
ರಾಕಿಂಗ್ ಸ್ಟಾರ್ ಯಶ್ (Yash) ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಕನ್ನಡದ ಮೇಲೆ ಗೌರವ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಆದರೆ, ಅವರು ಕರ್ನಾಟಕದಲ್ಲಿ ನಡೆಯೋ ಎಲ್ಲಾ ಬೆಳವಣಿಗೆ ಬಗ್ಗೆಯೂ ಪ್ರತಿಕ್ರಿಯೆ ನೀಡೋದಿಲ್ಲ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಯಶ್ ಕನ್ನಡ ಮರೆತಿದ್ದಾರೆ ಎಂಬ ಆರೋಪ ಮರೆತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಒಂದೇ ಟ್ವೀಟ್ ಮೂಲಕ ಅವರು ಅದನ್ನು ಸುಳ್ಳು ಮಾಡಿದ್ದಾರೆ.
ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ಸಮಯದಲ್ಲಿ ಅನೇಕರು ಶುಭಾಶಯ ಕೋರುತ್ತಿದ್ದಾರೆ. ಯಶ್ ಕೂಡ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು. ಸಾವಿರ ಭಾಷೆ ನಾಲಿಗೆಯಲ್ಲಿರಲಿ. ಕನ್ನಡ ಭಾಷೆ ಹೃದಯದಲ್ಲಿರಲಿ. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ’ ಎಂದು ಯಶ್ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಸ್ಪುರದ್ರೂಪಿ ಯಶ್ ಅನ್ನು ರಾವಣ ಪಾತ್ರಕ್ಕೆ ಆರಿಸಿದ್ದೇಕೆ? ಸದ್ಗುರು ಪ್ರಶ್ನೆ
ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಹಲವು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ತೆರೆಗೆ ಬರಲಿದೆ. ಯುಗಾದಿ ಪ್ರಯುಕ್ತ ಸಿನಿಮಾ ರಿಲೀಸ್ ಆಗಲಿದೆ.
ಎದೆ ತಟ್ಟಿ ಹೇಳು ನಾ ಭಾರತೀಯನೆಂದು,
ಗರ್ವದಿಂದ ಬಾಳು ನಾ ಕನ್ನಡಿಗನೆಂದು,
ಸಾವಿರ ಭಾಷೆ ನಾಲಿಗೆಯಲ್ಲಿರಲಿ,
ಕನ್ನಡ ಭಾಷೆ ಹೃದಯದಲ್ಲಿರಲಿ,
ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ. 💛❤️ pic.twitter.com/mZNxbu5yVC— Yash (@TheNameIsYash) November 1, 2025
‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿದ್ದವು. ಈ ಸಿನಿಮಾದ ಶೂಟಿಂಗ್ ಬಗ್ಗೆ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್ದಾಸ್ಗೆ ಕಿರಿಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಇದನ್ನು ನಿರ್ಮಾಣ ಸಂಸ್ಥೆ ಕೆವಿಎನ್ ತಳ್ಳಿ ಹಾಕಿದೆ. ಇದು ಕೇವಲ ವಂದತಿ ಎಂದು ಸ್ಪಷ್ಟಪಡಿಸಿದೆ. ಇದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಸಿನಿಮಾ ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.