AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಲ್ಲೇ ‘ರಾಮಾಯಣ’ ಪ್ರಚಾರ; ಯಶ್ ಮಾಸ್ಟರ್ ಪ್ಲ್ಯಾನ್

ರಾಕಿಂಗ್ ಸ್ಟಾರ್ ಯಶ್ ತಮ್ಮ 'ಟಾಕ್ಸಿಕ್' ಸಿನಿಮಾದ ಬಿಡುಗಡೆ ಜೊತೆಗೇ 'ರಾಮಾಯಣ' ಚಿತ್ರದ ಪ್ರಚಾರಕ್ಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಆಗಸ್ಟ್ 26ರಂದು 'ಟಾಕ್ಸಿಕ್' ತೆರೆಕಾಣಲಿದ್ದು, ಅದರೊಂದಿಗೆ 'ರಾಮಾಯಣ'ದ ಟೀಸರ್ ಅಥವಾ ಟ್ರೇಲರ್ ಬಿಡುಗಡೆಯಾಗಲಿದೆ. ಇದು ಯಶ್ ಅಭಿಮಾನಿಗಳಿಗೆ ಡಬಲ್ ಧಮಾಕ ನೀಡಲಿದ್ದು, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಯಶ್‌ನ ಸ್ಮಾರ್ಟ್ ತಂತ್ರವಾಗಿದೆ.

‘ಟಾಕ್ಸಿಕ್’ ಸಿನಿಮಾದಲ್ಲೇ ‘ರಾಮಾಯಣ’ ಪ್ರಚಾರ; ಯಶ್ ಮಾಸ್ಟರ್ ಪ್ಲ್ಯಾನ್
ಯಶ್
ರಾಜೇಶ್ ದುಗ್ಗುಮನೆ
|

Updated on: Jun 23, 2026 | 10:52 AM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ (Toxic) ಆಗಸ್ಟ್ 26 ರಂದು ವಿಶ್ವಾದ್ಯಂತ ಭರ್ಜರಿಯಾಗಿ ತೆರೆಗೆ ಬರುತ್ತಿದೆ. ಈ ಚಿತ್ರದ ಬಿಡುಗಡೆಯ ಜೊತೆಗೆ ಯಶ್ ಅಭಿಮಾನಿಗಳಿಗೆ ಮತ್ತೊಂದು ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಯಶ್ ನಟನೆಯ ಮತ್ತೊಂದು ಬಿಗ್ ಬಜೆಟ್ ಚಿತ್ರ ‘ರಾಮಾಯಣ’ದ ಟೀಸರ್ ಅಥವಾ ಟ್ರೇಲರ್ ಅನ್ನು ‘ಟಾಕ್ಸಿಕ್’ ಸಿನಿಮಾದೊಂದಿಗೆ ಅಟ್ಯಾಚ್ ಮಾಡಿ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ

‘ಟಾಕ್ಸಿಕ್’ ಚಿತ್ರವನ್ನು ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ವೀಕ್ಷಿಸಲಿದ್ದಾರೆ. ಹೀಗಾಗಿ, ಈ ಸಿನಿಮಾದ ಥಿಯೇಟರ್ ರನ್ ಬಳಸಿಕೊಂಡೇ ‘ರಾಮಾಯಣ’ ಚಿತ್ರದ ಪ್ರಚಾರವನ್ನು ಮಾಡಲು ಯಶ್ ಮುಂದಾಗಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾದಲ್ಲಿ ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ಮೇಲೆ ಈಗಾಗಲೇ ದೇಶಾದ್ಯಂತ ಭಾರಿ ಕುತೂಹಲವಿದೆ. ಎರಡೂ ಸಿನಿಮಾಗೆ ಯಶ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿರುವುದರಿಂದ ಅವರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಹೀಗಾಗಿ, ಈ ನಿರ್ಧಾರ ಮಾಡಿದ್ದಾರೆ.

ಆಗಸ್ಟ್ 26ಕ್ಕೆ ಡಬಲ್ ಧಮಾಕಾ

ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26 ರಂದು ಬಿಡುಗಡೆಯಾಗುತ್ತಿರುವುದು ಈಗಾಗಲೇ ಅಧಿಕೃತವಾಗಿದೆ. ಅದೇ ದಿನವೇ ‘ರಾಮಾಯಣ’ದ ಅಪ್‌ಡೇಟ್ ಕೂಡ ಸಿಕ್ಕರೆ ಯಶ್ ಅಭಿಮಾನಿಗಳ ಸಭ್ರಮ ಡಬಲ್ ಆಗುವುದರಲ್ಲಿ ಸಂಶಯವಿಲ್ಲ. ಒಂದೇ ಸಮಯದಲ್ಲಿ ತಮ್ಮ ಎರಡು ದೊಡ್ಡ ಸಿನಿಮಾಗಳನ್ನು ಪ್ರೇಕ್ಷಕರ ಮುಂದೆ ತರುತ್ತಿರುವ ಯಶ್ ಅವರ ಈ ಮಾಸ್ಟರ್ ಪ್ಲಾನ್ ಸದ್ಯ ಸಿನಿಮಾ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರವನ್ನು ತುಳಿಯಲು ಬಾಲಿವುಡ್​​ನಲ್ಲಿ ನಡೀತಿದೆ ಸೀಕ್ರೆಟ್ ಪ್ಲ್ಯಾನ್?

‘ಟಾಕ್ಸಿಕ್’ ಬಗ್ಗೆ

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಜೊತೆ ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಸೇರಿದಂತೆ ಐವರು ನಾಯಕಿಯರು ಇದ್ದಾರೆ. ಈ ಸಿನಿಮಾ ತುಂಬಾನೇ ಪವರ್​​ಫುಲ್ ಆಗಿದೆ ಎಂದು ಊಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್