‘ಕೆಜಿಎಫ್ 2’ ಚಿತ್ರದಿಂದ ಯಶ್ (Yash) ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಸದ್ಯ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗಲಿದೆ. ಇದಾದ ಬಳಿಕ ಅವರು ನಿತೇಶ್ ತಿವಾರಿ ನಿರ್ದೇಶನ ಮಾಡಲಿರುವ ‘ರಾಮಾಯಣ’ ಸಿನಿಮಾದಲ್ಲಿ (Ramayana Movie) ನಟಿಸಲಿದ್ದಾರೆ. ಈಗ ಅವರು ಮತ್ತೊಂದು ಬಾಲಿವುಡ್ ಪ್ರಾಜೆಕ್ಟ್ ಒಪ್ಪಿಕೊಳ್ಳಲು ರೆಡಿ ಆಗಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ವಿಚಾರ ಕೇಳಿ ಯಶ್ ಫ್ಯಾನ್ಸ್ಗೆ ಖುಷಿ ಆಗಿದೆ.
ನಿತೇಶ್ ತಿವಾರಿ ಅವರು ಬಾಲಿವುಡ್ನಲ್ಲಿ ರಾಮಾಯಣ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರಂತೆ. ಇದರ ಜೊತೆಗೆ ಯಶ್ ಅವರು ಶಾರುಖ್ ಖಾನ್ ಜೊತೆ ಕೆಲಸ ಮಾಡೋ ಇಂಗಿತ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಒಟ್ಟಾಗಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದಾರೆ. ಆದರೆ, ಪರ್ಫೆಕ್ಟೆ ಸ್ಕ್ರಿಪ್ಟ್ಗಾಗಿ ಇವರು ಕಾಯುತ್ತಿದ್ದಾರೆ.
ಶಾರುಖ್ ಖಾನ್ ಹಾಗೂ ಯಶ್ ಇಬ್ಬರೂ ದೊಡ್ಡ ಅಭಿಮಾನಿಬಳಗ ಹೊಂದಿದ್ದಾರೆ. ಸಿನಿಮಾ ಒಪ್ಪಿಕೊಳ್ಳುವಲ್ಲಿ ಇಬ್ಬರಿಗೂ ಆತುರ ಇಲ್ಲ. ಅಭಿಮಾನಿಗಳನ್ನು ನಿರಾಸೆ ಮಾಡಲು ಇಬ್ಬರೂ ಸಿದ್ಧರಿಲ್ಲ. ಹೀಗಾಗಿ, ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಬೇಕು ಎಂದರೆ ಸ್ಕ್ರಿಪ್ಟ್ ಸ್ಟ್ರಾಂಗ್ ಆಗಿಯೇ ಇರಬೇಕು.
ಇನ್ನು, ಯಶ್ ಅವರು ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಜೊತೆ ಒಂದು ಹೊಸ ಪ್ರಾಜೆಕ್ಟ್ಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಕೂಡ ಇರುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.
ಇದನ್ನೂ ಓದಿ: Chikkanna: ಯಶ್-ರಾಧಿಕಾ ದಂಪತಿ ಜೊತೆ ಬ್ರೇಕ್ಫಾಸ್ಟ್ ಮಾಡಿದ ಚಿಕ್ಕಣ್ಣ
ಯಶ್ ಅವರ ಸಂಪೂರ್ಣ ಗಮನ ‘ಟಾಕ್ಸಿಕ್’ ಸಿನಿಮಾ ಮೇಲಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಮಾತ್ರ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಕರೀನಾ ಕಪೂರ್ ನಾಯಕಿ ಪಾತ್ರ ಮಾಡಲಿದ್ದಾರೆ ಎನ್ನುವ ಸುದ್ದಿ ಇದೆ. ಇದನ್ನು ಕರೀನಾ ತಂಡದವರು ಪರೋಕ್ಷವಾಗಿ ಒಪ್ಪಿಕೊಂಡಿದ್ದರು. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಚಿತ್ರ ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:59 am, Tue, 30 January 24