AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಮೊದಲ ದಿನದ ಗಳಿಕೆ 150 ಕೋಟಿ ರೂಪಾಯಿ; ಚಿತ್ರತಂಡದ ಅಧಿಕೃತ ಮಾಹಿತಿ

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ. ಚಿತ್ರತಂಡದ ಪ್ರಕಾರ, ಈ ಸಿನಿಮಾ ವಿಶ್ವಾದ್ಯಂತ 150 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಹೊಸ ಪೋಸ್ಟರ್ ಮೂಲಕ ಚಿತ್ರತಂಡ ಈ ವಿಷಯ ಹಂಚಿಕೊಂಡಿದೆ.

‘ಟಾಕ್ಸಿಕ್’ ಮೊದಲ ದಿನದ ಗಳಿಕೆ 150 ಕೋಟಿ ರೂಪಾಯಿ; ಚಿತ್ರತಂಡದ ಅಧಿಕೃತ ಮಾಹಿತಿ
Yash
ಮದನ್​ ಕುಮಾರ್​
|

Updated on: Aug 27, 2026 | 6:42 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಟಾಕ್ಸಿಕ್’ (Toxic) ಚಿತ್ರ ಬಿಡುಗಡೆಯಾಗಿ ಮೊದಲ ದಿನವೇ ಧೂಳೆಬ್ಬಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡ ಈ ಚಿತ್ರ ಎಲ್ಲ ಕಡೆಗಳಲ್ಲಿ ಹೌಸ್​ಫುಲ್ ಆಗಿದೆ. ಕನ್ನಡದ ಜೊತೆಗೆ ಹಿಂದಿ ವರ್ಷನ್ ಕೂಡ ಭರ್ಜರಿ ಕಲೆಕ್ಷನ್ (Box Office Collection) ಮಾಡಿದೆ. ಮೊದಲ ದಿನದ ಗಲ್ಲಾಪೆಟ್ಟಿಗೆ ಗಳಿಕೆ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ. ಚಿತ್ರತಂಡ ಹಂಚಿಕೊಂಡ ಪೋಸ್ಟ್ ಪ್ರಕಾರ, ‘ಟಾಕ್ಸಿಕ್’ ಸಿನಿಮಾ ಫಸ್ಟ್ ಡೇ ವಿಶ್ವಾದ್ಯಂತ ಬರೋಬ್ಬರಿ 150 ಕೋಟಿ ರೂಪಾಯಿ ಬಾಚಿಕೊಂಡಿದೆ.

ಯಶ್ ಅಭಿಮಾನಿಗಳು ‘ಟಾಕ್ಸಿಕ್’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಹಾಗಾಗಿ ಬಿಡುಗಡೆಗೂ ಮುನ್ನ ದಾಖಲೆ ಪ್ರಮಾಣದಲ್ಲಿ ಬುಕಿಂಗ್ ಆಗಿತ್ತು. ಎಲ್ಲ ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್ ಸ್ಕ್ರೀನ್ ಚಿತ್ರಮಂದಿಗಳಲ್ಲಿ ಶೋಗಳು ಹೌಸ್​ಫುಲ್ ಆದವು. ಮುಂಚಾನೆ 6 ಗಂಟೆಗೆ ಮೊದಲ ಶೋ ಆರಂಭ ಆಗಿತ್ತು. ಟಿಕೆಟ್ ಬೆಲೆ ಜಾಸ್ತಿ ಇದ್ದಿದ್ದು ಕೂಡ ಕಲೆಕ್ಷನ್ ಹೆಚ್ಚಲು ಸಹಕಾರಿ ಆಯಿತು.

View this post on Instagram

A post shared by TOXIC (@toxic_themovie)

ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಅದ್ದೂರಿಯಾಗಿ ನಿರ್ಮಾಣ ಮಾಡಿದೆ. ಇಡೀ ಸಿನಿಮಾ ಸಖತ್ ಶ್ರೀಮಂತವಾಗಿ ಮೂಡಿಬಂದಿದೆ. ಚಿತ್ರದ ಮೇಕಿಂಗ್ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅದರ ನಡುವೆಯೂ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾದ ಕಥೆ ಬಗ್ಗೆ ಕೆಲವರು ತಕಾರಾರು ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಕಲೆಕ್ಷನ್ ಆಗಲಿದೆ ಎಂಬುದನ್ನು ಕಾದುನೋಡಬೇಕಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆ ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ನಯನತಾರಾ, ತಾರಾ ಸುತಾರಿಯಾ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಸಿನಿಮಾದಲ್ಲಿ ಹಲವು ಬೋಲ್ಡ್ ದೃಶ್ಯಗಳಿವೆ. ಆ್ಯಕ್ಷನ್ ದೃಶ್ಯಗಳಿಗೆ ಯಾವುದೇ ಕೊರತೆ ಇಲ್ಲ. ಮಾಸ್, ಆ್ಯಕ್ಷನ್ ಸಿನಿಮಾ ಬಯಸುವವರು ‘ಟಾಕ್ಸಿಕ್’ ನೋಡಿ ಎಂಜಾಯ್ ಮಾಡಿದ್ದಾರೆ.

ಇದನ್ನೂ ಓದಿ: Toxic Movie Review: ಆರಂಭದಿಂದ ಅಂತ್ಯದ ತನಕ ಆ್ಯಕ್ಷನ್ ಅಬ್ಬರದ ‘ಟಾಕ್ಸಿಕ್’

ಈ ಚಿತ್ರಕ್ಕೆ ಪೈಪೋಟಿ ಕೂಡ ಇದೆ. ಈಗಾಗಲೇ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದ್ದ ‘ದಿ ಆಡಸ್ಸಿ’, ‘ವಿಶ್ವನಾಥ್ ಆ್ಯಂಡ್ ಸನ್ಸ್’, ‘ಇರುಮುಡಿ’ ಮುಂತಾದ ಸಿನಿಮಾಗಳು ಪೈಪೋಟಿ ನೀಡುತ್ತಿವೆ. ‘ಟಾಕ್ಸಿಕ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಪರದೆಗಳ ಸಂಖ್ಯೆ ಕಡಿಮೆ ಆಗುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು