AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಮತ್ತೆ ಮುಂದಕ್ಕೆ ಹೋಗುತ್ತಾ? ಅನುಮಾನದ ಪ್ರಶ್ನೆಗೆ ಉತ್ತರ ನೀಡಿದ ನಟಿ

ಇರಾನ್-ಇಸ್ರೇಲ್ ಯುದ್ಧದ ಪರಿಸ್ಥಿತಿ ಸದ್ಯಕ್ಕೆ ತಿಳಿಯಾಗಿದೆ. ಆದರೆ ಸಂಪೂರ್ಣ ಅಂತ್ಯವಾಗಿಲ್ಲ. ಆದ್ದರಿಂದ ‘ಟಾಕ್ಸಿಕ್’ ಬಿಡುಗಡೆ ಬಗ್ಗೆ ಕೆಲವರಿಗೆ ಅನುಮಾನ ಇದೆ. ಜೂನ್ 4ರಂದು ಈ ಸಿನಿಮಾ ರಿಲೀಸ್ ಆಗುತ್ತಾ ಅಥವಾ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಆ ಬಗ್ಗೆ ನಟಿ ತಾರಾ ಸುತಾರಿಯಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಟಾಕ್ಸಿಕ್’ ಮತ್ತೆ ಮುಂದಕ್ಕೆ ಹೋಗುತ್ತಾ? ಅನುಮಾನದ ಪ್ರಶ್ನೆಗೆ ಉತ್ತರ ನೀಡಿದ ನಟಿ
Tara SutariaImage Credit source: KVN Productions
ಮದನ್​ ಕುಮಾರ್​
|

Updated on: Apr 15, 2026 | 3:18 PM

Share

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿಮಾನಿಗಳು ಬಹುನಿರೀಕ್ಷೆಯಿಂದ ಕಾಯುತ್ತಿರುವ ‘ಟಾಕ್ಸಿಕ್’ (Toxic) ಸಿನಿಮಾ ಮುಂದೂಡಿಕೆಯಾಗಲಿದೆ ಎಂಬ ಸುದ್ದಿಗಳು ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದವು. ಜೂನ್ 4ರಂದು ಸಿನಿಮಾ ತೆರೆಗೆ ಬರುವುದು ಅನುಮಾನ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಈ ಎಲ್ಲಾ ವದಂತಿಗಳಿಗೆ ‘ಟಾಕ್ಸಿಕ್’ ಸಿನಿಮಾದ ನಟಿ ತಾರಾ ಸುತಾರಿಯಾ (Tara Sutaria) ಅವರು ತೆರೆ ಎಳೆದಿದ್ದಾರೆ. ಈ ಸಿನಿಮಾದಲ್ಲಿ ತಾರಾ ಸುತಾರಿಯಾ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ.

ಇತ್ತೀಚೆಗೆ ಬಾಲಿವುಡ್​ನ ಖ್ಯಾತ ನಿರ್ದೇಶಕಿ ಹಾಗೂ ನೃತ್ಯ ಸಂಯೋಜಕಿ ಫರ್ಹಾ ಖಾನ್ ಅವರ ಯೂಟ್ಯೂಬ್ ವ್ಲಾಗ್‌ನಲ್ಲಿ ತಾರಾ ಸುತಾರಿಯಾ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಮ್ಮ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದ ಬಗ್ಗೆ ಮಾತನಾಡುತ್ತಾ, ‘ಟಾಕ್ಸಿಕ್’ ಚಿತ್ರದ ಬಿಡುಗಡೆಯ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸಿನಿಮಾ ನಿಗದಿತ ಸಮಯಕ್ಕೇ ಬಿಡುಗಡೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚರ್ಚೆಯ ಮಧ್ಯೆ ತಾರಾ ಸುತಾರಿಯಾ ಅವರು, ‘ಟಾಕ್ಸಿಕ್ ಸಿನಿಮಾ ಜೂನ್ 4ರಂದು ತೆರೆಗೆ ಬರಲಿದೆ’ ಎಂದು ಖಚಿತಪಡಿಸುವ ಮೂಲಕ ಅಭಿಮಾನಿಗಳಲ್ಲಿ ಮನೆಮಾಡಿದ್ದ ಆತಂಕವನ್ನು ದೂರ ಮಾಡಿದ್ದಾರೆ. ಇದರಿಂದಾಗಿ ಚಿತ್ರತಂಡ ಹಳೇ ಪ್ಲಾನ್‌ನಂತೆಯೇ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ ಎಂಬುದು ಸ್ಪಷ್ಟವಾಗಿದೆ. ಈ ಚಿತ್ರದಲ್ಲಿ ತಾರಾ ಸುತಾರಿಯಾ ಅವರ ಪಾತ್ರ ಹೇಗಿದೆ ಎಂಬುದನ್ನು ತಿಳಿಯಲು ಅವರ ಫ್ಯಾನ್ಸ್ ಕಾದಿದ್ದಾರೆ.

ಗೀತು ಮೋಹನ್ ದಾಸ್ ಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಯಶ್ ಕೂಡ ಚಿತ್ರಕಥೆಯಲ್ಲಿ ಸಾಥ್ ನೀಡಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಹಾಗೂ ಯಶ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಯಶ್ ಜೊತೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್​’ ಚಿತ್ರಕ್ಕಾಗಿ ಫುಲ್ ಎಗ್ಸೈಟ್ ಆದ ತಾರಾ ಸುತಾರಿಯಾ

ಈ ಹಿಂದೆ ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಬೇಕಿತ್ತು. ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಜೊತೆ ಬಾಕ್ಸ್ ಆಫೀಸ್ ಹಣಾಹಣಿ ನಡೆಯಬೇಕಿತ್ತು. ಆದರೆ ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದಾಗಿ ಬಿಡುಗಡೆಯನ್ನು ಜೂನ್ 4ಕ್ಕೆ ಮುಂದೂಡಲಾಯಿತು. ಈ ಸಿನಿಮಾದ ಟೀಸರ್ ಸಖತ್ ಸದ್ದು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us