AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡಾಳ ಯೋಗರಾಜ್ ಭಟ್ಟರ ನಿರ್ಮಾಣದ ‘ಉಡಾಳ’ ಮೊದಲ ಹಂತದ ಚಿತ್ರೀಕರಣ

Udala Kannada Movie: ಯೋಗರಾಜ್ ಭಟ್ ಸಹ ನಿರ್ಮಾಣ ಮಾಡಿ ‘ಪದವಿ ಪೂರ್ವ’ ಸಿನಿಮಾದ ನಟ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ‘ಉಡಾಳ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ.

ಉಡಾಳ ಯೋಗರಾಜ್ ಭಟ್ಟರ ನಿರ್ಮಾಣದ ‘ಉಡಾಳ’ ಮೊದಲ ಹಂತದ ಚಿತ್ರೀಕರಣ
ಮಂಜುನಾಥ ಸಿ.
|

Updated on: Mar 23, 2024 | 11:20 PM

Share

ಯೋಗರಾಜ್ ಭಟ್ಟರ (Yogaraj Bhatt) ಸಿನಿಮಾಗಳ ನಾಯಕ ಸಾಮಾನ್ಯವಾಗಿ ತರ್ಲೆ ವ್ಯಕ್ತಿತ್ವದವನಾಗಿರುತ್ತಾನೆ. ಹಾಸ್ಯ, ವ್ಯಂಗ್ಯ, ಕೀಟಲೆ ತರ್ಲೆ ಒಟ್ಟಾರೆ ಒಂದು ಉಡಾಳತನ ಆತನ ವ್ಯಕ್ತಿತ್ವದಲ್ಲಿರುತ್ತದೆ. ಇದೀಗ ಇದೇ ಉಡಾಳತನವನ್ನೇ ಇಟ್ಟುಕೊಂಡು ಸಿನಿಮಾ ಒಂದನ್ನು ನಿರ್ಮಿಸುತ್ತಿದ್ದಾರೆ ಭಟ್ಟರು. ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಮ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ಉಡಾಳ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾದ ಮೊದಲ ಹಂತದ ಚಿತ್ರೀಕರಣ ವಿಜಾಪುರದಲ್ಲಿ ಪೂರ್ಣಗೊಂಡಿದೆ.

ಅಮೋಲ್ ಪಾಟೀಲ್ ‘ಉಡಾಳ’ ಸಿನಿಮಾದ ನಿರ್ದೇಶನದ ಮಾಡಿದ್ದು, ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿದ್ದಾರೆ. ನಾಯಕ ಪೃಥ್ವಿ ಈ ಚಿತ್ರದಲ್ಲಿ ಗೈಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 25 ದಿನಗಳ ಮೊದಲ ಹಂತದ ಚಿತ್ರೀಕರಣದಲ್ಲಿ ಹಾಡು, ನೃತ್ಯ ಹಾಗೂ ಮಾತಿನ ಭಾಗದ ಸನ್ನಿವೇಶಗಳನ್ನು ಚಿತ್ರಿಸಿಕೊಳ್ಳಲಾಗಿದೆ. ಈ ಭಾಗದ ಚಿತ್ರೀಕರಣ ಸಂಪೂರ್ಣ ಬಿಜಾಪುರದಲ್ಲೇ ನಡೆದಿದೆ. ಈಗಾಗಲೇ ಚಿತ್ರದ ಮುಕ್ಕಾಲು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಅಮೋಲ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ:ಯೋಗರಾಜ್ ಭಟ್ಟರ ಸಿನಿಮಾದಲ್ಲಿ ನಟಿಸಿದ್ದ ಚೆಲುವೆ ಈಗ ಅಲ್ಲು ಅರ್ಜುನ್​ಗೆ ನಾಯಕಿ

“ಉಡಾಳ” ಪಕ್ಕಾ ಕಮರ್ಷಿಯಲ್ ಜಾನರ್ ಚಿತ್ರವಾಗಿದೆ. ಲವ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ‌. ಯೋಗರಾಜ್ ಭಟ್ ಅವರ ಜೊತೆಗೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೋಲ್ ಪಾಟೀಲ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ, ಅಮೋಲ್ ಪಾಟೀಲ್ ಬಿಜಾಪುರ ಮೂಲದವರು ಎನ್ನುವುದು ಮತ್ತೊಂದು ವಿಶೇಷ. ಈ ಸಿನಿಮಾ ಸಹ ಉತ್ತರ ಕರ್ನಾಟಕದ ಸೊಗಡನ್ನು ಒಳಗೊಂಡಿರಲಿದೆ.

ತಮ್ಮ ಮೊದಲ ಚಿತ್ರ ‘ಪದವಿಪೂರ್ವ’ ದಲ್ಲೇ ಪೃಥ್ವಿ ಶಾಮನೂರು ಪ್ರೇಕ್ಷಕರ ಮನ ಗೆದ್ದಿದ್ದರು. ಪ್ರಸ್ತುತ ಅವರು ನಾಯಕರಾಗಿ ನಟಿಸುತ್ತಿರುವ ‘ಉಡಾಳ’ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆಯಿದೆ. ಪೃಥ್ವಿ ಶಾಮನೂರು ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಬಲ ರಾಜವಾಡಿ, ಸುಮಿತ್, ಹರೀಶ್ ಹಿರಿಯೂರು, ಮಾಳು ನಿತ್ನಾಳ್, ಪ್ರವೀಣ್ ಗೋಕಾಕ್, ದಯಾನಂದ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಯೋಗರಾಜ್ ಭಟ್ ಅವರು ಚಿತ್ರದ ಹಾಡುಗಳನ್ನು ರಚಿಸಿದ್ದು, ಚೇತನ್ ಡ್ಯಾವಿ ಸಂಗೀತ ನೀಡಿದ್ದಾರೆ. ಶಿವಶಂಕರ್ ನೂರಂಬಡ ಛಾಯಾಗ್ರಹಣ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಮೋಹನ್, ರಘು ಅವರ ನೃತ್ಯ ನಿರ್ದೇಶನ “ಉಡಾಳ” ಚಿತ್ರಕ್ಕಿದೆ. ಇದೇ ವರ್ಷದ ಕೊನೆಯಲ್ಲಿ ಸಿನಿಮಾ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು