ್ತಿದೆ. ಪ್ರಪಂಚದಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಹಾಗೂ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಬಿಡುಗಡೆಗೆ ರೆಡಿ ಆಯ್ತು‘ಟಾಕ್ಸಿಕ್’ ಇಂಗ್ಲಿಷ್ ಟ್ರೇಲರ್; ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯಲು ಸಜ್ಜಾದ ರಾಯ
ಟಾಕ್ಸಿಕ್

Updated on: Aug 19, 2026 | 1:23 PM

ಮುಖ್ಯಾಂಶಗಳು

  • ಜಾಗತಿಕ ಅಖಾಡಕ್ಕೆ ರಾಕಿ ಭಾಯ್: ಹಾಲೀವುಡ್ ಮಟ್ಟದಲ್ಲಿ ಸದ್ದು ಮಾಡಲಿದ್ಯಾ ಟಾಕ್ಸಿಕ್?
  • ಇಂದು ರಾತ್ರಿ 8.30ಕ್ಕೆ ಧಮಾಕ: ಅಂತರರಾಷ್ಟ್ರೀಯ ಪ್ರೇಕ್ಷಕರಿಗೆ ಕಾದಿದೆ ಬಿಗ್ ಸರ್‌ಪ್ರೈಸ್
  • ಗೀತು ಮೋಹನ್‌ದಾಸ್ ಮಾಸ್ ಮ್ಯಾಜಿಕ್: ಇಂಗ್ಲಿಷ್ ಟ್ರೇಲರ್‌ ಮೇಲಿದೆ ವಿಶ್ವದ ಕಣ್ಣು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ (Toxic Movie) ಪೋಸ್ಟರ್ ಹಾಗೂ ಈ ಹಿಂದೆ ಬಿಡುಗಡೆಯಾಗಿದ್ದ ಟ್ರೇಲರ್‌ಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿ, ದೇಶಾದ್ಯಂತ ಸೌಂಡ್ ಮಾಡಿದ್ದವು. ಕೆಜಿಎಫ್ ಸರಣಿಯ ಯಶಸ್ಸಿನ ನಂತರ ಯಶ್ ಕೈಗೆತ್ತಿಕೊಂಡಿರುವ ಈ ಪ್ರಾಜೆಕ್ಟ್ ಆರಂಭದಿಂದಲೂ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇದೀಗ ಈ ಕ್ರೇಜ್ ಅನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲು ಚಿತ್ರತಂಡ ಮುಂದಾಗಿದ್ದು, ಇಂದು (ಆಗಸ್ಟ್ 19) ರಾತ್ರಿ 8.30ಕ್ಕೆ ‘ಟಾಕ್ಸಿಕ್’ ಸಿನಿಮಾದ ಇಂಗ್ಲಿಷ್ ಟ್ರೇಲರ್ ಅಧಿಕೃತವಾಗಿ ಅನಾವರಣಗೊಳ್ಳಲಿದೆ.

ಸಾಮಾನ್ಯವಾಗಿ ಭಾರತೀಯ ಸಿನಿಮಾಗಳು ಪ್ರಾದೇಶಿಕ ಭಾಷೆಗಳಲ್ಲಿ ಹಾಗೂ ಹಿಂದಿಯಲ್ಲಿ ಬಿಡುಗಡೆಯಾಗುವುದು ವಾಡಿಕೆ. ಆದರೆ ‘ಟಾಕ್ಸಿಕ್’ ತಂಡ ಇದಕ್ಕೆ ಭಿನ್ನ. ಕನ್ನಡದ ಜೊತೆಗೆ ಇಂಗ್ಲಿಷ್​​ನಲ್ಲೂ ತಂಡ ಶೂಟ್ ಮಾಡಿದೆ. ಈಗ ಇಂಗ್ಲಿಷ್ ಭಾಷೆಯಲ್ಲೇ ಪ್ರತ್ಯೇಕ ಟ್ರೇಲರ್ ಹಂಚಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ನೇರವಾಗಿ ಗುರಿಯಾಗಿಸಿಕೊಂಡಿದೆ.

ಇದನ್ನೂ ಓದಿ: ಆಂಧ್ರಪ್ರದೇಶದಲ್ಲೂ ಯಶ್ ಹವಾ; ಸಿನಿಮಾಗೆ ಟಿಕೆಟ್ ದರ ಏರಿಕೆ ಫಿಕ್ಸ್

ಹಾಲೀವುಡ್ ಶೈಲಿಯ ಮೇಕಿಂಗ್ ಮತ್ತು ವಿಭಿನ್ನ ಆಕ್ಷನ್ ಕಥಾಹಂದರವನ್ನು ಹೊಂದಿರುವ ಈ ಚಿತ್ರವನ್ನು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದು, ಯಶ್ ಅವರ ಮಾಸ್ ಅವತಾರ ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಹೇಗೆ ತಲುಪಲಿದೆ ಎಂಬ ಕಾತರ ಎಲ್ಲರಲ್ಲಿದೆ. ಇಂಗ್ಲಿಷ್ ಟ್ರೇಲರ್ ರಿಲೀಸ್ ಬಳಿಕ ಹಾಲಿವುಡ್ ಪ್ರೇಕ್ಷಕರಲ್ಲಿ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚುವ ಸಾಧ್ಯತೆ ಇದೆ.

ಇಂದು ರಾತ್ರಿ 8.30ಕ್ಕೆ ಯೂಟ್ಯೂಬ್ ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಈ ಇಂಗ್ಲಿಷ್ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ನಿರ್ಮಾಣ ಸಂಸ್ಥೆ ಕೆವಿಎನ್ ತಿಳಿಸಿದೆ. ವಿಶ್ವದಾದ್ಯಂತ ಇರುವ ಸಿನಿಮಾ ಪ್ರಿಯರು ಮತ್ತು ಯಶ್ ಅಭಿಮಾನಿಗಳು ಈ ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಇಂಗ್ಲಿಷ್ ಟ್ರೇಲರ್ ಮೂಲಕ ಟಾಕ್ಸಿಕ್ ಸಿನಿಮಾ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂಬ ಭರವಸೆಯಲ್ಲಿ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us