AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್​​ಪ್ರೈಸ್ ಕೊಟ್ಟ ಯಶ್

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟೀಸರ್ ಫೆಬ್ರವರಿ 20ರಂದು ಬಿಡುಗಡೆಯಾಗಲಿದೆ. ಈ ಹೊಸ ಟೀಸರ್ ಚಿತ್ರದ ಮೇಲಿನ ಅಭಿಮಾನಿಗಳ ಕ್ರೇಜ್ ಹೆಚ್ಚಿಸಲಿದೆ. ರೆಟ್ರೋ ಶೈಲಿಯ ಈ ಚಿತ್ರದ ಕುರಿತು ಸಾಕಷ್ಟು ಕುತೂಹಲ ಮೂಡಿಸಿದೆ. ಕಿಯಾರಾ ಅಡ್ವಾಣಿ, ನಯನತಾರಾ ತಾರಾಗಣದಲ್ಲಿರುವ 'ಟಾಕ್ಸಿಕ್' ಮಾರ್ಚ್ 19ಕ್ಕೆ ತೆರೆಗೆ ಬರಲಿದೆ.

‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್​​ಪ್ರೈಸ್ ಕೊಟ್ಟ ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on: Feb 19, 2026 | 11:53 AM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಎಲ್ಲಾ ಪಾತ್ರಗಳ ಪರಿಚಯವನ್ನು ತಂಡದವರು ಮಾಡಿದ್ದರು. ಈಗ ಸಿನಿಮಾದ ಟೀಸರ್ ರಿಲೀಸ್ ಮಾಡುವ ಸಮಯ. ಫೆಬ್ರವರಿ 20ರ ಬೆಳಿಗ್ಗೆ 9.35ಕ್ಕೆ ಟೀಸರ್ ಬಿಡುಗಡೆ ಕಾಣಲಿದೆ. ಈ ಟೀಸರ್ ರಿಲೀಸ್ ಆದ ಬಳಿಕ ಸಿನಿಮಾ ಬಗ್ಗೆ ಇರೋ ಕ್ರೇಜ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಇತ್ತೀಚೆಗೆ ಸುದ್ದಿ ಹರಿದಾಡಿದೆ. ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬರಲಿದೆ ಎಂಬ ಮಾಹಿತಿ ಇದೆ. ಅದಕ್ಕೂ ಮೊದಲು ಅಭಿಮಾನಿಗಳಿಗೆ ಸರ್​​ಪ್ರೈಸ್ ಸಿಕ್ಕಿದೆ. ‘ಟಾಕ್ಸಿಕ್’ ಟ್ರೇಲರ್ ರಿಲೀಸ್ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ವಿಷಯ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಈ ಮೊದಲು ‘ಟಾಕ್ಸಿಕ್’ ರಾಯ ಪಾತ್ರ ಪರಿಚಯಿಸೋ ಟೀಸರ್ ರಿಲೀಸ್ ಮಾಡಲಾಗಿತ್ತು. ಟೀಸರ್​​​ನಲ್ಲಿ ಸಾಕಷ್ಟು ಬೋಲ್ಡ್ ದೃಶ್ಯಗಳು ಇದ್ದವು. ಆ ದೃಶ್ಯಗಳ ಕಾರಣಕ್ಕೆ ಟೀಸರ್ ಸಾಕಷ್ಟು ಸದ್ದು ಮಾಡಿತು. ಈಗ ಹೊಸ ಟೀಸರ್ ಮೂಲಕ ಪ್ರೇಕ್ಷಕರ ಎದುರು ಬರಲು ಯಶ್ ರೆಡಿ ಆಗಿದ್ದಾರೆ. ಈ ಟೀಸರ್​​ನಲ್ಲೂ ಬೋಲ್ಡ್ ದೃಶ್ಯಗಳು ಇರುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

‘ಟಾಕ್ಸಿಕ್’ ಸಿನಿಮಾದ ಪ್ರಚಾರ ವೇಗವಾಗಿ ಸಾಗುತ್ತಿಲ್ಲ ಎಂಬ ಬೇಸರ ಅಭಿಮಾನಿಗಳಿಗೆ ಇತ್ತು. ಈಗ ‘ಟೀಸರ್’ ಮೂಲಕ ಸಿನಿಮಾ ಪ್ರಚಾರಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ರಿಲೀಸ್ ಆಗಿರೋ ಪೋಸ್ಟರ್​​ನಲ್ಲಿ ರಿಲೀಸ್ ದಿನಾಂಕದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರೋದು ಖಚಿತವಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ನಾಯಕ. ಗೀತು ಮೋಹನ್​ದಾಸ್ ಅವರು ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಸೇರಿದಂತೆ ಅನೇಕರಿದ್ದಾರೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಟೀಸರ್ ಮೂಲಕ ಅಭಿಮಾನಿಗಳ ಒಂದಷ್ಟು ಪ್ರಶ್ನೆಗೆ ಉತ್ತರ ಸಿಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ