AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic Movie Release Postponed: ‘ತಾಳ್ಮೆಯಿಂದ ಇರಿ’; ‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಕಾರಣ ಬಿಚ್ಚಿಟ್ಟ ಯಶ್

ಟಾಕ್ಸಿಕ್ ಸಿನಿಮಾ ರಿಲೀಸ್​ ಮುಂದಕ್ಕೆ: ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಜೂನ್ 4ಕ್ಕೆ ನಿಗದಿಯಾಗಿದ್ದ ಬಿಡುಗಡೆಯನ್ನು ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬಿಡುಗಡೆ ಮಾಡುವ ಸಲುವಾಗಿ ಮುಂದಕ್ಕೆ ಹಾಕಲಾಗಿದೆ. 'ಸಿನಿಮಾ ಕಾನ್'ನಲ್ಲಿ ಸಿಕ್ಕ ಪ್ರತಿಕ್ರಿಯೆಯಿಂದ ಯಶ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅಭಿಮಾನಿಗಳಿಗೆ ನಿರಾಸೆಯಾಗಿದ್ದರೂ, ವಿಶ್ವಮಟ್ಟದ ಸಿನಿಮಾವನ್ನು ನೀಡುವ ಭರವಸೆ ನೀಡಿದ್ದಾರೆ.

Toxic Movie Release Postponed: ‘ತಾಳ್ಮೆಯಿಂದ ಇರಿ’; ‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಕಾರಣ ಬಿಚ್ಚಿಟ್ಟ ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on:Apr 29, 2026 | 10:57 AM

Share

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ಬ್ಯಾಡ್​​ ನ್ಯೂಸ್ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್​ ಮತ್ತೆ ಮುಂದಕ್ಕೆ ಹೋಗಲಿದೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಅದು ನಿಜವಾಗಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. ಇದು ಫ್ತಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ.

ದಿನಾಂಕ ಬದಲಾವಣೆಗೆ ಕಾರಣವೇನು?

ಇತ್ತೀಚೆಗೆ ನಡೆದ ‘ಸಿನಿಮಾ ಕಾನ್’ (CinemaCon) ಅಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಜಾಗತಿಕ ಮಟ್ಟದ ವಿತರಕರಿಂದ ಸಿನಿಮಾಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆಯಂತೆ. ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲು ಭರ್ಜರಿ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ, ಚಿತ್ರತಂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿಕೊಳ್ಳಲು ನಿರ್ಧರಿಸಿದೆ. ಸಿನಿಮಾವನ್ನು ಕೇವಲ ಭಾರತಕ್ಕೆ ಸೀಮಿತಗೊಳಿಸದೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಅತಿ ದೊಡ್ಡ ಮಟ್ಟಕ್ಕೆ ತಲುಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯಶ್ ತಿಳಿಸಿದ್ದಾರೆ.

View this post on Instagram

A post shared by Yash (@thenameisyash)

‘ಟಾಕ್ಸಿಕ್ ನನ್ನ ಪಾಲಿಗೆ ಒಂದು ವಿಶೇಷ ಪ್ರಯಾಣ. ಸಿನಿಮಾ ಕಾನ್‌ನಲ್ಲಿ ವ್ಯಕ್ತವಾದ ಜಾಗತಿಕ ಮಟ್ಟದ ಪ್ರತಿಕ್ರಿಯೆ ಈ ಚಿತ್ರಕ್ಕೆ ವಿಶ್ವಮಟ್ಟದಲ್ಲಿ ಸಿನಿಮಾಗೆ ದೊಡ್ಡ ವೇದಿಕೆ ಬೇಕು ಎಂಬ ನಮ್ಮ ನಂಬಿಕೆಯನ್ನು ಹೆಚ್ಚಿಸಿದೆ. ಭಾರತೀಯ ಸಿನಿಮಾ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಈ ಸಮಯದಲ್ಲಿ, ಚಿತ್ರವನ್ನು ಅತ್ಯಂತ ಪ್ರಭಾವಶಾಲಿಯಾಗಿ ಪ್ರೇಕ್ಷಕರ ಮುಂದೆ ತರುವುದು ನಮ್ಮ ಜವಾಬ್ದಾರಿ. ಹೀಗಾಗಿ ಬಿಡುಗಡೆಯ ದಿನಾಂಕವನ್ನು ಬದಲಿಸಿದ್ದೇವೆ. ತಾಳ್ಮೆಯಿಂದ ಕಾಯುತ್ತಿರುವ ಅಭಿಮಾನಿಗಳಿಗೆ ನಾವು ಹೆಮ್ಮೆ ಪಡುವಂತಹ ಚಿತ್ರವನ್ನು ನೀಡುತ್ತೇವೆ’ ಎಂದು ಯಶ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್

ಗೀತು ಮೋಹನ್ ದಾಸ್ ಅವರು ‘ಟಾಕ್ಸಿಕ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಮೊದಲಾದವರು ನಟಿಸಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕ ಕಾಲಕ್ಕೆ ಸಿನಿಮಾ ಚಿತ್ರೀಕರಣಗೊಂಡಿದ್ದು, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಆಗಲಿದೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ, ಜಾಗತಿಕ ಮಟ್ಟದ ವಿತರಣೆ ಮತ್ತು ಅಂತರಾಷ್ಟ್ರೀಯ ಸಹಭಾಗಿತ್ವದ ಮೇಲೆ ಗಮನ ಹರಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:48 am, Wed, 29 April 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ