AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ’ಯ ಕೊಂಡಾಡಿದ ಯಶ್, ಸಿನಿಮಾ ಬಗ್ಗೆ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಯಶ್, ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಿಸಿ, ಸಿನಿಮಾವನ್ನು ಕೊಂಡಾಡಿ ಟ್ವೀಟ್ ಮಾಡಿದ್ದಾರೆ. ಅದ್ಭುತವಾದ ಸಿನಿಮಾ ನೀಡಿದ್ದಕ್ಕೆ ಚಿತ್ರತಂಡಕ್ಕೆ ಧನ್ಯವಾದ ಹೇಳಿದ್ದಾರೆ.

‘ಕಲ್ಕಿ’ಯ ಕೊಂಡಾಡಿದ ಯಶ್, ಸಿನಿಮಾ ಬಗ್ಗೆ ಹೇಳಿದ್ದೇನು?
ಮಂಜುನಾಥ ಸಿ.
|

Updated on: Jun 28, 2024 | 6:51 PM

Share

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ನಿನ್ನೆ (ಜೂನ್ 27) ಬಿಡುಗಡೆ ಆಗಿ ಎಲ್ಲೆಡೆ ಸದ್ದು ಮಾಡುತ್ತಿದೆ. ಎಲ್ಲ ವರ್ಗದ ಪ್ರೇಕ್ಷಕರಿಂದಲೂ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ತಮ್ಮ ಕುಟುಂಬ ಸದಸ್ಯರನ್ನು ಕರೆದುಕೊಂಡು ಬಂದು ಸಿನಿಮಾ ತೋರಿಸುತ್ತಿದ್ದಾರೆ. ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಮಾತ್ರವೇ ಅಲ್ಲದೆ ಸೆಲೆಬ್ರಿಟಿಗಳು ಸಹ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಖುಷಿ ಪಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಳ್ಳುತ್ತಿದ್ದಾರೆ.

ಅಪರೂಪಕ್ಕೆ ಟ್ವೀಟ್ ಮಾಡುವ ನಟ ಯಶ್ ಇದೀಗ ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಿಸಿ ಸಿನಿಮಾ ಬಗ್ಗೆ ಮೆಚ್ಚಿ ಟ್ವೀಟ್ ಮಾಡಿದ್ದಾರೆ. ‘ಕಣ್ಣಿಗೆ ಹಬ್ಬವಾಗುವ ರೀತಿ ಅದ್ಭುತ ದೃಶ್ಯಗಳನ್ನು ಕಟ್ಟಿಕೊಟ್ಟಿರುವ ‘ಕಲ್ಕಿ 2898 ಎಡಿ’ ಚಿತ್ರತಂಡಕ್ಕೆ ಶುಭಾಶಯಗಳು. ಈ ಸಿನಿಮಾವು ಹೆಚ್ಚು ಸೃಜನಶೀಲವಾಗಿ ಕತೆಗಳನ್ನು ಹೇಳಲು ದಾರಿ ತೋರಿಸಿಕೊಟ್ಟಿದೆ. ನಿರ್ದೇಶಕ ನಾಗ್ ಅಶ್ವಿನ್ ಮತ್ತು ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್, ಸಿನಿಮಾ ಮಂದಿ ದೊಡ್ಡದಾಗಿ ಕನಸು ಕಂಡು ದೊಡ್ಡ ಹೆಜ್ಜೆಗಳನ್ನು ಇಡಲು ಧೈರ್ಯ ಕೊಟ್ಟಿದೆ’ ಎಂದಿದ್ದಾರೆ.

ಇದನ್ನೂ ಓದಿ:‘ಕಲ್ಕಿ’ ಸಿನಿಮಾಕ್ಕೆ ಪ್ರಭಾಸ್ ಅನ್ನೇ ಆಯ್ಕೆ ಮಾಡಿದ್ದೇಕೆ: ನಿರ್ದೇಶಕ ಕೊಟ್ಟ ಕಾರಣವಿದು?

ಮುಂದುವರೆದು, ‘ಡಾರ್ಲಿಂಗ್ ಪ್ರಭಾಸ್, ಅಮಿತಾಬ್ ಬಚ್ಚನ್ ಸರ್, ಕಮಲ್ ಹಾಸನ್ ಸರ್ ಮತ್ತು ದೀಪಿಕಾ ಪಡುಕೋಣೆ ಹಾಗೂ ಕೆಲವು ಸರ್ಪ್ರೈಸಿಂಗ್ ಕ್ಯಾಮಿಯೋ ಒಟ್ಟಿಗೆ ನೋಡುವುದು ಒಂದು ಅದ್ಭುತವಾದ ಅನುಭವ. ಇಂಥಹಾ ಒಂದು ಅದ್ಭುತವಾದ ಸಿನಿಮಾವನ್ನು ಪ್ರೇಕ್ಷಕರ ಎದುರು ತಂದ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು, ಈ ಸಿನಿಮಾ ನಿಜಕ್ಕೂ ಬೆಳ್ಳಿತೆರೆಯನ್ನು ಬೆಳಗಿಸುತ್ತಿದೆ’ ಎಂದಿದ್ದಾರೆ.

ಯಶ್ ಸಹ ಭಾರಿ ಬಜೆಟ್​ನ ಸಿನಿಮಾ ಒಂದನ್ನು ನೀಡಲು ಶ್ರಮಪಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾವನ್ನು ನಟ ಯಶ್ ಘೋಷಣೆ ಮಾಡಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾವನ್ನು ಮಲಯಾಳಂ ನಟಿ ಮತ್ತು ನಿರ್ದೇಶಕಿ ಗೀತು ಮೋಹನ್​ದಾಸ್ ‘ಟಾಕ್ಸಿಕ್​’ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್​ನವರು ಸಿನಿಮಾದ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಬಾಲಿವುಡ್ ನಟಿಯರು ನಟಿಸುತ್ತಿದ್ದಾರೆ. ಹಾಲಿವುಡ್​ನ ಆಕ್ಷನ್ ಕೊರಿಯೋಗ್ರಾಫರ್ ‘ಟಾಕ್ಸಿಕ್’ ಸಿನಿಮಾಕ್ಕೆ ಫೈಟ್ಸ್ ಕಂಪೋಸ್ ಮಾಡಲಿದ್ದಾರೆ. ಸಿನಿಮಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ