‘ನೀವು ನೋಡಿರೋದೇ ಎರಡನೇ ಭಾಗ’; ‘ಕಾಂತಾರ’ ಗುಟ್ಟು ರಿವೀಲ್ ಮಾಡಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ 100 ದಿನಕ್ಕೂ ಹೆಚ್ಚು ದಿನಗಳ ಕಾಲ ಪ್ರದರ್ಶನ ಕಂಡಿದೆ. ಇತ್ತೀಚೆಗೆ ‘ಕಾಂತಾರ’ ಚಿತ್ರದ ಶತದಿನೋತ್ಸವ ಸಮಾರಂಭ ಬೆಂಗಳೂರಿನ ಬಂಟರ ಸಂಘದಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ.

‘ನೀವು ನೋಡಿರೋದೇ ಎರಡನೇ ಭಾಗ’; ‘ಕಾಂತಾರ’ ಗುಟ್ಟು ರಿವೀಲ್ ಮಾಡಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:04 AM

‘ಕಾಂತಾರ’ ಸಿನಿಮಾ (Kantara Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ (Rishab Shetty) ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರಕ್ಕೆ ಎರಡನೇ ಭಾಗ ಬರಲಿದೆ ಎಂಬ ಬಗ್ಗೆ ಚರ್ಚೆ ಆಗುತ್ತಲೇ ಇದೆ. ಈ ವಿಚಾರದಲ್ಲಿ ಈಗ ರಿಷಬ್ ಶೆಟ್ಟಿ ಅವರು ಒಂದು ವಿಚಾರ ರಿವೀಲ್ ಮಾಡಿದ್ದಾರೆ. ‘ಕಾಂತಾರ’ಕ್ಕೆ ಪ್ರಿಕ್ವೆಲ್ ಬರಲಿದೆ ಎಂದು ಅವರು ಹೇಳಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ 100 ದಿನಕ್ಕೂ ಹೆಚ್ಚು ದಿನಗಳ ಕಾಲ ಪ್ರದರ್ಶನ ಕಂಡಿದೆ. ಇತ್ತೀಚೆಗೆ ‘ಕಾಂತಾರ’ ಚಿತ್ರದ ಶತದಿನೋತ್ಸವ ಸಮಾರಂಭ ಬೆಂಗಳೂರಿನ ಬಂಟರ ಸಂಘದಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ. ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕಾರ್ಯಕ್ರಮ ಆಯೋಜಿಸಿದ್ದರು. ‘ಕಾಂತಾರ’ ಚಿತ್ರದ ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಗಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದರು. ಈ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಅವರು ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

‘ಕಾಂತಾರದ ಗೆಲುವು ಖುಷಿ ಕೊಟ್ಟಿದೆ. ಈ ಕಥೆಯನ್ನು ಮೊದಲು ಕಾರ್ತಿಕ್ ಗೌಡ ಅವರ ಹತ್ತಿರ, ನಂತರ ವಿಜಯ್ ಅವರ ಬಳಿ ಹೇಳಿದೆ. ತಕ್ಷಣ ಒಪ್ಪಿಗೆ ನೀಡಿ ನಿರ್ಮಾಣಕ್ಕೆ ಮುಂದಾದರು. ಚಿತ್ರವನ್ನು ನಾನು ಅಂದುಕೊಂಡಂತೆ ತರಲು ಸಂಪೂರ್ಣ ಸಹಕಾರ ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ನಾನು ಆಭಾರಿ’ ಎಂದರು ರಿಷಬ್.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara: ಹಿಂದಿಯಲ್ಲೂ 100 ದಿನ ಪೂರೈಸಿದ ‘ಕಾಂತಾರ’ ಚಿತ್ರ; ರಿಷಬ್​ ಶೆಟ್ಟಿಗೆ ಉತ್ತರ ಭಾರತದಲ್ಲಿ ಭರ್ಜರಿ ಮೆಚ್ಚುಗೆ

‘ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ. ನನ್ನ ಮಡದಿ ಪ್ರಗತಿ ಅವರಿಗೆ ವಿಶೇಷ ಧನ್ಯವಾದ. ‘ಕಾಂತಾರ ಭಾಗ 2’ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದಾರೆ. ನೀವು ನೋಡಿರುವುದೇ ಎರಡನೇ ಪಾರ್ಟ್​. ಮುಂದೆ ಬರೋದು ಈ ಚಿತ್ರದ ಮೊದಲ ಭಾಗ’ ಎಂದು ಮಾಹಿತಿ ನೀಡಿದರು ರಿಷಬ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ