AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಸಂಗೀತ ಹಕ್ಕುಗಳು 'ಧುರಂಧರ್ 2' ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟವಾಗಿವೆ. ಜೀ ಮ್ಯೂಸಿಕ್ 42 ಕೋಟಿ ರೂ.ಗಳಿಗೆ ‘ಟಾಕ್ಸಿಕ್’ ಹಕ್ಕುಗಳನ್ನು ಖರೀದಿಸಿದೆ. ರವಿ ಬಸ್ರೂರು ಸೇರಿ ಐವರು ಸಂಗೀತ ನಿರ್ದೇಶಕರು ಕೆಲಸ ಮಾಡಿರುವುದು ಹೈಪ್ ಹೆಚ್ಚಿಸಿದೆ. ವಿಶಾಲ್ ಮಿಶ್ರಾ, ತನಿಷ್ಕ್ ಬಾಗ್ಚಿ ಅವರಂತಹ ಬಾಲಿವುಡ್ ಸಂಗೀತ ನಿರ್ದೇಶಕರ ಕೊಡುಗೆಯೂ ಇದ್ದು, ಸ್ಯಾಂಡಲ್​ವುಡ್​ಗೆ ಇದು ದೊಡ್ಡ ಗೆಲುವು.

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ
ಯಶ್-ರಣವೀರ್
ರಾಜೇಶ್ ದುಗ್ಗುಮನೆ
|

Updated on: Feb 23, 2026 | 9:25 AM

Share

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ. ರವಿ ಬಸ್ರೂರು ಜೊತೆ ಸಿನಿಮಾದಲ್ಲಿ ಒಟ್ಟೂ ಐದು ಮ್ಯೂಸಿಕ್ ಡೈರೆಕ್ಟರ್​​​ಗಳು ಕೆಲಸ ಮಾಡಿದ್ದಾರೆ! ಸಿನಿಮಾದ ಮೆರುಗು ಹೆಚ್ಚಿಸಲು ಐವರು ಪ್ರತಿಭಾವಂತ ಸಂಗೀತ ನಿರ್ದೇಶಕರ ಸಮಾಗಮ ಆಗಿದೆ. ಈ ಚಿತ್ರದಲ್ಲಿ ಒಟ್ಟು 6 ಹಾಡುಗಳು ಇರಲಿವೆ.

ಇದನ್ನೂ ಓದಿ: ‘ಧುರಂಧರ್ 2 vs ಟಾಕ್ಸಿಕ್’ ಒಬ್ಬರ ಹೊಟ್ಟೆ ಇನ್ನೊಬ್ಬರು ಹೊಡೆದಂತೆ: ನಿರ್ದೇಶಕ ಬೇಸರ

ಈ ಕಾರಣದಿಂದ ಸಿನಿಮಾ ಹಾಡಿನ ಹಕ್ಕನ್ನು 42 ಕೋಟಿ ರೂಪಾಯಿಗೆ ಜೀ ಮ್ಯೂಸಿಕ್ ಖರೀದಿ ಮಾಡಿದೆ. ‘ಧುರಂಧರ್ 2’ ಹಾಡಿನ ಹಕ್ಕು 27 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಮೊದಲ ಭಾಗದ ಹಾಡುಗಳು ಸೂಪರ್ ಹಿಟ್ ಆದ ಬಳಿಕವೂ ಕೇವಲ 27 ಕೋಟಿ ರೂಪಾಯಿಗೆ ಇಷ್ಟು ಕಡಿಮೆ ಮೊತ್ತದಲ್ಲಿ ಹಾಡನ್ನು ಖರೀದಿ ಮಾಡಲಾಗಿದೆ. ಅಂದರೆ ‘ಟಾಕ್ಸಿಕ್’ ಚಿತ್ರಕ್ಕೆ ಹೆಚ್ಚುವರಿಯಾಗಿ 15 ಕೋಟಿ ರೂಪಾಯಿ ಸಿಕ್ಕಿದೆ.

‘ಟಾಕ್ಸಿಕ್​’ನಲ್ಲಿ ಬಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ, ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ಈ ಎಲ್ಲ ಪ್ರತಿಭಾವಂತರ ಸಂಗಮ ಆಗಿರುವುದರಿಂದ ‘ಟಾಕ್ಸಿಕ್’ ಸಿನಿಮಾದ ಹಾಡುಗಳ ಮೇಲೆ ಹೈಪ್ ಹೆಚ್ಚಾಗಿದೆ. ರವಿ ಬಸ್ರೂರು ಅವರು ಹಿನ್ನೆಲೆ ಸಂಗೀತದ ಜತೆಗೆ ಕೇವಲ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ