ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ; ಹೊಸ ಬ್ಯಾನರ್ ಶುರು?

ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಅರುಣ್ ಕುಮಾರ್ ಮತ್ತು ಪುಷ್ಪ ಅವರು 'ಪಿಎ' ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾರೆ. ಪೃಥ್ವಿ ಅಂಬಾರ್ ನಟಿಸುವ ಮೊದಲ ಸಿನಿಮಾಗೆ ಇವರು ಬಂಡವಾಳ ಹೂಡಲಿದ್ದಾರೆ ಎನ್ನಲಾಗಿದೆ. ಯಶ್ ಅವರು ಬಾಲಿವುಡ್‌ನ 'ರಾಮಾಯಣ' ಚಿತ್ರದ ನಿರ್ಮಾಪಕರಾಗಿದ್ದಾರೆ. ಈಗ ಅವರ ಕುಟುಂಬದವರೂ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟಿದ್ದಾರೆ.

ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ; ಹೊಸ ಬ್ಯಾನರ್ ಶುರು?
ಯಶ್

Updated on: Apr 29, 2025 | 7:08 AM

ರಾಕಿಂಗ್ ಸ್ಟಾರ್ ಯಶ್ (Yash) ಅವರು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ ನಿರ್ಮಾಪಕ ಕೂಡ ಹೌದು. ಬಾಲಿವುಡ್​ನ ‘ರಾಮಾಯಣ’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗುವ ಹಂತಕ್ಕೆ ಅವರು ಬೆಳೆದಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಅವರು ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡುತ್ತಾ ಇದ್ದಾರೆ. ಈಗ ಅವರ ಕುಟುಂಬದವರು ಕೂಡ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಯಶ್ ಬಳಿಕ ಅವರ ತಾಯಿ ಪುಷ್ಪ ಅವರು ಹಲವು ಸಿನಿಮಾಗಳನ್ನು ತಯಾರು ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ. ಸ್ಯಾಂಡಲ್​ವುಡ್​ನಲ್ಲಿ ಪಿಎ (PA) ಅನ್ನೋ ಬ್ಯಾನರ್ ಹುಟ್ಟಿಕೊಂಡಿದೆ. ಸಿನಿಮಾ ನಿರ್ಮಾಣಕ್ಕಾಗಿ ಹುಟ್ಟಿಕೊಂಡ ಹೊಸ ಬ್ಯಾನರ್ ಇದಾಗಿದೆ. ಈ ಬ್ಯಾನರ್ ವಿಸ್ತೃತ ರೂಪದ ಬಗ್ಗೆ ಕುತೂಹಲ ಮೂಡಿದೆ.

ಪಿಎ ಎಂದರೆ ಪುಷ್ಪ ಹಾಗೆ ಅರುಣ್ ಕುಮಾರ್ ಎನ್ನುವ ಮಾಹಿತಿ ಇದೆ. ಇದು ಯಶ್ ತಂದೆ-ತಾಯಿ ಹೆಸರು. ಈ ಕಾರಣದಿಂದಲೇ ಬ್ಯಾನರ್​ಗೆ ‘ಪಿಎ’ ಎಂದು ಇಡಲಾಗಿದೆ ಎನ್ನಲಾಗುತ್ತಿದೆ. ಪೃಥ್ವಿ ಅಂಬಾರ್ ನಾಯಕನಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಯಶ್ ತಾಯಿ ನಿರ್ಮಾಣ ಸಂಸ್ಥೆ ಬಗ್ಗೆ ಸದ್ಯದಲ್ಲಿಯೇ ಅಧಿಕೃತ ಮಾಹಿತಿ ಹೊರಬೀಳಲಿದೆ.

ಇದನ್ನೂ ಓದಿ
ಇಡಿ ವಿಚಾರಣೆಗೆ ಹಾಜರಿ ಹಾಕಲ್ಲ ಮಹೇಶ್ ಬಾಬು; ಕಾರಣ ಇಲ್ಲಿದೆ
ಉಗ್ರರ ಉದ್ದೇಶ ಹಾಳು ಮಾಡಲು ಕಾಶ್ಮೀರಕ್ಕೆ ಹೋದ ನಟ ಅತುಲ್ ಕುಲಕರ್ಣಿ
ನಾನಿಗೆ ಕನ್ನಡ ಪಾಠ ಮಾಡಿದ ಶ್ರೀನಿಧಿ ಶೆಟ್ಟಿ; ಎಷ್ಟು ಕ್ಯೂಟ್ ನೋಡಿ
ಮುಂಜಾನೆ ಎದ್ದು ತಮ್ಮದೇ ಮೂತ್ರ ಕುಡಿಯುತ್ತಾರೆ ನಟ ಪರೇಶ್ ರಾವಲ್

ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ನಟಿ. ಅವರು ಕನ್ನಡದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಪತಿಯ ವೃತ್ತಿ ಜೀವನಕ್ಕೆ ಬೆಂಬಲ ನೀಡುತ್ತಿದ್ದಾರೆ. ಅದೇ ರೀತಿ ಈಗ ಯಶ್ ಕುಟುಂಬದ ಮತ್ತಿಬ್ಬರು ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ.

ಇದನ್ನೂ ಓದಿ: ಶ್ರೀನಿಧಿ ಶೆಟ್ಟಿ ಹಾಗೂ ಯಶ್ ಬಗ್ಗೆ ತಪ್ಪು ತಿಳಿದುಕೊಂಡಿದ್ದ ಫ್ಯಾನ್ಸ್; ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಟಿ  

ಯಶ್ ಅವರ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ‘ರಾಮಾಯಣ’ ಸಿನಿಮಾ ಕೆಲಸಗಳು ಇತ್ತೀಚೆಗೆ ಆರಂಭ ಆದವು. ಅದಕ್ಕೂ ಮೊದಲು ಅವರು ಮಧ್ಯೆ ಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಿ ಬಂದರು. ಈ ಸಂದರ್ಭದ ವಿಡಿಯೋ ಹಾಗೂ ಫೋಟೋ ವೈರಲ್ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.