AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್ ಎರಡನೇ ಬಾಲಿವುಡ್ ಪ್ರಾಜೆಕ್ಟ್ ಶಾರುಖ್ ಜೊತೆ? ನಡೆಯುತ್ತಿದೆ ಮಾತುಕತೆ

ಬಾಲಿವುಡ್​ನಲ್ಲಿ ನಿತೇಶ್ ತಿವಾರಿ ಅವರು ರಾಮಾಯಣ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರಂತೆ. ಇದರ ಜೊತೆಗೆ ಯಶ್ ಅವರು ಬಾಲಿವುಡ್ ನಟ ಶಾರುಖ್ ಖಾನ್ ಜೊತೆ ಕೆಲಸ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Yash: ಯಶ್ ಎರಡನೇ ಬಾಲಿವುಡ್ ಪ್ರಾಜೆಕ್ಟ್ ಶಾರುಖ್ ಜೊತೆ? ನಡೆಯುತ್ತಿದೆ ಮಾತುಕತೆ
ಯಶ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on:Jan 30, 2024 | 11:06 AM

Share

‘ಕೆಜಿಎಫ್ 2’ ಚಿತ್ರದಿಂದ ಯಶ್ (Yash) ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಸದ್ಯ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗಲಿದೆ. ಇದಾದ ಬಳಿಕ ಅವರು ನಿತೇಶ್ ತಿವಾರಿ ನಿರ್ದೇಶನ ಮಾಡಲಿರುವ ‘ರಾಮಾಯಣ’ ಸಿನಿಮಾದಲ್ಲಿ (Ramayana Movie) ನಟಿಸಲಿದ್ದಾರೆ. ಈಗ ಅವರು ಮತ್ತೊಂದು ಬಾಲಿವುಡ್ ಪ್ರಾಜೆಕ್ಟ್ ಒಪ್ಪಿಕೊಳ್ಳಲು ರೆಡಿ ಆಗಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ವಿಚಾರ ಕೇಳಿ ಯಶ್​ ಫ್ಯಾನ್ಸ್​ಗೆ ಖುಷಿ ಆಗಿದೆ.

ನಿತೇಶ್ ತಿವಾರಿ ಅವರು ಬಾಲಿವುಡ್​ನಲ್ಲಿ ರಾಮಾಯಣ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರಂತೆ. ಇದರ ಜೊತೆಗೆ ಯಶ್ ಅವರು ಶಾರುಖ್ ಖಾನ್ ಜೊತೆ ಕೆಲಸ ಮಾಡೋ ಇಂಗಿತ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಒಟ್ಟಾಗಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದಾರೆ. ಆದರೆ, ಪರ್ಫೆಕ್ಟೆ ಸ್ಕ್ರಿಪ್ಟ್​ಗಾಗಿ ಇವರು ಕಾಯುತ್ತಿದ್ದಾರೆ.

ಶಾರುಖ್ ಖಾನ್ ಹಾಗೂ ಯಶ್ ಇಬ್ಬರೂ ದೊಡ್ಡ ಅಭಿಮಾನಿಬಳಗ ಹೊಂದಿದ್ದಾರೆ. ಸಿನಿಮಾ ಒಪ್ಪಿಕೊಳ್ಳುವಲ್ಲಿ ಇಬ್ಬರಿಗೂ ಆತುರ ಇಲ್ಲ. ಅಭಿಮಾನಿಗಳನ್ನು ನಿರಾಸೆ ಮಾಡಲು ಇಬ್ಬರೂ ಸಿದ್ಧರಿಲ್ಲ. ಹೀಗಾಗಿ, ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಬೇಕು ಎಂದರೆ ಸ್ಕ್ರಿಪ್ಟ್​ ಸ್ಟ್ರಾಂಗ್ ಆಗಿಯೇ ಇರಬೇಕು.

ಇನ್ನು, ಯಶ್ ಅವರು ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್​​ಟೇನ್​ಮೆಂಟ್ ಜೊತೆ ಒಂದು ಹೊಸ ಪ್ರಾಜೆಕ್ಟ್​ಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಕೂಡ ಇರುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Chikkanna: ಯಶ್-ರಾಧಿಕಾ ದಂಪತಿ ಜೊತೆ ಬ್ರೇಕ್​ಫಾಸ್ಟ್ ಮಾಡಿದ ‌ಚಿಕ್ಕಣ್ಣ

ಯಶ್ ಅವರ ಸಂಪೂರ್ಣ ಗಮನ ‘ಟಾಕ್ಸಿಕ್’ ಸಿನಿಮಾ ಮೇಲಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಮಾತ್ರ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಕರೀನಾ ಕಪೂರ್ ನಾಯಕಿ ಪಾತ್ರ ಮಾಡಲಿದ್ದಾರೆ ಎನ್ನುವ ಸುದ್ದಿ ಇದೆ. ಇದನ್ನು ಕರೀನಾ ತಂಡದವರು ಪರೋಕ್ಷವಾಗಿ ಒಪ್ಪಿಕೊಂಡಿದ್ದರು. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಚಿತ್ರ ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:59 am, Tue, 30 January 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ