Yours Sincerely Raam: ಆಂಜನೇಯನ ವೇಷ ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್ ಜನ್ಮದಿನದ ಪ್ರಯುಕ್ತ ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಪೋಸ್ಟರ್ ಬಿಡುಗಡೆ ಆಗಿದೆ. ಈ ಪೋಸ್ಟರ್​ನಲ್ಲಿ ಗಣೇಶ್ ಅವರ ಗೆಟಪ್ ತುಂಬ ವಿಶೇಷವಾಗಿದೆ. ಆಂಜನೇಯನಾಗಿ ಅವರು ಕಾಣಿಸಿಕೊಂಡಿದ್ದಾರೆ. ವಿಖ್ಯಾತ್ ನಿರ್ದೇಶನದ ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾ ಈ ವರ್ಷಾಂತ್ಯಕ್ಕೆ ಬಿಡುಗಡೆ ಆಗಲಿದೆ.

Yours Sincerely Raam: ಆಂಜನೇಯನ ವೇಷ ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್
Golden Star Ganesh

Updated on: Jul 02, 2025 | 11:48 AM

ನಟ ಗಣೇಶ್ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಪಿನಾಕ’ ಮತ್ತು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ (Yours Sincerely Raam) ಸಿನಿಮಾಗಳು ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿವೆ. ಇಂದು (ಜುಲೈ 2) ಗೋಲ್ಡನ್ ಸ್ಟಾರ್ ಗಣೇಶ್ ಅವರ ಜನ್ಮದಿನ. ಆ ಪ್ರಯುಕ್ತ ಸಿನಿಮಾ ತಂಡಗಳಿಂದ ವಿಶೇಷ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ‘Yours Sincerely Raam’ ಸಿನಿಮಾದಿಂದ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದರಲ್ಲಿ ಗಣೇಶ್ (Golden Star Ganesh) ಅವರು ಆಂಜನೇಯನ ಗೆಟಪ್ ಧರಿಸಿದ್ದಾರೆ. ಈ ಪೋಸ್ಟರ್ ವೈರಲ್ ಆಗುತ್ತಿದೆ.

‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾದಲ್ಲಿ ಗಣೇಶ್ ಮತ್ತು ರಮೇಶ್ ಅರವಿಂದ್ ಅವರು ಒಟ್ಟಿಗೆ ನಟಿಸುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಎಂಬ ಕಾರಣಕ್ಕೆ ನಿರೀಕ್ಷೆ ಜಾಸ್ತಿ ಇದೆ. ಈ ಸಿನಿಮಾದ ಶೂಟಿಂಗ್ ಬಿರುಸಿನಿಂದ ನಡೆಯುತ್ತಿದೆ. ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಣೇಶ್ ಅವರಿಗೆ ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾ ತಂಡ ವಿಶ್ ಮಾಡಿದೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದುವರೆಗೂ ಗಣೇಶ್ ಅವರು ಈ ರೀತಿಯ ಗೆಟಪ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ತುಂಬ ಕ್ರಿಯೇಟಿವ್ ಆಗಿ ಈ ಪೋಸ್ಟರ್ ಮೂಡಿಬಂದಿದೆ. ಸೈಕಲ್ ಹಿಂಬದಿಯಲ್ಲಿ ಪೋಸ್ಟ್‌ ಮ್ಯಾನ್‌ ಬ್ಯಾಗ್‌ ಧರಿಸಿ ಭಜರಂಗಿ ಕುಳಿತಿದ್ದಾನೆ. ಕೈಯಲ್ಲೊಂದು ಕಾಗದ ಕೂಡ ಇದೆ. ಪೋಸ್ಟರ್ ನೋಡುತ್ತಿದ್ದರೆ ಸಿನಿಮಾ ಬಗ್ಗೆ ಇನ್ನಷ್ಟು ಕುತೂಹಲ ಮೂಡುವಂತಿದೆ.

ಈ ಸಿನಿಮಾಗೆ ವಿಖ್ಯಾತ್ ಎ.ಆರ್. ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ‘ಪುಷ್ಪಕ ವಿಮಾನ’, ‘ಇನ್ಸ್‌ಪೆಕ್ಟರ್ ವಿಕ್ರಮ್’, ‘ಮಾನ್ಸೂನ್ ರಾಗ’ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಅವರು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾದ ಮೂಲಕ ಮೊದಲ ಬಾರಿಗೆ ನಿರ್ದೇಶಕನಾಗಿದ್ದಾರೆ. ಟೈಟಲ್ ಕಾರಣದಿಂದಲೂ ಕೂಡ ಈ ಸಿನಿಮಾ ಗಮನ ಸೆಳೆದಿದೆ.

ಇದನ್ನೂ ಓದಿ: 47ನೇ ವರ್ಷದ ಹುಟ್ಟುಹಬ್ಬ ಆಚರಣೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

‘ಐರಾ ಫಿಲ್ಮ್ಸ್’ ಹಾಗೂ ‘ದಿ ರಾಯಲ ಸ್ಟುಡಿಯೋಸ್’ ಮೂಲಕ ಸತ್ಯ ರಾಯಲ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅದ್ಧೂರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ನವೀನ್ ಕುಮಾರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ, ಹರೀಶ್ ಕೊಮ್ಮೆ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಜೆ. ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕೆ. ಗುಣ ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.