ಪಕ್ಕಾ ಟ್ರೆಡೀಷನಲ್; ಪಂಚೆ ಉಟ್ಟು ಧರ್ಮಸ್ಥಳದಲ್ಲಿ ಕಾಣಿಸಿಕೊಂಡ ನಟ ಯಶ್

|

Updated on: Aug 06, 2024 | 12:25 PM

ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲೂ ಯಶ್ ನಟಿಸುತ್ತಿದ್ದಾರೆ. ಈಗ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ಪಕ್ಕಾ ಟ್ರೆಡೀಷನಲ್; ಪಂಚೆ ಉಟ್ಟು ಧರ್ಮಸ್ಥಳದಲ್ಲಿ ಕಾಣಿಸಿಕೊಂಡ ನಟ ಯಶ್
ಯಶ್
Follow us on

ನಟ ಯಶ್ ಅವರು ಇಂದು (ಆಗಸ್ಟ್ 6) ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಇದರ ಶೂಟಿಂಗ್ ಆರಂಭ ಆಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ಬಂದು ಮಂಜುನಾಥನ ದರ್ಶನ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಯಶ್ ಅವರು ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಬಳಿಕ ಅವರು ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಧರ್ಮಸ್ಥಳದಲ್ಲಿ ಯಶ್ ಅವರು ಮೊದಲು ದೇವರ ದರ್ಶನ ಪಡೆದಿದ್ದಾರೆ. ಆ ಬಳಿಕ ಧರ್ಮಾಧಿಕಾ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಆ ಬಳಿಕ ಇಬ್ಬರೂ ಕುಳಿತು ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಯಶ್​ ಅವರು ಬಂದ ಸುದ್ದಿ ಕೇಳಿ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು.

ಇದನ್ನೂ ಓದಿ: ಯಶ್ ನಟನೆಯ ‘ರಾಮಾಯಣ’ದ ಪೋಸ್ಟ್ ಪ್ರೊಡಕ್ಷನ್​ಗೆ 600 ದಿನ; 2027ಕ್ಕೆ ಸಿನಿಮಾ ರಿಲೀಸ್?

ಯಶ್ ಅವರು ಸದ್ಯ ‘ಟಾಕ್ಸಿಕ್’ ಶೂಟ್​ನಲ್ಲಿ ಬ್ಯುಸಿ ಆಗಬೇಕಿದೆ. ಈ ಸಿನಿಮಾ ಮುಂದಿನ ಏಪ್ರಿಲ್​ನಲ್ಲಿ ರಿಲೀಸ್ ಆಗಲಿದೆ. ಆದರೆ, ಈಗಾಗಲೇ ಸಿನಿಮಾ ಕೆಲಸಗಳು ವಿಳಂಬ ಆಗುತ್ತಿರುವುದರಿಂದ ಸಿನಿಮಾ ಅಂದುಕೊಂಡ ದಿನಾಂಕದಂದು ರಿಲೀಸ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಅವರು ಹಿಂದಿಯ ‘ರಾಮಾಯಣ’ ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:00 pm, Tue, 6 August 24