AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ
ಯಶ್
ರಾಜೇಶ್ ದುಗ್ಗುಮನೆ
|

Updated on: May 17, 2024 | 7:31 AM

Share

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರಕ್ಕೆ ಯಶ್ (Yash) ನಿರ್ಮಾಪಕನಾಗಿರೋದು ಗೊತ್ತಿರುವ ವಿಚಾರವೇ. ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡರೆ, ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರೆ. ಅವರು ಈ ಪಾತ್ರವನ್ನು ಒಪ್ಪಿಕೊಳ್ಳುವುದರ ಜೊತೆಗೆ ನಿರ್ಮಾಪಕನೂ ಆಗಿರುವುದರಿಂದ ಅವರಿಗೆ ಲಾಭದಲ್ಲಿ ಪಾಲು ಸಿಗಲಿದೆ. ಈ ಚಿತ್ರದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗದೆ ಇದ್ದರೂ ಒಂದಷ್ಟು ವಿಚಾರಗಳು ಜೋರಾಗಿ ಚರ್ಚೆಯಲ್ಲಿದೆ. ಈ ಚಿತ್ರಕ್ಕೆ ಬಂಡವಾಳ ಹೂಡಿರೋ ಯಶ್​ಗೆ ಲಾಭದಲ್ಲಿ ಸಿಗೋ ಪಾಲೆಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

ಏಪ್ರಿಲ್​ನಲ್ಲಿ ಯಶ್ ಅವರು ‘ರಾಮಾಯಣ’ದ ಬಗ್ಗೆ ಮಾತನಾಡಿದ್ದರು. ಸಿನಿಮಾದ ಪಾತ್ರದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಮಾಡಿರಲಿಲ್ಲ. ಆದರೆ, ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದು ಏಕೆ ಎಂದು ವಿವರಿಸಿದ್ದರು. ಇದು ಅವರ ಕನಸಿನ ಪ್ರಾಜೆಕ್ಟ್​ ಅಂತೆ. ಹೀಗಾಗಿ ಸಿನಿಮಾ ನಿರ್ಮಾಣ ಮಾಡಲು ಮುಂದಾದರು. ಯಶ್ ಅವರನ್ನು ರಾವಣನಾಗಿ ಫ್ಯಾನ್ಸ್ ಹೇಗೆ ಸ್ವೀಕರಿಸುತ್ತಾರೆ ಅನ್ನೋ ಕುತೂಹಲ ಅನೇಕರಿಗೆ ಮೂಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ: ರಣ್​ಬೀರ್-ಸಾಯಿ ಪಲ್ಲವಿ ಫೋಟೊ ಲೀಕ್

‘ರಾಮಾಯಣ’ದ ಬಜೆಟ್ 835 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಲಿದೆ. ಇದರ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ 600 ದಿನಗಳ ಅವಶ್ಯಕತೆ ಇದೆಯಂತೆ. ಗ್ಲೋಬಲ್ ಲೆವೆಲ್​ನಲ್ಲಿ ಸಿನಿಮಾ ಮಾಡಲು ತಂಡ ನಿರ್ಧರಿಸಿದೆ. ಸಾಯಿ ಪಲ್ಲವಿ ಅವರು ಸೀತೆಯಾಗಿ, ಅರುಣ್ ಗೋವಿಲ್ ಹಾಗೂ ಲಾರಾ ದತ್ ಅವರು ದಶರಥ ಹಾಗೂ ಕೈಕೇಯಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಸೆಟ್​ ಫೋಟೋ ವೈರಲ್ ಆಗಿದೆ. ಈ ಲೀಕ್ ತಡೆಯಲು ಫ್ಯಾನ್ಸ್ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ