ಯಶ್​ಗೆ ಕನ್ನಡದಲ್ಲೇ ಪ್ರಶ್ನೆ ಕೇಳಿದ ಮುಂಬೈ ವ್ಯಕ್ತಿ; ರಾಕಿಂಗ್ ಸ್ಟಾರ್ ಉತ್ತರ ಹೇಗಿತ್ತು?

ಮುಂಬೈನಲ್ಲಿ 'ಟಾಕ್ಸಿಕ್' ಚಿತ್ರದ ಚಿತ್ರೀಕರಣದ ವೇಳೆ, ಯಶ್ ಅವರನ್ನು ಕನ್ನಡದಲ್ಲಿ ಮಾತನಾಡಿಸಿದ ವ್ಯಕ್ತಿಯೊಬ್ಬರಿಗೆ ಅವರು ಸಿಹಿಯಾಗಿ ಉತ್ತರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಕೂಡ ನಟಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ.

ಯಶ್​ಗೆ ಕನ್ನಡದಲ್ಲೇ ಪ್ರಶ್ನೆ ಕೇಳಿದ ಮುಂಬೈ ವ್ಯಕ್ತಿ; ರಾಕಿಂಗ್ ಸ್ಟಾರ್ ಉತ್ತರ ಹೇಗಿತ್ತು?
ಯಶ್
Follow us
ರಾಜೇಶ್ ದುಗ್ಗುಮನೆ
|

Updated on:Nov 11, 2024 | 7:01 AM

ನಟ ಯಶ್ ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್. ರಾಷ್ಟ್ರ ಮಟ್ಟದಲ್ಲಿ ಅವರಿಗೆ ಬೇಡಿಕೆ ಇದೆ. ಮುಂಬೈಗೆ ಹೋದರೆ ಅವರನ್ನು ಗುರುತಿಸುತ್ತಾರೆ. ಪಾಪರಾಜಿಗಳು ಯಶ್ ಫೋಟೋ ತೆಗೆಯಲು ಮುಗಿಬೀಳುತ್ತಾರೆ. ಇತ್ತೀಚೆಗೆ ಅವರು ‘ಟಾಕ್ಸಿಕ್’ ಸಿನಿಮಾ ಶೂಟ್​ಗೆ ಮುಂಬೈಗೆ ತೆರಳಿದ್ದರು. ಈ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು ಕನ್ನಡದಲ್ಲೇ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಾಕಿಂಗ್ ಸ್ಟಾರ್ ಉತ್ತರ ಸಖತ್ ಸ್ವೀಟ್ ಆಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಕಿಂಗ್ ಸ್ಟಾರ್ ಯಶ್ ಅವರಿಗೆ ಕನ್ನಡದ ಮೇಲೆ ಸಾಕಷ್ಟು ಪ್ರೀತಿ ಇದೆ. ಮುಂಬೈಗೆ ತೆರಳಿದಾಗ ಅವರನ್ನು ಕನ್ನಡದಲ್ಲಿ ಯಾರಾದರೂ ಮಾತನಾಡಿಸಿದರೆ ಅವರು ಪ್ರೀತಿಯಿಂದ ಉತ್ತರ ನೀಡುತ್ತಾರೆ. ಈಗ ಅವರು ಮುಂಬೈನಲ್ಲಿದ್ದಾರೆ. ‘ಟಾಕ್ಸಿಕ್​’ ಸಿನಿಮಾ ಶೂಟಿಂಗ್ ಸೆಟ್​ಗೆ ಹೋಗಲು ಬೋಟ್ ಏರಿದ್ದಾರೆ. ಈ ವೇಳೆ ಅವರನ್ನು ಅಲ್ಲಿನ ವ್ಯಕ್ತಿ ಕನ್ನಡದಲ್ಲಿ ಮಾತನಾಡಿಸಲು ಪ್ರಯತ್ನಿಸಿದ್ದಾರೆ.

‘ಯಶ್, ಯಶ್..’ ಎಂದು ಅನೇಕರು ಕರೆದಿದ್ದಾರೆ. ಆದರೆ, ಯಾರೊಬ್ಬರಿಗೂ ಯಶ್ ಅವರು ಪ್ರತಿಕ್ರಿಯೆ ನೀಡಲಿಲ್ಲ. ಆದರೆ, ಅಲ್ಲಿದ್ದ ವ್ಯಕ್ತಿ, ‘ಅಣ್ಣ ಹೇಗಿದ್ದೀರಾ’ ಎಂದು ಕನ್ನಡದಲ್ಲೇ ಮಾತನಾಡಿದ್ದಾರೆ. ಅವರು ಪ್ರಶ್ನೆ ಕೇಳಿದ ಶೈಲಿಯಲ್ಲೇ ಅವರು ಕನ್ನಡದವರಲ್ಲ ಎಂಬುದು ಸ್ಪಷ್ಟವಾಗುತ್ತದೆ. ಇದಕ್ಕೆ ಯಶ್ ಉತ್ತರಿಸಿದ್ದಾರೆ. ‘ನಾವು ಚೆನ್ನಾಗಿದೀವಿ, ನೀವು ಹೇಗಿದೀರಾ’ ಎಂದು ಉತ್ತರಿಸಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.

ಯಶ್ ಅವರು ಮುಖಕ್ಕೆ ಮಾಸ್ಕ್ ಹಾಕಿದ್ದರು. ಅದನ್ನು ತೆಗೆಯುವಂತೆ ಯಶ್​ಗೆ ಪದೇ ಪದೇ ಬಂದಿದೆ. ‘ಮಾಸ್ಕ್ ತೆಗಿ ಅಣ್ಣಾ’ ಎಂದು ಕೇಳಲಾಗಿದೆ. ಆದರೆ, ಧೂಳಿನ ಕಾರಣಕ್ಕೆ ಯಶ್ ಅವರು ಮಾಸ್ಕ್ ತೆಗೆಯಲಿಲ್ಲ. ಯಶ್ ಅವರ ಸುತ್ತ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಇದ್ದರು.

ಇದನ್ನೂ ಓದಿ:‘ಕೋಟಿ ಖರ್ಚಾದರೂ ಉಳಿಸಿಕೊಳ್ತೀನಿ ಅಂದ್ರು’; ಯಶ್ ಸಹಾಯ ನೆನೆದು ಭಾವುಕರಾದ ‘ಕೆಜಿಎಫ್’ ಚಾಚಾ

ಯಶ್ ಜೊತೆ ಕಿಯಾರಾ ಅಡ್ವಾಣಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಈ ಚಿತ್ರದಲ್ಲಿ ನಟಿಸುತ್ತಿರುವುದ ಖಚಿತವಾಗಿದೆ. ಈ ಸಿನಿಮಾ ಮೂಲಕ ಕಿಯಾರಾ ಅವರು ಕನ್ನಡಕ್ಕೆ ಕಾಲಿಟ್ಟಂತೆ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Mon, 11 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ