ಯಶ್ ಬಾಲ್ಯದಲ್ಲಿ ಹೇಗೆ ಕಾಣ್ತಿದ್ರು ನೋಡಿ; ಇಲ್ಲಿದೆ ಕ್ಯೂಟ್ ಫೋಟೋ
ಯಶ್ ಅವರು ಮೈಸೂರಿನವರು. ಅವರ ತಂದೆ ಅರುಣ್ ಕುಮಾರ್ ಕೆಎಸ್ಆರ್ಟಿಸಿ ಡ್ರೈವರ್ ಆಗಿದ್ದರು. ಅವರ ತಾಯಿ ಪುಷ್ಪಾ ಮನೆ ನೋಡಿಕೊಂಡು ಇದ್ದವರು. ಈಗ ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಾಲ್ಯದಲ್ಲಿ ಮನೆಯಲ್ಲಿ ಕಷ್ಟ ಇದ್ದರೂ ಯಶ್ ಅವರ ವರೆಗೆ ಬರದಂತೆ ಕುಟುಂಬ ನೋಡಿಕೊಂಡಿತ್ತು. ಈ ಬಗ್ಗೆ ಯಶ್ಗೆ ಖುಷಿ ಇದೆ.

ಯಶ್ (Yash) ಅವರು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋದು ಗೊತ್ತೇ ಇದೆ. ‘ಟಾಕ್ಸಿಕ್’ ಸಿನಿಮಾ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆಯಲು ಅವರು ರೆಡಿ ಆಗಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಯಶ್ ಅವರ ಬಾಲ್ಯದ ಫೋಟೋ ವೈರಲ್ ಆಗಿದೆ. ಯಶ್ ಜನ್ಮದಿನದ ಸಂದರ್ಭದಲ್ಲಿ ಈ ಫೋಟೋ ವೈರಲ್ ಮಾಡಲಾಗಿದೆ. ಅವರ ಬರ್ತ್ಡೇ ಜನವರಿ 8. ಅದನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ.
ಯಶ್ ಅವರು ಮೈಸೂರಿನವರು. ಅವರ ತಂದೆ ಅರುಣ್ ಕುಮಾರ್ ಕೆಎಸ್ಆರ್ಟಿಸಿ ಡ್ರೈವರ್ ಆಗಿದ್ದರು. ಅವರ ತಾಯಿ ಪುಷ್ಪಾ ಮನೆ ನೋಡಿಕೊಂಡು ಇದ್ದವರು. ಈಗ ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಾಲ್ಯದಲ್ಲಿ ಮನೆಯಲ್ಲಿ ಕಷ್ಟ ಇದ್ದರೂ ಯಶ್ ಅವರ ವರೆಗೆ ಬರದಂತೆ ಕುಟುಂಬ ನೋಡಿಕೊಂಡಿತ್ತು. ಅವರು ಮೊದಲು ಧಾರಾವಾಹಿ ಮಾಡಿದರು. ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು.
ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. ‘ಮೊಗ್ಗಿನ ಮನಸ್ಸು’ ಅವರ ಮೊದಲ ಸಿನಿಮಾ. ಲವ್ ಕಥೆ ಹೊಂದಿದ್ದ ಈ ಚಿತ್ರ ಸೂಪರ್ ಹಿಟ್ ಆಯಿತು. ಆ ಬಳಿಕ ಯಶ್ ಅವರು ವೃತ್ತಿ ಜೀವನದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದರು. ಈಗ ಯಶ್ ಅವರು ಸೂಪರ್ ಸ್ಟಾರ್. ಅವರನ್ನು ತಡೆಯುವವರೇ ಇಲ್ಲ ಎಂದರೂ ತಪ್ಪಾಗಲಾರದು.
ಇದನ್ನೂ ಓದಿ: ‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್ಬೋರ್ಡ್
‘ಕೆಜಿಎಫ್’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕೆಜಿಎಫ್ 2’ ಚಿತ್ರ ಅವರನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಗಿದೆ. ಇನ್ನು, ‘ಟಾಕ್ಸಿಕ್’ ಸಿನಿಮಾ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಎಲ್ಲರಿಗೂ ಮೂಡಿದೆ. ಈ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಟ್ರೇಲರ್ ಅಥವಾ ಟೀಸರ್ ಯಶ್ ಜನ್ಮದಿನವಾದ ಜನವರಿ 8ರಂದು ರಿಲೀಸ್ ಆಗುವ ಸಾಧ್ಯತೆ ಇದೆ. ಮಾರ್ಚ್ 19ರಂದು ಈ ಸಿನಿಮಾ ವಿಶ್ವಾದ್ಯಂತ ತೆರೆಗೆ ಬರಲಿದೆ. ಈ ಚಿತ್ರಕ್ಕೆ ಸಾಕಷ್ಟು ದೊಡ್ಡ ಬಜೆಟ್ ಹೂಡಿಕೆ ಮಾಡಲಾಗಿದೆ ಎಂಬುದು ವಿಶೇಷ. ಕನ್ನಡದ ಕೆವಿಎನ್ ನಿರ್ಮಾಣ ಸಂಸ್ಥೆ ಇದಕ್ಕೆ ಹಣ ಹಾಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



